ಕೃಷಿ-ಉದ್ಯಮದಲ್ಲಿ ದೇಶ ಗಣನೀಯ ಪ್ರಗತಿ: ಸಂಸದ ನಾಯಕ
Team Udayavani, Jun 4, 2022, 3:28 PM IST
ಯಾದಗಿರಿ: 2014ರಿಂದ 2022ರ ಪ್ರಧಾನಿ ನರೇಂದ್ರ ಮೋದಿ ಅವಧಿಯಲ್ಲಿ ಕೇಂದ್ರ ಸರ್ಕಾರ ಹಲವಾರು ಮಹತ್ತರ ದೂರದೃಷ್ಟಿ ಕಾರ್ಯಕ್ರಮಗಳನ್ನು ನೀಡಿದೆ. ಕೃಷಿ, ತೋಟಗಾರಿಕೆ, ಕೈಗಾರಿಕೆ ವಲಯದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಲಾಗಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.
ಇಲ್ಲಿನ ಪತ್ರಿಭಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ. ಕೃಷಿ ಸಮ್ಮಾನ್ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಸುಮಾರು 12 ಕೋಟಿ ರೈತರಿಗೆ 1.82 ಲಕ್ಷ ಕೋಟಿ ರೂ. ನೀಡಲಾಗಿದೆ. ರೈತರ ಬಗ್ಗೆ ಕಾಳಜಿ ವಹಿಸಿ ರೈತರಿಗೆ ಬೆಳೆನಷ್ಟ ಪರಿಹಾರವಾಗಿ 1.15 ಲಕ್ಷ ಕೋಟಿ ರೂ. ಪರಿಹಾರ ನೀಡಲಾಗಿದೆ. ರೈತರು ಪ್ರೀಮಿಯಂನಲ್ಲಿ ಒಟ್ಟು 21,000 ಕೋಟಿ ರೂ. ಠೇವಣಿ ಮಾಡಿದ್ದಾರೆ. ಹೀಗೆ ವಿವಿಧ ಜನಪರ ಕೆಲಸ ಮಾಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜಿಗೆ ಶೇ. 60 ಕೇಂದ್ರ ಹಾಗೂ ಶೇ. 40ರಷ್ಟು ರಾಜ್ಯ ಸರ್ಕಾರದ ಪಾಲಿದೆ. ಶಕ್ತಿನಗರ ಬಳಿ ಕೃಷ್ಣಾ ನದಿಗೆ ಬ್ರಿಜ್ ನಿರ್ಮಾಣಕ್ಕೆ 186 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಒದಗಿಸಿದೆ. ಭಾರತಮಾಲಾ ಯೋಜನೆಯಡಿಯಲ್ಲಿ ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಮಾಡಲಾಗುವುದು ಎಂದರು.
ಯಾದಗಿರಿ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಟೆಂಡರ್‌ಗೆ ಹೋಗಿದೆ. ಯಾದಗಿರಿ, ರಾಯಚೂರು ರೈಲ್ವೆ ಸ್ಟೇಷನ್‌ಗಳಲ್ಲಿ ಲಿಫ್ಟ್ ನಿರ್ಮಾಣಕ್ಕೆ ಕ್ರಮ, ನೀಟ್ ಪರೀಕ್ಷೆ ಬರೆಯಲು ಯಾದಗಿರಿ ಹಾಗೂ ರಾಯಚೂರಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದರು ಹೇಳಿದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಎಡದಂಡೆ ಕಾಲುವೆಯ ಅಗಲೀಕರಣ ಹಾಗೂ ಉಸ್ತುವಾರಿಗಾಗಿ 1,995 ಕೋಟಿ ರೂ. ಹಾಗೂ ಬಲದಂಡೆ ಕಾಲುವೆಗೆ 3,800 ಕೋಟಿ ರೂ. ಮೀಸಲಿಡಲಾಗಿದೆ. ಯಾದಗಿರಿ ಜಿಲ್ಲೆಗೆ ಆರು ಹೊಸ ಆಂಬ್ಯುಲೆನ್ಸ್‌ಗಳನ್ನು ನೀಡಲಾಗಿದೆ. ಗ್ರಾಮ ಸಡಕ್‌ಯೋಜನೆಯಲ್ಲಿ ಜಿಲ್ಲೆಯಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಯಾದಗಿರಿಗೆ 88 ಕೋಟಿ ರೂ. ಹಾಗೂ ರಾಯಚೂರಿಗೆ 77 ರೂ. ಕೋಟಿಯಲ್ಲಿ ಪಿಎಂಜಿಎಸ್‌ವೈ ಯೋಜನೆಯಲ್ಲಿ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ವಿವರಿಸಿದರು.
ಯಾದಗಿರಿಯ ಗ್ರಾಮಗಳಲ್ಲಿ 2000 ಸೋಲಾರ್ ಲೈಟ್ ಹಾಕಲಾಗುವುದು. ಸಂಸದ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಜಿಲ್ಲೆಯ ಕೊಳ್ಳೂರು, ದೇವಾಪುರ ಹಾಗೂ ರಾಯಚೂರು ಜಿಲ್ಲೆಯ ಜಾಹೀರ ವೆಂಕಟರಾಪುರ, ಹೀರಾ ಹಾಗೂ ಮಟಮಾರಿ ಗ್ರಾಮಗಳನ್ನು ಅಭಿವೃದ್ಧಿ ಮಾಡಲಾಗುವುದು ಎಂದರು.
ಜೆಜೆಎಂ ಯೋಜನೆಯಡಿ 1400 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು ಒದಗಿಸಲಾಗಿದೆ. ಕಾಮಗಾರಿ ಟೆಂಡರ್ ಪ್ರಕ್ರಿಯೆಯಲ್ಲಿದೆ. ಕೇಂದ್ರೀಯ ವಿದ್ಯಾಲಯ, ಶಹಾಪುರ ಹಾಗೂ ಸುರಪುರ ನಗರಗಳ ಬೈಪಾಸ್ ಗಳು ಆಗಬೇಕು. ಈ ಕಾಮಗಾರಿಗಳನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಲಾಗುವುದು. ಯಾದಗಿರಿಯಲ್ಲಿ ವಿಭಾಗೀಯ ಕೇಂದ್ರ ಅಂಚೆ ಕಚೇರಿ ಈಗಾಗಲೇ ಸ್ಥಾಪನೆ ಮಾಡಲಾಗಿದೆ ಎಂದು ಹೇಳಿದರು.
ಶಾಸಕ ವೆಂಕಟರೆಡ್ಡಿ ಮುದ್ನಾಳ, ಡಾ| ಶರಣಭೂಪಾಲರೆಡ್ಡಿ, ದೇವೇಂದ್ರನಾಥ ನಾದ್, ಗುರು ಕಾಮಾ, ವಿರೂಪಾಕ್ಷಯ್ಯಸ್ವಾಮಿ ಹೆಡಗಿಮದ್ರಿ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.