ಕೈ ಟಿಕೆಟ್ ಗಿಟ್ಟಿಸಲು ಪೈಪೋಟಿ-ಬಣಗಳ ಸೃಷ್ಟಿ
Team Udayavani, Mar 26, 2022, 3:26 PM IST
ಯಾದಗಿರಿ: ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ ಯಾದಗಿರಿ ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಜೋರಾಗಿದ್ದು, ಕಾರ್ಯಕರ್ತರನ್ನು ಗೊಂದಲಕ್ಕೀಡು ಮಾಡಿದೆ.
ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕಾದ ಕ್ಷೇತ್ರದ ಕಾಂಗ್ರೆಸ್ ಮುಖಂಡರಿಬ್ಬರು ಬಣ ಸೃಷ್ಟಿಸಿಕೊಂಡು ಟಿಕೆಟ್‌ಗಾಗಿ ಪಕ್ಷದ ಸಂಘಟನೆಯನ್ನೇ ಬುಡಮೇಲಾಗಿಸುತ್ತಿದ್ದು ಪಕ್ಷದ ಇಮೇಜ್‌ಗೆ ಧಕ್ಕೆ ತರುತ್ತಿದ್ದಾರೆಯೇ ಎಂಬ ಪ್ರಶ್ನೆ ಕಾರ್ಯಕರ್ತರನ್ನು ಕಾಡುತ್ತಿದೆ.
ಒಂದೆಡೆ ಹಿರಿಯ ನಾಯಕ ಡಾ|ಮಲ್ಲಿಕಾರ್ಜುನ ಖರ್ಗೆಯವರ ಕಟ್ಟಾ ಬೆಂಬಲಿಗ ಚೆನ್ನಾರೆಡ್ಡಿ ಪಾಟೀಲ ತುನ್ನೂರ ತನ್ನ ಬೆಂಬಲಿಗರೊಂದಿಗೆ ತೆರೆಮರೆಯಲ್ಲೇ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದರೆ ಮತ್ತೂಂದೆಡೆ ಖ್ಯಾತವೈದ್ಯ ಡಾ|ಎಸ್.ಬಿ. ಕಾಮರೆಡ್ಡಿ ದಿಢೀರ್ ಎಂದು ಮೇಕೆದಾಟು ಹೋರಾಟದ ಸಮಯದಲ್ಲಿ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದಲ್ಲದೇ ತಮಗೇ ಟಿಕೆಟ್ ಸಿಗುವುದು ಪಕ್ಕಾ ಎನ್ನುತ್ತಾ ಸಂಘಟನೆಯಲ್ಲಿ ತೊಡಗಿದ್ದಾರೆ. ಇವರಿಬ್ಬರ ಟಿಕೆಟ್ ಗುದ್ದಾಟದ ಮಧ್ಯೆ ಹಲವು ದಿನಗಳಿಂದ ಪಕ್ಷ ಸಂಘಟನೆಯಲ್ಲಿದ್ದ ಜಿಲ್ಲಾ ಘಟಕದ ಮುಖಂಡರು ಗೊಂದಲಕ್ಕೀಡಾಗಿದ್ದಾರೆ.
ಇಬ್ಬರು ರೆಡ್ಡಿ ನಾಯಕರಲ್ಲಿ ಯಾರ ಜೊತೆ ಗುರುತಿಸಿಕೊಳ್ಳಬೇಕು ಎನ್ನುವ ಸಂದಿಗ್ನಕ್ಕೆ ಸಿಲುಕಿದ್ದಾರೆ. ಅಲ್ಲದೇ ಪಕ್ಷ ಸಂಘಟನೆಯಲ್ಲೂ ಹಿಂದಡಿ ಇಡುತ್ತಿದ್ದು ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ. ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಕೈ ಅಭ್ಯರ್ಥಿ ಶಿವಾನಂದ ಪಾಟೀಲ ಗೆಲುವು ಪಕ್ಕಾ ಎನ್ನುವ ಕಾರಣಕ್ಕೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವಿರತ ಶ್ರಮ ಹಾಕಿ ಪ್ರತಿಯೊಂದು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರೂ ಕೇವಲ ಕೆಲವೇ ಮತಗಳ ಅಂತದಲ್ಲಿ ಅಭ್ಯರ್ಥಿ ಸೋತಿದ್ದರು. ಇದಕ್ಕೆ ಯಾದಗಿರಿ ಜಿಲ್ಲೆಯ ರೆಡ್ಡಿ ಕಾಳಗ ಮತ್ತು ವಲಸಿಗ ಮುಖಂಡರ ಅಸಮಾಧಾನವೇ ಕಾರಣ ಎಂಬುದು ತಿಳಿದ ಬಳಿಕ ಜಿಲ್ಲೆಯ ಕೆಲವು ನಾಯಕರನ್ನು ಡಾ|ಖರ್ಗೆ ತರಾಟೆಗೆ ಕೂಡ ತೆಗೆದುಕೊಂಡಿದ್ದರು ಎನ್ನಲಾಗಿದೆ.
ಇಬ್ಬರೂ ರೆಡ್ಡಿಗಳ ಟಿಕೆಟ್ ಕಾಳಗದಲ್ಲಿ ಕಾರ್ಯಕರ್ತರು ಹೈರಾಣಾಗುತ್ತಿದ್ದು, ಯಾದಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗೆ ಅಡ್ಡಿಯಾಗುತ್ತಿದೆ ಎಂದು ಜಿಲ್ಲೆಯ ಹಲವು ಮುಖಂಡರು ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ರಾಜ್ಯಸಭಾ ಸದಸ್ಯ ಡಾ|ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರ ಬಳಿ ನಿಯೋಗ ತೆಗೆದುಕೊಂಡು ಹೋಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.
ವಲಸಿಗರಿಂದ ಧಕ್ಕೆ
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ನಂಬಿಕೆಯಲ್ಲಿ ಡಾ|ಎಸ್.ಬಿ. ಕಾಮರೆಡ್ಡಿ, ಡಾ|ಭೀಮಣ್ಣ ಮೇಟಿ, ಎ.ಸಿ. ಕಾಡ್ಲೂರು ಸೇರಿದಂತೆ ಹಲವು ನಾಯಕರು ಯಾವುದೇ ಸಮಾರಂಭ ಮಾಡದೇ ಬೆಂಗಳೂರಿನಲ್ಲಿ ತಮ್ಮ ತಮ್ಮ ಜನಬಲದೊಂದಿಗೆ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆ ನಂತರ ಸೃಷ್ಟಿಯಾದ ಬಣಗಳಿಂದ ಈಗ ಕ್ಷೇತ್ರದಲ್ಲಿ ಸಂಘಟನೆಗೇ ತೊಡಕಾಗಿದ್ದು ಇವರಲ್ಲಿ ಯಾರೊಂದಿಗೆ ಗುರುತಿಸಿಕೊಳ್ಳುವುದು ಎಂದು ಕಾರ್ಯಕರ್ತರು ಗೊಂದಲದಲ್ಲಿರುವುದು ಮಾತ್ರ ಗುಟ್ಟಾಗಿ ಉಳಿದಿಲ್ಲ.
ಇದನ್ನೂ ಓದಿ:
ಪ್ರತ್ಯೇಕ ಬ್ಯಾನರ್-ಕಟೌಟ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಯಾದಗಿರಿ ಭೇಟಿ ಸಂದರ್ಭ ಸ್ವಾಗತಕ್ಕೆ ಸಜ್ಜಾಗಿದ್ದ ಕಾಂಗ್ರೆಸ್ ಮುಖಂಡರಾದ ಚೆನ್ನಾರೆಡ್ಡಿ ತುನ್ನೂರು ಮತ್ತು ಡಾ|ಎಸ್.ಬಿ. ಕಾಮರೆಡ್ಡಿ ಪ್ರತ್ಯೇಕ ಬ್ಯಾನರ್ ಮತ್ತು ಕಟೌಟ್ ಹಾಕಿದ್ದರು. ಎರಡೂ ಬ್ಯಾನರ್‌ಗಳಲ್ಲೂ ಸ್ಥಳೀಯ ಮುಖಂಡರ ಭಾವಚಿತ್ರ ಇತ್ತು. ಈ ಬ್ಯಾನರ್‌ನಲ್ಲಿರುವ ಮುಖಂಡರು ಯಾರ ಪರವಾಗಿದ್ದಾರೆ ಎನ್ನುವುದು ಕಾರ್ಯಕರ್ತರನ್ನು ಮತ್ತಷ್ಟು ಗೊಂದಲಕ್ಕೀಡು ಮಾಡಿತ್ತು.
ಇತ್ತೀಚೆಗೆ ನಡೆದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಬಹಿರಂಗವಾಗಿಯೇ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದ್ದು, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವಂತೆ ಸೂಚಿಸಿದ್ದಾರೆ. ಆದರೆ ಟಿಕೆಟ್ ಗಿಟ್ಟಿಸುವುದನ್ನೇ ರೆಡ್ಡಿ ಪಡೆಗಳು ಪ್ರತಿಷ್ಠೆಯ ವಿಷಯವನ್ನಾಗಿಸಿಕೊಂಡಿದ್ದು ದಿನೇ ದಿನೇ ಬಣ ರಾಜಕೀಯ ಜೋರಾಗುತ್ತಲೇ ಇದೆ.
ಖರ್ಚು-ವೆಚ್ಚದ ಲೆಕ್ಕಾಚಾರ
ಪಕ್ಷದ ಹಿರಿಯ ನಾಯಕರು ಜಿಲ್ಲೆಗೆ ಆಗಮಿಸುವ ಸಂದರ್ಭ ಯಾರು ಖರ್ಚು ಮಾಡಬೇಕು ಎನ್ನುವ ಗೊಂದಲದೊಂದಿಗೆ ಕಾರ್ಯಕ್ರಮ ನಡೆಯುತ್ತದೆ. ಕೊನೆಗೆ ಯಾವುದೇ ಆಡಂಬರವಿಲ್ಲದೆ ಇದ್ದುದರಲ್ಲಿಯೇ ಮುಗಿಸುವ ಲೆಕ್ಕಾಚಾರಕ್ಕೆ ಜಿಲ್ಲಾ ಮುಖಂಡರು ಮುಂದಾಗುತ್ತಿದ್ದು ಬಣ ರಾಜಕೀಯದ ಮೇಲಾಟ ಸ್ಥಳೀಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಯಾದಗಿರಿ ಕ್ಷೇತ್ರದಲ್ಲಿ ಡಾ|ಮಾಲಕರೆಡ್ಡಿ ಬಿಜೆಪಿ ಸೇರ್ಪಡೆ ಆದಾಗಿನಿಂದ ಕಾಂಗ್ರೆಸ್ ಸಂಘಟನೆ ನಶಿಸುತ್ತಿದೆ. ಈ ಹಂತದಲ್ಲಿ ಟಿಕೆಟ್ ಫೈಟ್ ಶುರುವಾಗಿರುವುದು ಕಾಂಗ್ರೆಸ್‌ಗೆ ಮತ್ತಷ್ಟು ಹಿನ್ನಡೆಯಾಗಿದೆ. ಈ ಬಣ ರಾಜಕಾರಣ, ಗೊಂದಲ ಹೀಗೆ ಮುಂದುವರಿದರೆ ಕ್ಷೇತ್ರ ಕೈ ತಪ್ಪುವ ಸಾಧ್ಯತೆ ಹೆಚ್ಚು ಎಂಬ ಮಾತು ಕೇಳಿಬರುತ್ತಿದೆ.
-ಮಹೇಶ ಕಲಾಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thokottu: ಸ್ಕೂಟರ್ ಪಲ್ಟಿಯಾಗಿ ಸವಾರ ಸಾವು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.