![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 22, 2020, 5:24 PM IST
ಯಾದಗಿರಿ: ಜಿಲ್ಲೆಯಲ್ಲಿ ಸೋಮವಾರ ದಿಂದ ಹತ್ತಿ ಖರೀದಿ ಕೇಂದ್ರಗಳು ಹಾಗೂ ನ.30ರಿಂದ ಭತ್ತ ಖರೀದಿಗೆ ನೋಂದಣಿ ಕೇಂದ್ರಗಳು ಆರಂಭಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್ ತಿಳಿಸಿದರು.
ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರೈತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ನಿರ್ದೇಶನ ನೀಡಿರುವಂತೆ ಪ್ರತಿ ಎಕರೆಗೆ ಇದೀಗ 15 ರಿಂದ 40 ಕ್ವಿಂಟಲ್ ಭತ್ತವನ್ನು ಬೆಂಬಲ ಬೆಲೆಯಡಿ ಖರೀದಿಸಲು ನೋಂದಣಿ ಕಾರ್ಯ ಆರಂಭವಾಗಲಿದೆ. ರೈತ ಮುಖಂಡರು 40 ಕ್ವಿಂಟಲ್‌ಗೆ ಬದಲಾಗಿಗರಿಷ್ಠ 100 ಕ್ವಿಂಟಲ್ ಭತ್ತವನ್ನುಖರೀದಿಸಿದರೆ, ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ. ಈ ಹಿಂದೆ 100 ಕ್ವಿಂಟಲ್ ಭತ್ತ ಖರೀದಿಸಲಾಗಿದೆ ಎಂದು ಸಲಹೆ ನೀಡಿರುವುದನ್ನು ಪರಿಗಣಿಸಿ, 100 ಕ್ವಿಂಟಲ್ ಭತ್ತ ಖರೀದಿಸಲು ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಅದರಂತೆ ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ಹೆಚ್ಚಿನ ಖರೀದಿ ಕೇಂದ್ರಗಳ ಅಗತ್ಯವಿದ್ದಲ್ಲಿ ಅವುಗಳನ್ನು ತೆರೆಯಲಾಗುವುದು. ಜಿಲ್ಲೆಯಲ್ಲಿ ನಕಲಿ ಬಿತ್ತನೆ ಬೀಜ ತಡೆಗೆ ಜಿಲ್ಲಾ ಕೃಷಿ ಇಲಾಖೆಯ ಅಧಿಕಾರಿಗಳು ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ನಕಲಿ ಬೀಜ ಮಾರಾಟಗಾರರನ್ನು ಕೂಡಲೇ ಗುರುತಿಸಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಕಂದಾಯ ಇಲಾಖೆಯ ಅಧಿಕಾರಿಗಳ ಸಹಯೋಗದಲ್ಲಿ ನಕಲಿ ಬೀಜ ಮಾರಾಟಗಾರರನ್ನು ಕೂಡಲೇ ಪತ್ತೆ ಹಚ್ಚುವಂತೆ ಅವರು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ತಿಳಿಸಿದರು.
ಜಿಲ್ಲೆಯ ದೂರದ ಪ್ರದೇಶಗಳಿಗೆ ತೆರಳಿ ಪಶುಗಳಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಮೊಬೈಲ್ ಕ್ಲಿನಿಕ್ ಗಳನ್ನು ಉಪಯೋಗಿಸಿಕೊಳ್ಳುವಂತೆ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಜಿಲ್ಲೆಯಲ್ಲಿ 1900 ರೂ.ಗಳನ್ನು ನಿಗದಿ ಪಡಿಸಲಾಗಿದೆ. ರೈತರಲ್ಲಿ ಅದಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಿದ್ದಲ್ಲಿ ಅವರ ವಿರುದ್ಧಕಠಿಣ ಕ್ರಮ ಕೈಗೊಳ್ಳಲಾಗುವುದು. ನಿಗದಿ ಪಡಿಸಿದ ಹಣಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವ ಡೀಲರ್‌ಗಳನ್ನು ಪತ್ತೆ ಮಾಡುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ತಿಳಿಸಿದರು.
ಸಹಾಯಕ ಆಯುಕ್ತ ಶಂಕರ ಸೋಮನಾಳ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾಘವೇಂದ್ರ, ಮಲ್ಲಿಕಾರ್ಜುನ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ರೈತ ಮುಖಂಡರು ಸಭೆಯಲ್ಲಿದ್ದರು.
You seem to have an Ad Blocker on.
To continue reading, please turn it off or whitelist Udayavani.