ಒಂದು ಸಾವು-37 ಜನರಲ್ಲಿ ಸೋಂಕು
Team Udayavani, Aug 7, 2020, 3:52 PM IST
ಯಾದಗಿರಿ: ಜಿಲ್ಲೆಯಲ್ಲಿ ಸೋಂಕಿನ ಮೂಲವೇ ಪತ್ತೆಯಾಗದವರಲ್ಲಿ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿನಿಂದ ಜು.25ರಂದು ಆಸ್ಪತ್ರೆಗೆ ದಾಖಲಾಗಿದ್ದ ಗುರುಮಠಕಲ್‌ನ ಲಕ್ಷ್ಮೀ ನಗರದ 82 ವರ್ಷದ ಪುರುಷ ಪಿ-98746 ಆ.5ರಂದು ಮರಣ ಹೊಂದಿದ್ದು, ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ತಲುಪಿದೆ.
ಕ್ರೂರಿ ವೈರಸ್ ಅಟ್ಟಹಾಸ ಮುಂದುವರಿಸಿದ್ದು ಮತ್ತೆ 37 ಜನರಲ್ಲಿ ವೈರಸ್ ಹರಡಿದೆ. ಯಾದಗಿರಿ ನಗರ ಮತ್ತು ಗ್ರಾಮೀಣದ 6, ಶಹಾಪುರ ವ್ಯಾಪ್ತಿಯ 17 ಹಾಗೂ 14 ಜನ ಸುರಪುರ ತಾಲೂಕಿನ ವಿವಿಧ ಗ್ರಾಮಗಳ ಜನರಿಗೆ ಸೋಂಕು ಹರಡಿದೆ. ಇಂದಿಗೆ 2700 ಜನರು ಸೋಂಕಿಗೆ ತುತ್ತಾಗಿದ್ದಾರೆ.
1065 ಸಂಪರ್ಕಿತರು ಪತ್ತೆ: ಜಿಲ್ಲೆಯಲ್ಲಿ ಗುರುವಾರ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 561 ಜನರನ್ನು ಪತ್ತೆ ಹಚ್ಚಲಾಗಿದ್ದು ಒಟ್ಟು 9724 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 504 ಜನರು ಪತ್ತೆಯಾಗಿದ್ದು, ಒಟ್ಟು 11509 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಆರೋಗ್ಯ ಇಲಾಖೆ ಗುರುವಾರ 257 ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದೆ. 195 ಜನರ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ 250 ಕಂಟೇನ್ಮೆಂಟ್ ಝೋನ್‌ಗಳನ್ನು ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 189 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ 56, ಸುರಪುರ 71 ಜನ ಹಾಗೂ ಬಂದಳ್ಳಿ ಏಕಲವ್ಯ ಕೋವಿಡ್ ಕೇರ್ ಸೆಂಟರ್‌ನಲ್ಲಿ 86 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ಪ್ರಭಾರಿ ಎಡಿಸಿ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.