ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ
ಪ್ರತಿಯೊಬ್ಬರು ಕೋವಿಡ್ ನಿಯಮ ಪರಿಪಾಲಿಸುವುದು ಅವಶ್ಯಕವಾಗಿದೆ
Team Udayavani, Apr 20, 2021, 7:10 PM IST
ಸುರಪುರ: ಕೊರೊನಾ ನಿಯಂತ್ರಣಕ್ಕೆ ತಾಲೂಕಿನ ಎಲ್ಲ ಅಧಿಕಾರಿಗಳು ಕೈ ಜೋಡಿಸಬೇಕು. ಸರಕಾರ ನೀಡಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಸೂಚಿಸಿದರು.
ನಗರದ ತಹಶೀಲ್ ಕಚೇರಿಯಲ್ಲಿ ಸೋಮವಾರ ಕೊರೊನಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದೆ. ಈ ಕುರಿತು ಯಾವಬ್ಬ ಅಧಿ ಕಾರಿಯೂ ನಿರ್ಲಕ್ಷ ವಹಿಸುವಂತಿಲ್ಲ. ಪಿಡಿಒಗಳು ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಸಿಪಿಐ ಸಾಹೇಬಗೌಡ ಪೊಲೀಸ್ ಪಾಟೀಲ್ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಕೋವಿಡ್ ನಿಯಮಗಳನ್ನು ಪಾಲಿಸಲು ಗ್ರಾಮ ಪಂಚಾಯತ್ ಪಿಡಿಒಗಳು, ಆಶಾ ಕಾರ್ಯಕರ್ತೆಯರು ತಿಳಿಸಬೇಕು. ಪ್ರತಿಯೊಬ್ಬರು ಕೋವಿಡ್ ನಿಯಮ ಪರಿಪಾಲಿಸುವುದು ಅವಶ್ಯಕವಾಗಿದೆ ಎಂದರು. ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಮಾತನಾಡಿದರು. ಗ್ರಾಪಂ ಪಿಡಿಒ ಮತ್ತು ಕಲ್ಯಾಣ ಮಂಟಪದ ಮಾಲೀಕರು ಇದ್ದರು.
ತರಕಾರಿ ಮಾರುಕಟ್ಟೆ ಸ್ಥಳಾಂತರ
ಕೋವಿಡ್ ಹಿನ್ನೆಲೆ ತರಕಾರಿ ಮಾರುಕಟ್ಟೆಯನ್ನು ಪ್ರಭು ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ನಗರದ ಅನೇಕ ಕಡೆಗಳಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸಬೇಕು. ಹೊಟೇಲ್, ಖಾನಾವಳಿ, ರೆಸ್ಟೋರೆಂಟ್‌ಗಳಲ್ಲಿ ಸ್ಟೀಲ್ ಪ್ಲೆಟ್, ಗ್ಲಾಸ್‌ಗಳ ಬದಲಾಗಿ ಪೇಪರ್ ಗ್ಲಾಸ್, ಪ್ಲೇಟ್ ಉಪಯೋಗಿಸಬೇಕು. ಇಂದಿನಿಂದ ನಿಯಮ ಪಾಲಿಸದವರಿಗೆ ದಂಡ ವಿಧಿಸಲಾಗುವುದು ಎಂದು ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.