ಬೇಡಿಕೆ ಈಡೇರಿಕೆಗೆ ಆಗ್ರಹ
Team Udayavani, Jan 16, 2019, 10:59 AM IST
ಸುರಪುರ: ಶುದ್ಧ ನೀರಿನ ಘಟಕಗಳ ಆರಂಭ, ಕುಡಿಯವ ನೀರಿನ ಯೋಜನೆ ಸಮರ್ಪಕ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಚ್.ಡಿ. ಕುಮಾರಸ್ವಾಮಿ ಸೇನೆ ಕಾರ್ಯಕರ್ತರು ಜಿಪಂ ಕಚೇರಿ ಎದುರು ಪ್ರತಿಭಟಿಸಿದರು.
ಸೇನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ಜಿಪಂ ಇಂಜಿನಿಯರಿಂಗ್ ಇಲಾಖೆಯಿಂದ ಸ್ಥಾಪಿಸಿರುವ ಕುಡಿಯುವ ನೀರಿನ ಶುದ್ಧ ಘಟಕಗಳನ್ನು ಎಲ್ಲಿಯು ಪೂರ್ಣಗೊಳಿಸಿಲ್ಲ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರ್ಮಿಸಿರುವ ಘಟಕಗಳನ್ನು ಅರ್ಧಕ್ಕೆ ನಿಲ್ಲಿಸಿ ಕೈ ತೊಳೆದುಕೊಂಡಿದ್ದಾರೆ ಎಂದು ಆರೋಪಿಸಿದರು.
ಬಹುತೇಕ ಗ್ರಾಮಗಳಲ್ಲಿ ನಿರ್ಮಿಸಿರುವ ಓವರ್ ಹೆಡ್ ಟ್ಯಾಂಕ್‌ಗಳ ಕಾಮಗಾರಿ ಪೂರ್ಣಗೊಂಡಿಲ್ಲ. ಈಗಾಗಲೆ ನಿರ್ಮಿಸಿರುವ ಟ್ಯಾಂಕರ್‌ಗಳ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು ಸೋರುತ್ತಿವೆ. ಇದಕ್ಕೆ ಜಿಪಂ ಇಂಜಿನಿಯರಗಳ ನಿರ್ಲಕ್ಷ್ಯ ದೋರಣೆ ಕಾರಣವಾಗಿದೆ ಎಂದು ದೂರಿದರು.
ಇತ್ತೀಚೆಗೆ ತಾಲೂಕಿನ ತೆಗ್ಗಳಿ ಶಖಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ವಿಷ ಬೆರಿಸಿದ ದುಷ್ಕರ್ಮಿಗಳನ್ನು ಪೊಲೀಸರು ಇದುವರೆಗೂ ಬಂದಿಸಿಲ್ಲ. ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸುತ್ತಿಲ್ಲ. ತಾಲೂಕು ಮತ್ತು ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
2015ರಿಂದ ಇಲ್ಲಿಯವರೆಗೆ ಕುಡಿಯುವ ನೀರಿಗಾಗಿ ಬಿಡುಗಡೆಯಾದ ಅನುದಾನ, ಮತ್ತು ಕೊಳವೆ ಬಾವಿಗಳ ಕೊರೆಯಿಸದ ಬಗ್ಗೆ ಶುದ್ಧ ನೀರಿನ ಘಟಕಗಳ ಸ್ಥಾಪನೆ ಬಗ್ಗೆ ಸೂಕ್ತ ತನಿಖೆ ಮಾಡಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಗೆ ಬರೆದ ಬೇಡಿಕೆಗಳ ಮನವಿಯನ್ನು ಗ್ರೇಡ್ 2 ತಹಶೀಲ್ದಾರ್ ಸೊಫಿಯಾ ಸುಲ್ತಾನ್ ಅವರಿಗೆ ಸಲ್ಲಿಸಿದರು. ಕೃಷ್ಣಾ ದಿವಾಕರ, ಗೋಪಾಲ ಬಾಗಲಕೋಟೆ, ಕೇಶಣ್ಣ ದೊರೆ, ತಿರುಪತಿ ದೊರೆ, ಬಸವರಾಜ, ಅಂಬಯ್ಯ ದೊರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.