ನಕಲಿ ಮದ್ಯ ಮಾರಾಟ ತಡೆಗೆ ಆಗ್ರಹ
Team Udayavani, May 26, 2022, 5:21 PM IST
ಶಹಾಪುರ: ತಾಲೂಕಿನ ಹಲವೆಡೆ ನಕಲಿ ಮದ್ಯ ಮಾರಾಟ ಹಾವಳಿ ಜಾಸ್ತಿಯಾಗಿದ್ದು, ನಕಲಿ ಮದ್ಯ ಮಾರಾಟಗಾರರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ತಾಲೂಕು ಕನ್ನಡಪರ ಸಂಘಟನೆಗಳ ಒಕ್ಕೂಟ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
ತಾಲೂಕಿನಾದ್ಯಂತ ಪಾನ್‌ಶಾಪ್, ಕಿರಾಣಿ ಅಂಗಡಿ ಸೇರಿದಂತೆ ಸಣ್ಣಪುಟ್ಟ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಈ ನಡುವೆ ನಕಲಿ ಮದ್ಯ ಮಾರಾಟ ನುಸುಳಿದ್ದು, ಇದರಿಂದ ಮದ್ಯ ಸೇವಕರ ಆರೋಗ್ಯ ಹಾಳಾಗುತ್ತಿದ್ದು, ಪ್ರಾಣ ಭಯದ ಆತಂಕ ಎದುರಾಗಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.
ಭೀಮು ಶಖಾಪುರ, ಮಲ್ಲಯ್ಯಸ್ವಾಮಿ ಇಟಗಿ, ಮೌನೇಶ ಹಳಿಸಗರ, ವೆಂಕಟೇಶ ಬೋನೇರ, ದೇವು ಭೀ. ಗುಡಿ, ಮಲ್ಲಿಕಾರ್ಜುನ ಕಟ್ಟಿಮನಿ, ಸುಭಾಶ ಹೋತಪೇಟ, ಮಾಳಪ್ಪ ಪೂಜಾರಿ, ಮಲ್ಲನಗೌಡ ರಾಯಚೂರ, ಮಹಾದೇವಮ್ಮ, ಪ್ರದೀಪ ಅಣಬಿ, ಮಲ್ಲರಡ್ಡಿ ವಿಭೂತಿಹಳ್ಳಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.