ಉದ್ಯೋಗಾಕಾಂಕ್ಷಿಗಳ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ
Team Udayavani, Sep 17, 2019, 3:57 PM IST
ಯಾದಗಿರಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗಾಕಾಂಕ್ಷಿ ಯುವಕರಿಗೆ ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಯುವಕರ ಸಮಸ್ಯೆ ಆಲಿಸಿದರು.
ಯಾದಗಿರಿ: ಉದ್ಯೋಗಾಕಾಂಕ್ಷಿಗಳಿಗೆ ಅವಶ್ಯ ವಿರುವ ಮತ್ತು ಅವರಿಗೆ ಉಪಯೋಗವಾಗುವ ರೀತಿಯಲ್ಲಿ ಕೌಶಲ್ಯಾಧಾರಿತ ತರಬೇತಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಅವಶ್ಯ ಇರುವ ತರಬೇತಿ ಹಾಗೂ ಸ್ಪರ್ಧಾತ್ಮಕ ವಿಷಯಗಳ ಬಗ್ಗೆ ಜಿಲ್ಲೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ವಯಂ ಉದ್ಯೋಗಾಕಾಂಕ್ಷಿಗಳಿಂದ ದೂರವಾಣಿ ಮೂಲಕ ಸಮಸ್ಯೆಗಳನ್ನು ಆಲಿಸಿದ ನಂತರ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯ ಯುವಕ-ಯುವತಿಯರು ಪದವಿ ಪೂರ್ಣಗೊಳಿಸಿದರೂ ಮುಂದೇನು ಎನ್ನುವ ಚಿಂತೆ ಅವರಲ್ಲಿದೆ. ಸರಿಯಾದ ಮಾರ್ಗದರ್ಶನ ಸಿಗುತ್ತಿಲ್ಲ. ಇದರಿಂದ ಅವರ ಮೇಲೆ ಅವರಿಗೆ ಆತ್ಮವಿಶ್ವಾಸ ಇಲ್ಲವಾಗಿದೆ. ಪ್ರತಿಯೊಬ್ಬರಿಗೂ ಉದ್ಯೋಗ ಕೊಡಿಸಲು ಆಗುವುದಿಲ್ಲ. ಆದರೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ನೀಡಲಾಗುತ್ತಿರುವ ವಿವಿಧ ತರಬೇತಿ, ಕೋಚಿಂಗ್‌ಗಳು ಉದ್ಯೋಗಾಕಾಂಕ್ಷಿಗಳನ್ನು ಆಕರ್ಷಿಸಿದರೆ ಅವರ ಬದುಕಿಗೆ ದಾರಿದೀಪವಾಗಬಲ್ಲವು. ಈ ನಿಟ್ಟಿನಲ್ಲಿ ತರಬೇತಿ ನೀಡಲು ನಿರ್ದೇಶಿಸಿದರು.
ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳಲ್ಲಿ ಗ್ರಂಥಾಲಯಕ್ಕೆ ಹೋಗುವ ಮತ್ತು ಓದುವ ಅಭ್ಯಾಸವನ್ನು ರೂಢಿಸಬೇಕು. ಓದುವ ವಿಧಾನವನ್ನು ಹೇಳಿಕೊಡಬೇಕು. ದಿನಪತ್ರಿಕೆಗಳನ್ನು ಓದಲು ತಿಳಿಸಬೇಕು. ತರಬೇತಿಗೆ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ಕೊಡಬೇಕು. ಜಿಲ್ಲೆಯ ಹೆಚ್ಚಿನ ಅಭ್ಯರ್ಥಿಗಳು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅಂತಹವರಿಗೆ ತರಬೇತಿ ಅವಧಿಯಲ್ಲಿ ಉಚಿತ ಬಸ್ ಪಾಸ್, ಊಟದ ವ್ಯವಸ್ಥೆ ಮಾಡಬೇಕು. ಇಲಾಖೆ ಅನುದಾನದಲ್ಲಿ ಕೊಡಲು ಸಾಧ್ಯವಿಲ್ಲದಿದ್ದರೆ ಸಂಘ-ಸಂಸ್ಥೆಗಳು, ದಾನಿಗಳಿಂದ ನೆರವು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಒಟ್ಟು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಂದ ಕರೆಗಳು ಸ್ವೀಕೃತವಾದವು. ಪದವಿ ಪೂರ್ಣಗೊಳಿಸಿದ ಹೆಚ್ಚಿನ ಅಭ್ಯರ್ಥಿಗಳು ಕರೆ ಮಾಡಿದರು. ಸ್ವಯಂ ಉದ್ಯೋಗಕ್ಕೆ ನೆರವು, ಹೈನುಗಾರಿಕೆ, ಕಂಪ್ಯೂಟರ್ ತರಬೇತಿ, ಮೋಟಾರು ವಾಹನ ಚಾಲನಾ ತರಬೇತಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಲುವಾಗಿ ಕೋಚಿಂಗ್ ನೀಡಲು ಕೋರಿದರು. ಎಲ್ಲಾ ಕರೆಗಳನ್ನು ಶಾಂತಚಿತ್ತದಿಂದ ಆಲಿಸಿದ ಜಿಲ್ಲಾಧಿಕಾರಿಗಳು, ಅವರು ಕೇಳುತ್ತಿದ್ದ ಪ್ರಶ್ನೆ, ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಪ್ರತಿಯೊಬ್ಬ ಅಭ್ಯರ್ಥಿಗಳು https://www.kaushalkar.com/>ವೆಬ್‌ಸೈಟ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ತಿಳಿಸಿದರು.
ಕೆಲ ಅಭ್ಯರ್ಥಿಗಳು ಗ್ರಂಥಾಲಯಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬು ದಾಗಿ ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಗ್ರಂಥಾಲಯಗಳ ಸಮಯ ಪಾಲನೆ ಕಡ್ಡಾಯ. ಬೆಳಗ್ಗೆ 9ರಿಂದ 11:00 ಗಂಟೆ ಮತ್ತು ಸಂಜೆ 4ರಿಂದ 6:00 ಗಂಟೆಗೆ ಗ್ರಂಥಾಲಯಗಳನ್ನು ತೆರೆಯಬೇಕು. ಓದುಗರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗುವ ನಿಯತಕಾಲಿಕೆಗಳು, ದಿನಪತ್ರಿಕೆಗಳು, ಪುಸ್ತಕಗಳು ಗ್ರಂಥಾಲಯಗಳಲ್ಲಿ ಇರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾ ಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ, ಜಿಲ್ಲಾ ಪಂಚಾಯಿತಿಯ ಗುರುನಾಥ ಗೌಡಪ್ಪನೋರ್, ಜಿಲ್ಲಾ ಉದ್ಯೋಗಾಧಿಕಾರಿ ಭಾರತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.