ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ
Team Udayavani, Oct 17, 2017, 3:40 PM IST
ಸುರಪುರ: ವಿವಿಧ ಬೆಡಿಕೆಗಳ ಈಡೇರಿಕೆಗೆ ಒತ್ತಾಯಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿದರು. ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ ಮಾತನಾಡಿ, ಕಳೆದ ಎರಡು ತಿಂಗಳಿಂದ ವಾಡಿಕೆಗಿಂತ ಹೆಚ್ಚು ಮಳೆ ಸುರಿದು ರೈತರು ಬಿತ್ತಿದ ಬೆಳೆಗಳು ಹಾಳಾಗಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಇದುವರೆಗೂ ಬೆಳೆ ನಷ್ಟ ಸಮೀಕ್ಷೆ ಮಾಡಿಲ್ಲ ಎಂದು ಆರೋಪಿಸಿದರು. ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ನಷ್ಟದಲ್ಲಿದ್ದಾರೆ. ಆದರೆ ಬ್ಯಾಂಕ್ ಅಧಿಕಾರಿಗಳು ಸಮರ್ಪಕವಾಗಿ ಸಾಲ ಸೌಲಭ್ಯ ನೀಡದೆ ಸಾಲ ಮರುಪಾವತಿಗೆ ಒತ್ತಾಯಿಸುತ್ತಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತ್ತಾಗುತ್ತಿದೆ ಎಂದು ದೂರಿದರು.
ಮುಖಂಡ ವೆಂಕೋಬ ದೊರೆ ಮಾತನಾಡಿ, ಕೃಷಿ ಇಲಾಖೆಯಿಂದ ಸರಕಾರದ ಯೋಜನೆಗಳು ಸಮರ್ಪಕವಾಗಿ
ಅನುಷ್ಠಾನಗೊಳ್ಳುತ್ತಿಲ್ಲ. ಈ ಬಗ್ಗೆ ಕೃಷಿ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಬೀಜ ಗೊಬ್ಬರ, ಕ್ರಿಮಿನಾಶಕ ಸಿಂಪಡಣೆ ಯಂತ್ರಗಳು ಸಕಾಲಕ್ಕೆ ವಿತರಿಸುತ್ತಿಲ್ಲ. ಕೃಷಿ ಹೊಂಡ ನಿರ್ಮಾಣದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ಇದರ ಬಗ್ಗೆ ಸೂಕ್ತ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಾಲ ವಸೂಲಾತಿ ನಿಲ್ಲಿಸಿ ಮರು ಸಾಲ ನೀಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಆದೇಶಿಸಬೇಕು. ವಜ್ಜಲ್ ಗ್ರಾಪಂ ಪಿಡಿಒ ಅವರ ವರ್ಗಾವಣೆ ರದ್ದುಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗಳ ಮನವಿ ಪತ್ರವನ್ನು ಶಿರಸ್ತೇದಾರ ನಿಸ್ಸಾರ ಅಹ್ಮದ್ ಅವರಿಗೆ ಸಲ್ಲಿಸಿದರು. ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಯಮನಪ್ಪ ದೊರೆ, ಕಾರ್ಯದರ್ಶಿ ವೆಂಕಟೇಶ ಭಕ್ರಿ, ದಾವಲಸಾಬ ಗೋಡಿಹಾಳ,
ಶೌಕತಲಿ, ಶ್ರೀನಿವಾಸ ನಾಯಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.