ಸರ್ಕಾರಿ ಯೋಜನೆ ಮನೆ ಮನೆಗೆ ತಲುಪಿಸಿ; ಸಚಿವೆ ಶಶಿಕಲಾ ಜೊಲ್ಲೆ
ಬಿಜೆಪಿ ಸರ್ಕಾರದಲ್ಲಿಯೇ ಅಭಿವೃದ್ಧಿ ಸಾಧ್ಯ. ಯಾದಗಿರಿಯ ಅಭಿವೃದ್ಧಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅಪಾರ ಕಾಳಜಿ
Team Udayavani, Jan 13, 2021, 6:33 PM IST
ಯಾದಗಿರಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದವರ ಮೇಲೆ ಸಾಕಷ್ಟು ಜವಾಬ್ದಾರಿಗಳಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮನೆ ಮನೆಗೆ ತಲುಪಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಜನ ಸೇವಕ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರು ದೇಶದ ಪರಂಪರೆ ಸಂಸ್ಕೃತಿಯನ್ನು ಪರಿಚಯಿಸಿ ಅಮೆರಿಕಾದಲ್ಲಿ ಕ್ರಾಂತಿ ಮೂಡಿಸಿದ್ದರೇ, ಸ್ವಾತಂತ್ರÂ ಸಿಕ್ಕ 72 ವರ್ಷಗಳ
ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವಕ್ಕೆ ಭಾರತದ ಶಕ್ತಿ ಸಾಮರ್ಥ್ಯ ತೋರಿಸಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ, ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಮಾತನಾಡಿ, ಇದೀಗ ಬಿಜೆಪಿಗೆ ಇತಿಹಾಸ ನಿರ್ಮಾಣ ಮಾಡುವ ದಿನಗಳಿದ್ದು, ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುವುದು ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಹಕಾರಿಯಾಗಲಿದೆ ಎಂದರು.
ರಾಜ್ಯದಲ್ಲಿ ವಿಧಾನಸಭೆ ಬೈ ಎಲೆಕ್ಷನ್‌ಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾ ಧಿಸಿದೆ. ರಾಜ್ಯದಲ್ಲಿನ 5670 ಗ್ರಾ.ಪಂಗಳಲ್ಲಿ 86183 ಸದಸ್ಯರಲ್ಲಿ ಬಿಜೆಪಿ
ಬೆಂಬಲಿತ 45246 ಅಭ್ಯರ್ಥಿಗಳು ಆರಿಸಿ ಬಂದಿದ್ದು, ದೊಡ್ಡ ಶಕ್ತಿ ಲಭಿಸಿದೆ. ಯಾದಗಿರಿ ಜಿಲ್ಲೆಯಲ್ಲಿ 115 ಗ್ರಾ.ಪಂ.ಗಳಲ್ಲಿ 1271 ಬಿಜೆಪಿ ಬೆಂಬಲಿತ ಸದಸ್ಯರು
ಆರಿಸಿ ಬಂದಿದ್ದು, 60 ಗ್ರಾ.ಪಂಗಳಲ್ಲಿ ಸಂಪೂರ್ಣ ಬಹುಮತ ಪಡೆದಿದೆ ಎಂದರು.
ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿ, ಭಾರತವನ್ನು ವಿಶ್ವಕ್ಕೆ ಪರಿಚಯಿಸಿದ ಸ್ವಾಮಿ ವಿವೇಕಾನಂದರ ಜಯಂತಿ ದಿನ ಕಾರ್ಯಕ್ರಮ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಬಿಜೆಪಿ ಸರ್ಕಾರದಲ್ಲಿಯೇ ಅಭಿವೃದ್ಧಿ ಸಾಧ್ಯ. ಯಾದಗಿರಿಯ ಅಭಿವೃದ್ಧಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅಪಾರ ಕಾಳಜಿ ಹೊಂದಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ಮಾಜಿ ಸಚಿವರೂ ನಿಜಶರಣ ಅಂಬಿರಗ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ, ಬಿಜೆಪಿ ಯುವ ರಾಜ್ಯಾಧ್ಯಕ್ಷ ಡಾ| ಸಂದೀಪ ಕುಮಾರ, ಸಂಸದ ಡಾ.ಉಮೇಶ ಜಾಧವ್, ಸಚಿವ ಪ್ರಭು ಚವ್ಹಾಣ ಮಾತನಾಡಿದರು.
ಈಶಾನ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಭಿ.ಗುಡಿ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ್, ಮಹಿಳಾ ನಿಗದ ಅಧ್ಯಕ್ಷೆ ಶಶಿಕಲಾ ತೆಂಗಳಿ, ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ, ಅಮಾತೆಪ್ಪ ಕಂದಕೂರ, ಯುಡಾ ಅಧ್ಯಕ್ಷ ಬಸವರಾಜ ಚಂಡರಕಿ, ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ್, ಉಪಾಧ್ಯಕ್ಷೆ ಪ್ರಭಾವತಿ ಎಂ.ಕಲಾಲ್, ಸುರಪುರ ನಗರ ಸಭೆ ಅಧ್ಯಕ್ಷೆ ಸುಜಾತಾ,ಡಿಸಿಸಿ ಬ್ಯಾಂಕ್
ಉಪಾಧ್ಯಕ್ಷ ಸುರೇಶ ಸಜ್ಜನ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.