ವೃದ್ಧ ಸಾವು-70ಜನರಲ್ಲಿ ಸೋಂಕು
Team Udayavani, Aug 8, 2020, 4:35 PM IST
ಯಾದಗಿರಿ: ಜಿಲ್ಲೆಯಲ್ಲಿ ಸೋಂಕಿನ ಮೂಲವೇ ಪತ್ತೆಯಾಗದವರಲ್ಲಿ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿನಿಂದ ಆ.4ರಂದು ಆಸ್ಪತ್ರೆಗೆ ದಾಖಲಾಗಿದ್ದ 69 ವರ್ಷದ ಪುರುಷ ಪಿ-143562 ಆ.5ರಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಕ್ರೂರಿ ವೈರಸ್ ಅಟ್ಟಹಾಸ ಮುಂದುವರಿಸಿದ್ದು ಮತ್ತೆ 70 ಜನರಲ್ಲಿ ವೈರಸ್ ಹರಡಿದೆ. ಯಾದಗಿರಿ ನಗರ ಮತ್ತು ಗ್ರಾಮೀಣದ 16, ಶಹಾಪುರ ವ್ಯಾಪ್ತಿಯ 5 ಹಾಗೂ 49 ಜನ ಸುರಪುರ ತಾಲೂಕಿನ ವಿವಿಧ ಗ್ರಾಮಗಳ ಜನರಿಗೆ ಸೋಂಕು ಹರಡಿದೆ. ಇಂದಿಗೆ 2770 ಜನರು ಸೋಂಕಿಗೆ ತುತ್ತಾಗಿದ್ದಾರೆ. 235 ಸಂಪರ್ಕಿತರು ಪತ್ತೆ: ಜಿಲ್ಲೆಯಲ್ಲಿ ಶುಕ್ರವಾರ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 136 ಜನರನ್ನು ಪತ್ತೆ ಹಚ್ಚಲಾಗಿದ್ದು, ಒಟ್ಟು 9860 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 99 ಜನರು ಪತ್ತೆಯಾಗಿದ್ದು, ಒಟ್ಟು 11608 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.
ಆರೋಗ್ಯ ಇಲಾಖೆ ಶುಕ್ರವಾರ 274 ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದೆ. 185 ಜನರ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ 259 ಕಂಟೇನ್ಮೆಂಟ್ ಝೋನ್‌ಗಳನ್ನು ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 181 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ 59, ಸುರಪುರ 67 ಜನ ಹಾಗೂ ಬಂದಳ್ಳಿ ಏಕಲವ್ಯ ಕೋವಿಡ್ ಕೇರ್ ಸೆಂಟರ್‌ನಲ್ಲಿ 44 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಎಸ್.ಸೋಮನಾಳ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.