ಬೆಳೆ ಸಮೀಕ್ಷೆ ಶೇ. 100 ಗುರಿ ಸಾಧಿಸಿ: ದೇವಿಕಾ

Team Udayavani, Sep 7, 2020, 5:04 PM IST

ಬೆಳೆ ಸಮೀಕ್ಷೆ ಶೇ. 100 ಗುರಿ ಸಾಧಿಸಿ: ದೇವಿಕಾ

ಸಾಂದರ್ಭಿಕ ಚಿತ್ರ

ಸುರಪುರ: ಸರಕಾರ ನೀಡಿರುವ ಗಡುವಿನಲ್ಲಿ ಬೆಳೆ ಸಮೀಕ್ಷೆ ಗುರಿ ಶೇ.100ರಷ್ಟು ಸಾಧಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ಆರ್‌. ದೇವಿಕಾ ಬೆಳೆ ಸಮೀಕ್ಷೆಗೆ ನೇಮಿಸಿದ ಖಾಸಗಿ ವ್ಯಕ್ತಿ (ಪಿಆರ್‌) ಗಳಿಗೆ ಸೂಚಿಸಿದರು.

ನಗರದ ತಹಶೀಲ್ದಾರ್‌ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 70 ಸಾವಿರ ಎಕರೆ ಭೂಮಿಯಲ್ಲಿ 6 ಸಾವಿರ ಎಕರೆ ಬೆಳೆ ನೋಂದಣಿಯಾಗಿದೆ. ಇದು ತೀರಾ ಕಡಿಮೆ ಸಾಧನೆ ಎಂದು ವಿಷಾದಿಸಿದ ಅವರು, ರೈತರು 2020-21ನೇ ಸಾಲಿನ ಬೆಳೆ ನೋಂದಣಿ ಮೊಬೈಲ್‌ ಆ್ಯಪ್‌ ಡೌನ್‌ಲೌಡ್‌ ಮಾಡಿಕೊಂಡು ಬೆಳೆ ಸಮೀಕ್ಷೆ ಖುದ್ದಾಗಿ ದಾಖಲಿಸಬೇಕು. ಈ ಕುರಿತು ಎಲ್ಲ ಪಿಆರ್‌ ಗಳು ರೈತರಲ್ಲಿ ಜಾಗೃತಿ ಮೂಡಿಸಬೇಕು. ಹೀಗೆ ಮಾಡುವುದರಿಂದ ಸರಕಾರದ ಸೌಲಭ್ಯಗಳು ಸಕಾಲದಲ್ಲಿ ದೊರೆಯುತ್ತವೆ ಎಂದು ತಿಳಿಸಿದರು.

ಕಕ್ಕೇರಾ ಭಾಗದಲ್ಲಿ 19,834 ಎಕರೆ ಬೆಳೆಯಲ್ಲಿ 1,448 ಎಕರೆ ಮಾತ್ರ ಬೆಳೆ ಸಮೀಕ್ಷೆಗೆ ಒಳಪಡಿಸಲಾಗಿದೆ. ಕೆಂಭಾವಿ ಹೋಬಳಿಯಲ್ಲಿ 24,339 ಎಕರೆಯಲ್ಲಿ 1,832 ಎಕರೆ ಬೆಳೆ ನೋಂದಾಯಿಸಲಾಗಿದೆ. ತಾಲೂಕಿನಲ್ಲಿರುವ ಕೃಷಿ ಮತ್ತು ಕಂದಾಯ ಇಲಾಖೆಯ ಪಿಆರ್‌ ಗಳು ಕೆಲಸವೇ ಇಲ್ಲವೆಂದು ನಿಶ್ಚಯಿಸಿಬಿಟ್ಟಿದ್ದಾರೆ. ಇದು ಸರಿಯಲ್ಲ. ಉಳಿದಿರುವ 20 ದಿನದಲ್ಲಿ ಶೇ. 95ರಷ್ಟು ಗುರಿ ತಲುಪಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ತಾಕೀತು ಮಾಡಿದರು. ಉಪ ಕೃಷಿ ನಿರ್ದೇಶಕ ಡಾ| ಬಾಲರಾಜ ರಂಗರಾವ್‌ ಮಾತನಾಡಿ ಮೊಬೈಲ್‌ ಇಲ್ಲದವರ ಫೈಲ್‌ನಿಂದ ಹೆಸರು, ಮೊಬೈಲ್‌, ಸರ್ವೇ ನಂಬರ್‌ ದಾಖಲಿಸಿ ಸಹಿ ಮೂಲಕ ದೃಢೀಕರಣ ಪಡೆಯಬೇಕು. ತೊಂದರೆಯಾದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬೇಕು. ಇಡೀ ಜಿಲ್ಲೆಯಲ್ಲಿ ಶೇ.19 ಗುರಿ ಸಾಧಿಸಲಾಗಿದೆ. ಉಳಿದ ಶೇ. 81 ಗುರಿ ತಲುಪಲು ಪ್ರತಿಯೊಬ್ಬರೂ ಶ್ರಮಿಸಬೇಕು. ಮಾಹಿತಿ ಇಲ್ಲದ ರೈತರಿಗೆ ಮೊಬೈಲ್‌ ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ವರದಿ ದಾಖಲಿಸಿಕೊಳ್ಳುವುದನ್ನು ತಿಳಿಸಿಕೊಡಬೇಕು ಎಂದು ಸಲಹೆ ನೀಡಿದರು.

ಗ್ರೇಡ್‌-2 ತಹಶೀಲ್ದಾರ್‌ ಸೋಪಿಯಾ ಸುಲ್ತಾನ್‌, ಕಂದಾಯ ನಿರೀಕ್ಷಕ ಗುರುಬಸಪ್ಪ, ರಾಜಾ ಸಾಬ್‌, ವಿಠuಲ್‌ ಬಂದಾಳ, ಎಡಿ ಗುರುನಾತ, ಎಒ ಭೀಮರಾಯ, ಪ್ರಕಾಶ, ಗ್ರಾಮಲೆಕ್ಕಿಗರಾದ ಪ್ರದೀಪಕುಮಾರ, ಶಿವಕುಮಾರ, ಮಹೇಂದ್ರ,ಮಲ್ಲಮ್ಮ ಶ್ರೀದೇವಿ, ಸಹಾಯಕ ಕೃಷಿ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.