ಜಿಲ್ಲಾದ್ಯಂತ ರಾತ್ರಿ 8ರಿಂದ ಕರ್ಫ್ಯೂ
Team Udayavani, Jul 1, 2020, 9:10 AM IST
ಯಾದಗಿರಿ: ಜಿಲ್ಲೆಯಲ್ಲಿ 930 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಸೋಂಕು ಹರಡುವಿಕೆ ತಡೆಗಾಗಿ ಸರ್ಕಾರದ ಆದೇಶದಂತೆ ಜಿಲ್ಲಾದ್ಯಂತ ಇನ್ನು ಮುಂದೆ ರಾತ್ರಿ 8 ಗಂಟೆಯಿಂದ ನಸುಕಿನ ಜಾವ 5 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಮತ್ತು ಜು.5ರ ರವಿವಾರದಿಂದ ಆಗಸ್ಟ್ 2ರವರೆಗಿನ ಪ್ರತಿ ರವಿವಾರ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.
ಲಾಕ್‌ಡೌನ್ ಇರುವ ರವಿವಾರಗಳಂದು ಅಗತ್ಯ ಸರಕು, ಸರಂಜಾಮು ಸಾಗಣೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಇನ್ನು ಜಿಲ್ಲೆಯ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ಕಚೇರಿಗಳು, ಮಂಡಳಿಗಳು, ನಿಗಮಗಳು (ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ) ಈಗಿರುವ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ಸೇರಿ ಜು.10ರಿಂದ ಆಗಸ್ಟ್ 8ರವರೆಗಿನ ಪ್ರತಿ ಶನಿವಾರ ಮುಚ್ಚಲ್ಪಡುತ್ತವೆ. ನಿತ್ಯ ರಾತ್ರಿ 8ರಿಂದ ಬೆಳಗ್ಗೆ 5 ಗಂಟೆಯವರೆಗಿನ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಚಟುವಟಿಕೆ ಹೊರತುಪಡಿಸಿ, ಉಳಿದಂತೆ ಸಾರ್ವಜನಿಕರ ಓಡಾಟ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.