ಸ್ವ-ಸಹಾಯ ಸಂಘ ರಚಿಸಿ ಆರ್ಥಿಕ ಪ್ರಗತಿ ಹೊಂದಿ
Team Udayavani, Jun 20, 2018, 5:03 PM IST
ನಾರಾಯಣಪುರ: ಮಹಿಳೆಯರ ಸಬಲಿಕರಣಕ್ಕೆ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ರಚಿಸಿ ಸ್ವಯಂ ಉದ್ಯೋಗಕ್ಕೆ ಪೂರಕವಾದ ಯೋಜನೆ ರೂಪಿಸಿ ತರಬೇತಿನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಾರ್ಯ ಶ್ಲಾಘನೀಯವಾಗಿದೆ ಎಂದು ಪಿಎಸ್‌ಐ ಕೆ.ಎಚ್. ಶಿರೋಮಣಿ ಹೇಳಿದರು.
ಪಟ್ಟಣದ ಹನುಮದೇವರ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ
ಮಂಗಳವಾರ ನಡೆದ ನೂತನ ಮಹಾಲಕ್ಷ್ಮೀ ಮಹಿಳಾ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ ಹಾಗೂ ದಾಖಲಾತಿ ಹಸ್ತಾಂತರ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರದಂತೆ ಎನ್ನುವಂತೆ ಪ್ರತಿ ಮಹಿಳೆ ಶಿಕ್ಷಣವಂತರಾಗುವುದು
ಅವಶ್ಯವಿದೆ. ಈ ನಿಟ್ಟಿನಲ್ಲಿ ಮಹಿಳೆಯರು ಶಿಕ್ಷಣ ಪಡೆದು ಸ್ವ-ಸಹಾಯ ಗುಂಪುಗಳಲ್ಲಿ ಭಾಗಿಯಾಗಿ ಸರ್ಕಾರ
ವಿವಿಧ ಯೋಜನೆಗಳಡಿಯಲ್ಲಿ ದೊರೆಯುವ ಆರ್ಥಿಕ ನೆರವಿನ ಸಹಾಯದೊಂದಿಗೆ ಸ್ವಯಂ ಉದ್ಯೋಗ ಹೊಂದಿ
ಆರ್ಥಿಕವಾಗಿ ಸದೃಢರಾಗಿ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುರಪುರ ಸಮನ್ವಯಾಧಿಕಾರಿ ವಿಶಾಲಾ ಪ್ರಾಸ್ಥಾವಿಕವಾಗಿ
ಮಾತನಾಡಿ, ಇಲ್ಲಿನ 75 ಸ್ವ-ಸಹಾಯ ಗುಂಪುಗಳಲ್ಲಿ ಐದು ಗುಂಪುಗಳನ್ನು ಆಯ್ಕೆ ಮಾಡಿ, ಆರೋಗ್ಯ, ಶಿಕ್ಷಣ, ಸ್ವಯಂ
ಉದ್ಯೋಗ, ಪ್ರತಿಭೆ, ಸರ್ಕಾರದ ಸೌಲಭ್ಯ ಸೇರಿದಂತೆ ಇತರೆ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಸಮಗ್ರ
ಮಾಹಿತಿ ಒದಗಿಸಿ ತರಬೇತಿಗೊಳಿಸಲಾಗುತ್ತದೆ. ಈ ಎಲ್ಲಾ ಯೋಜನೆಗಳ ಸದುಪಯೋಗವನ್ನು ಗುಂಪಿನ ಸದಸ್ಯೆಯರು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ರೇಣುಕಾ ವಹಿಸಿದ್ದರು. ಎಎಸೈ ಕೃಷ್ಣಮೂರ್ತಿ, ನಾಗರಾಜ
ಜೂಗುರ ವೇದಿಕೆ ಮೇಲಿದ್ದರು. ಭೀಮಾಬಾಯಿ ಸಂಗಡಿಗರು ಪ್ರಾರ್ಥಿಸಿದರು. ಸೇವಾ ಪ್ರತಿನಿಧಿ ಸವಿತಾ
ಸ್ವಾಗತಿಸಿದರು. ಕೊಡೇಕಲ್ ವಲಯದ ಮೇಲ್ವಿಚಾರಕ ಶ್ರೀನಿವಾಸ ನಿರೂಪಿಸಿ, ವಂದಿಸಿದರು. ಮಹಿಳಾ ಸ್ವ-ಸಹಾಯ
ಗುಂಪುಗಳ ಸದಸ್ಯೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.