ಸುರಪುರ ಸರ್ಕಾರಿ ಆಸ್ಪತ್ರೆಗೆ ಡಿಸಿ ಭೇಟಿ
Team Udayavani, May 15, 2021, 4:01 PM IST
ಯಾದಗಿರಿ: ಕೋವಿಡ್ ಸೋಂಕಿತರಿಗಾಗಿ ಸುರಪುರ ತಾಲೂಕು ಆಸ್ಪತ್ರೆಯಲ್ಲಿನ ಆಮ್ಲಜನಕ ಘಟಕ ಶೀಘ್ರ ಕಾರ್ಯಾರಂಭವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿ ಕಾರಿ ಡಾ| ರಾಗಪ್ರಿಯಾ. ಆರ್ ಸೂಚಿಸಿದರು.
ಸುರಪುರ ತಾಲೂಕು ಆಸ್ಪತ್ರೆಯಲ್ಲಿ ಶುಕ್ರವಾರ ಆಕ್ಸಿಜನ್ ಘಟಕ ವೀಕ್ಷಿಸಿ ಮಾತನಾಡಿದ ಅವರು, ಒಂದು ನಿಮಿಷಕ್ಕೆ 110 ಲೀಟರ್ ಉತ್ಪಾದನೆ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್‌ನ್ನು ಕೋವಿಡ್ ಸೋಂಕಿತರ ಸೇವೆಗೆ ಅಣಿಗೊಳಿಸಬೇಕು ಎಂದು ತಾಂತ್ರಿಕ ವರ್ಗದವರಿಗೆ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆ ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಸ್ವತ್ಛತೆ ಕಾಪಾಡಿಕೊಳ್ಳಬೇಕೆಂದು ಆಸ್ಪತ್ರೆ ಸಿಬ್ಬಂದಿಗೆ ಸೂಚಿಸಿದರು. ರಾಜ್ಯ ವಿಪತ್ತು ಪರಿಹಾರನಿಧಿಯಡಿ ಆಸ್ಪತ್ರೆಗೆ ಬೇಕಾದ ವೈದ್ಯಕೀಯ ಪರಿಕರಗಳನ್ನು ಖರೀದಿಸುವಂತೆ ವೈದ್ಯರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಹಾಜರಿದ್ದ ವೈದ್ಯಾಧಿಕಾರಿ ಡಾ| ಹರ್ಷವರ್ಧನ್ ರಫಗಾರ, ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿನೀಡಿದರು. ಅಲ್ಲದೆ ಆಸ್ಪತ್ರೆಗೆ ನುರಿತ ಸ್ಟಾಪ್‌ನರ್ಸ್‌ಗಳ ಅವಶ್ಯಕತೆಯಿರುವ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಸುರಪುರತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಕಂದಾಯ ನಿರೀಕ್ಷಕ ಗುರುಬಸಪ್ಪ ಸೇರಿದಂತೆಆಸ್ಪತ್ರೆಯ ಸಿಬ್ಬಂದಿ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.