ಅನುಭವಿ ಶಿಕ್ಷಕರ ನೇಮಕಕ್ಕೆ ಆಗ್ರಹ
Team Udayavani, Jun 16, 2018, 5:08 PM IST
ಶಹಾಪುರ: ಅರ್ಹತೆ ಇಲ್ಲದವರನ್ನು ಶಿಕ್ಷಕರ ಹುದ್ದೆಗೆ ನೇಮಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯ ಹಾಳು
ಮಾಡುವಂತ ಪರಿಸ್ಥಿತಿ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆದಿದೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಅನುಭವಿ ಅರ್ಹತೆ ಹೊಂದಿದ ಶಿಕ್ಷಕರನ್ನು ನೇಮಿಸಿಕೊಳ್ಳಬೇಕೆಂದು ಅಖಂಡ ಕರ್ನಾಟಕ ರೈತ ಸಂಘ ಆಗ್ರಹಿಸಿ ಬಿಇಒ ಅವರಿಗೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಸಂಚಾಲಕ ಮಲ್ಲಣ್ಣ ಪರಿವಾಣ, ಇಲ್ಲಿನ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅನರ್ಹತೆ ಹೊಂದಿದ ಶಿಕ್ಷಕರನ್ನು ನೇಮಿಸಿಕೊಂಡು ಮಕ್ಕಳಿಗೆ ಶಿಕ್ಷಣ ನೀಡುವಂತ ಕೆಲಸ
ನಡೆದಿದೆ. ಅರ್ಹತೆ ಇಲ್ಲದ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿಲ್ಲ. ಹೀಗಾಗಿ ಸಾಕಷ್ಟು ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಈ ಕುರಿತು ಮೇಲಧಿಕಾರಿಗಳು ಪರಿಶೀಲನೆ ನಡೆಸಬೇಕು. ದೂರು ಬಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸುವ ಮೂಲಕ ಅರ್ಹತೆ ಹೊಂದಿದವರನ್ನು ಶಿಕ್ಷಕರನ್ನಾಗಿ ನೇಮಿಸಿಕೊಳ್ಳುವಂತೆ ಸೂಚಿಸಬೇಕು. ಅಲ್ಲದೆ ಗುಣಮಟ್ಟದ ಶಿಕ್ಷಣ ಸೌಲಭ್ಯ ಕಲ್ಪಿಸಲು ಸೂಚಿಸಬೇಕೆಂದು ಒತ್ತಾಯಿಸಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಕೊರತೆ ಒಂದೆಡೆಯಾದರೆ, ಖಾಸಗಿ ಶಾಲೆಗಳಲ್ಲಿ ಅನುಭವಿ ಶಿಕ್ಷಕರ
ಕೊರತೆಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಯಲ್ಲಿ ಕಳಪೆ ಮಟ್ಟದ ಫಲಿತಾಂಶ ಬರುವಂತಾಗಿದೆ. ಇದು ಇಡೀ ಜಿಲ್ಲೆಗೆ ನಾಚಿಕೆ ತರುವಂಥ ಸಂಗತಿ. ಕಾರಣ ಶಿಕ್ಷಣಾಧಿಕಾರಿಗಳು ಸರ್ಕಾರಿ ಮತ್ತು ಖಾಸಗಿ ಶಾಲೆಗಳತ್ತ ಗಮನ ಹರಿಸಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಆಗಾಗ ಕಾರ್ಯಗಾರ ನಡೆಸುವ ಮೂಲಕ ಸೂಕ್ತ ಸಲಹೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಭೀಮನಗೌಡ ಹುಲ್ಕಲ್, ಮಲ್ಲಪ್ಪ ತಡಿಬಿಡಿ, ಹಣಮಂತ್ರಾಯ ಗೌಡ, ಮಲ್ಲಪ್ಪ, ದೇವೀಂದ್ರಪ್ಪ ಮಡ್ನಾಳ, ಭೀಮಣ್ಣ, ಮಲ್ಲಪ್ಪ ಸಲಾದಪುರ, ಭೀಮಾಶಂಕರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.