ಮದ್ಯ ಅಕ್ರಮ ಮಾರಾಟ ತಡೆಗೆ ಆಗ್ರಹ
Team Udayavani, Jan 21, 2022, 2:39 PM IST
ಯಾದಗಿರಿ: ಶಹಾಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು, ಈ ಕೂಡಲೇ ಅದನ್ನು ತಡೆದು ಅಕ್ರಮ ಮದ್ಯ ಸರಬರಾಜು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕರವೇ ಶಹಾಪುರ ತಾಲೂಕು ಅಧ್ಯಕ್ಷ ಭೀಮಣ್ಣ ಶಖಾಪುರ ಅವರು ಅಬಕಾರಿ ಉಪ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಶಖಾಪುರ, ಸಗರ, ಹೋಸಕೇರಾ, ಗೋಗಿ, ಚಾಮನಾಳ, ಶಿರವಾಳ ಗ್ರಾಮಗಳ ಮದ್ಯದ ಅಂಗಡಿಯವರು ಆಯಾ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಗಳಲ್ಲಿನ ಅನಧಿಕೃತ ಅಂಗಡಿಗಳಿಗೆ ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದಾರೆ. ಗ್ರಾಮಗಳಲ್ಲಿ ಇಂತಹ ಅನೇಕ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವುದರಿಂದ ಗ್ರಾಮಸ್ಥರಿಗೆ ನೆಮ್ಮದಿ ಇಲ್ಲದಂತಾಗಿದೆ ಎಂದು ಆರೋಪಿಸಿದರು.
ಕೂಡಲೇ ಮದ್ಯ ಸರಬರಾಜು ಮಾಡುವವರ ವಿರುದ್ಧ ಹಾಗೂ ಅವರಿಗೆ ಸಹಕರಿಸುವ ಸ್ಥಳೀಯ ಅಬಕಾರಿ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕರವೇ ಸ್ವತಃ ಕಾರ್ಯಚರಣೆ ನಡೆಸಿ ಅಕ್ರಮ ಮದ್ಯೆ ಸರಬರಾಜು ಮಾಡುವವರ ವಾಹನಗಳ ವಿಡಿಯೋ ಮಾಡಿ ಮುಖ್ಯಮಂತ್ರಿಗೆ ಹಾಗೂ ಅಬಕಾರಿ ಸಚಿವರಿಗೆ ದೂರು ನೀಡಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ
RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ
Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್ ಆಸ್ಪತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.