ಟೆಂಡರ್ನಲ್ಲಿ ಭ್ರಷ್ಟಾಚಾರ: ಸಿಇಒ ಅಮಾನತಿಗೆ ಆಗ್ರಹ
Team Udayavani, May 1, 2022, 3:49 PM IST
ಸುರಪುರ: ಕೆಬಿಜೆಎನ್ಎಲ್ ಇಲಾಖೆಯ ವಿವಿಧ ಟೆಂಡರ್ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಈ ಕುರಿತು ತನಿಖೆ ನಡೆಸಿ ಭೀಮರಾಯನ ಗುಡಿಯ ಇಸಿಒ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ದಲಿತ ಸಮಿತಿ (ಭೀಮವಾದ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿದರು.
ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಭೀಮರಾಯ ಸಿಂಧಗೇರಿ ಮಾತನಾಡಿ ಶಹಾಪುರ ತಾಲೂಕಿನ ಬೊಮ್ಮನಳ್ಳಿ ಫಿಲಿಂಗ್ ಟ್ಯಾಂಕ್ ಕಾಮಗಾರಿಯಲ್ಲಿ ಬೋಗಸ್ ನಡೆದಿದೆ. ಅದರಂತೆ ಇತರೆ ಕಾಮಗಾರಿಯಲ್ಲೂ ಬೋಗಸ್ ಮಾಡಲಾಗಿದೆ. ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿ ಮನಸ್ಸೋ ಇಚ್ಛೆ ಎಂಬಂತೆ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ. ಟೆಂಡರ್ ರದ್ದುಪಡಿಸಿ ಪುನಃ ಟೆಂಡರ್ ಕರೆದು ತಮಗೆ ಬೇಕಾದ ಗುತ್ತಿಗೆದಾರರಿಗೆ ಟೆಂಡರ್ ನೀಡಿದ್ದಾರೆ ಎಂದು ದೂರಿದರು.
ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಇಲಾಖೆಯ ಸಿಇಒ ಮತ್ತು ಎಸ್ಇ ಅವರನ್ನು ಅಮಾನತು ಮಾಡಬೇಕು. ನಿರ್ಲಕ್ಷ್ಯ ವಹಿಸಿದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಶಿರಸ್ತೇದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.