ಒಳ ಮೀಸಲಾತಿ ಜಾರಿಗೆ ಆಗ್ರಹ
Team Udayavani, Jan 12, 2018, 2:35 PM IST
ಯಾದಗಿರಿ: ನ್ಯಾ| ಎ.ಜೆ. ಸದಾಶಿವ ಆಯೋಗದ ವರದಿ ಪ್ರಕಾರ ಪರಿಶಿಷ್ಟ ಜಾತಿಗಳ ಜನಸಂಖ್ಯಾವಾರು ಮೀಸಲಾತಿ
ಜಾರಿಗಾಗಿ ಕೇಂದ್ರ ಸರಕಾರಕ್ಕೆ ಶಿಪಾರಸು ಮಾಡುವಂತೆ ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಸದಸ್ಯರು ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಮೈಲಾಪುರ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿದ ಸಮಿತಿ ಸದಸ್ಯರು ರಾಜ್ಯ ಸರಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಮಿತಿ ರಾಜ್ಯ ಉಪಾಧ್ಯಕ್ಷ ದೇವಿಂದ್ರನಾಥ ಕೆ. ನಾದ್ ಮಾತನಾಡಿ, ಕಳೆದ ಎರಡು ದಶಕಗಳಿಂದ ಒಳ ಮೀಸಲಾತಿ ಜಾರಿಗಾಗಿ ಹೋರಾಟ ನಡೆಸಲಾಗುತ್ತಿದೆ. ಇಲ್ಲಿಯವರೆಗೆ ನ್ಯಾ| ಎ.ಜೆ. ಸದಾಶಿವ ಆಯೋಗ ವರದಿ ಜಾರಿಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನ್ಯಾ| ಎ.ಜೆ. ಸದಾಶಿವ ಆಯೋಗ ರಚನೆಗೆ ವಿರೋಧ ಮಾಡದ ಲಂಬಾಣಿ, ಬೋವಿ ಸಮುದಾಯದ ಶಾಸಕರು
ವರದಿ ಸಲ್ಲಿಸಿದ ನಂತರ ವಿರೋಧ ಮಾಡುತ್ತಿರುವುದು ಸಂವಿಧಾನಕ್ಕೆ ವಿರೋಧ ಮಾಡಿದಂತಾಗಿದೆ. ಒಳ ಮೀಸಲಾತಿ ಜಾರಿಗೆ ಸಂವಿಧಾನದಲ್ಲಿರುವ ಕಾನೂನುಗಳ ತಿಳಿದುಕೊಳ್ಳದೆ, ಬೇಕಾಬಿಟ್ಟಿ ಹೇಳಿಕೆ ನೀಡಿ ರಾಜ್ಯದ ಜನತೆಗೆ ತಪ್ಪು ಸಂದೇಶ ನೀಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಸಮಿತಿ ಜಿಲ್ಲಾಧ್ಯಕ್ಷ ಲಿಂಗಪ್ಪ ಹತ್ತಿಮನಿ, ಎಂ.ಕೆ ಬಿರನೂರ, ನಿಂಗಪ್ಪ ವಡ್ಡನಳ್ಳಿ, ಚೆನ್ನಯ್ಯ ಮಾಳಿಕೇರಿ, ಹಣಮಂತ ಲಿಂಗೇರಿ, ಭೀಮಾಶಂಕರ ಬಿಲ್ಲವ. ನಂದಕುಮಾರ ಬಾಂಬೆಕರ್, ಜಿಪಂ ಸದಸ್ಯ ಶಿವಲಿಂಗಪ್ಪ ಪುಟಗಿ ಮಾತನಾಡಿದರು.
ಈ ಸಂದರ್ಭದಲ್ಲಿ, ಸಮಾಜದ ಮುಖಂಡರಾದ ಗೋಪಾಲ್ ದಾಸನಕೇರಿ, ಸ್ಯಾಂಸನ್ ಮಾಳಿಕೇರಿ ಭೀಮ ರಾಯ ಬಂದಳ್ಳಿ, ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮುದ್ನಾಳ, ಆಂಜನೆಯ ಬಬಲಾದ, ಮಾದಿಗ ಯುವ ಸೇನೆ ಜಿಲ್ಲಾಧ್ಯಕ್ಷ ಶಂಕರ ರಾಮಸಮುದ್ರ, ಸಾಯಿಬಣ್ಣ ಇದ್ದರು.
ಶೀಘ್ರ ವರದಿ ಜಾರಿಗೊಳಿಸಿ ಲಂಬಾಣಿ ಬೋವಿ ಇತರೆ ಜಾತಿಗಳನ್ನು ಪರಿಶಿಷ್ಟ ಜಾತಿಯಲ್ಲಿ ಸೇರಿಸಬೇಕೆಂದು ಹಾವನೂರ ಆಯೋಗ ಸರಕಾರಕ್ಕೆ ವರದಿ ಸಲ್ಲಿಸಿದಾಗ ಮಾದಿಗ ಮತ್ತು ಛಲವಾದಿ ಸಮುದಾಯದ ಮುಖಂಡರು ವಿರೋಧ ವ್ಯಕ್ತಪಡಿಸಿಲ್ಲ. ಸರಕಾರದ ಯೋಜನೆಗಳನ್ನು ಬಹುಪಾಲು ಸ್ಪರ್ಶ ಜನಾಂಗದ ದಲಿತರು ಲಾಭ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಮೂಲ ದಲಿತರಿಗೆ ಅನ್ಯಾಯ ಆಗುತ್ತಿದ್ದು, ಕೂಡಲೇ ನ್ಯಾ| ಎ.ಜೆ. ಸದಾಶಿವ ಆಯೋಗ ವರದಿ ಜಾರಿ ಮಾಡಬೇಕು.
ಶಾಂತರಾಜ ಮೋಟನಳ್ಳಿ, ಮುಖಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.