ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ
Team Udayavani, Aug 19, 2017, 4:32 PM IST
ಹುಣಸಗಿ: ಕ್ರೀಡೆಯಲ್ಲಿ ಸೋಲು-ಗೆಲವು ಸಾಮಾನ್ಯ. ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದು ಜಿಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ಹೇಳಿದರು. ಹುಣಸಗಿ ಸಮೀಪದ ವಜ್ಜಲ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹುಣಸಗಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಸಹಕಾರಿ ಆಗುತ್ತದೆ. ಕ್ರೀಡಾಪಟುಗಳು ಕ್ರೀಡಾಮನೋಭಾವದೊಂದಿಗೆ ಆಟವಾಡಬೇಕು ಎಂದರು. ಹಿರಿಯ ಮುಖಂಡ ಸಂಗನಗೌಡ ಪಾಟೀಲ ಮಾತನಾಡಿ, ಕ್ರೀಡೆಯಲ್ಲಿ ಸೋತೆನೆಂಬ ಹತಾಶೆ ಭಾವ ಬೇಡ. ಸೊಲನ್ನು ಗೆಲುವಿನ ಮಟ್ಟಿಲಾಗಿ ಪರಿವರ್ತಿಸಿಕೊಳ್ಳಬೇಕು. ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಂಡು ಸಾಧನೆ ಮಾಡಬೇಕು ಎಂದರು. ಜಿಪಂ ಸದಸ್ಯ ಬಸವರಾಜಸ್ವಾಮಿ ಸ್ಥಾವರಮಠ ಮಾತನಾಡಿ, ಕ್ರೀಡೆ ಜೀವನದ ಅವಿಭಾಜ್ಯ ಅಂಗ. ಆದ್ದರಿಂದ ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಂದರು. ಹಿರಿಯ ಅಧಿಕಾರಿ ರಾಮಾಂಜನೇಯ, ಗ್ರಾಪಂ ಅಧ್ಯಕ್ಷ ಮಲ್ಲಮ್ಮ ಚಂದ್ರಶೇಖರ ಸಗರ, ತಾಪಂ ಸದಸ್ಯ ಭೀಮರಾಯ ದೊಡ್ಡಮನಿ, ಈಶ್ವರಪ್ಪ ಶ್ರೀಗಿರಿ, ಭೂ ನ್ಯಾಯಮಂಡಳಿ ಸದಸ್ಯ ಸಂಗನಗೌಡ ಪೊಲೀಸ್‌ಪಾಟೀಲ, ರಾಮನಗೌಡ ಪೊಲೀಸ್‌ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡೂರ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಬಿ.ಆರ್. ಪೊಲೀಸ್ ಪಾಟೀಲ, ಎಸ್ ಡಿಎಂಸಿ ಅಧ್ಯಕ್ಷ ಬಸಯ್ಯಸ್ವಾಮಿ, ಮಲ್ಲನಗೌಡ ಅಮಲಿಹಾಳ, ಮಲ್ಲನಗೌಡ ಬಸನಗೌಡ್ರ, ಚಂದ್ರಶೇಖರ ಬೋರಮಗುಂಡ, ಚಂದಪ್ಪ ಗಿಂಡಿ, ತಮ್ಮನಗೌಡ ಪಾಟೀಲ, ಅಭಿವೃದ್ಧಿ ಅಧಿಕಾರಿ ಶರಣಗೌಡ ಉಳ್ಳೇಸುಗೂರು, ಶಿವಲಿಂಗಪ್ಪ ಬಜನಿ, ಬಸನಗೌಡ ಬಾಗೇವಾಡಿ, ಬಸಣ್ಣ ಯಾಳಗಿ ಸೇರಿದಂತೆ ಇತರರು ಇದ್ದರು. ಶಾಂತಗೌಡ ಪಾಟೀಲ ಸ್ವಾಗತಿಸಿದರು. ಬಸವರಾಜ ಹಾವರಗಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.