ಧರಂಗೆ ಭಾವಪೂರ್ಣ ಶ್ರದ್ಧಾಂಜಲಿ
Team Udayavani, Jul 28, 2017, 2:04 PM IST
ಯಾದಗಿರಿ: ನಗರದ ಜಿಲ್ಲಾ ರಜಪೂತ ಸಮಾಜದಿಂದ ಗುರುವಾರ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ನಿಧನ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.
ರಜಪೂತ ಸಮಾಜದ ಜಿಲ್ಲಾಧ್ಯಕ್ಷ ಸಂಜೀವಕುಮಾರ ರಾಯಚೂರಕರ್ ಮಾಜಿ ಮುಖ್ಯಮಂತ್ರಿ ಎನ್. ಧರ್ಮಂಸಿಂಗ್ ಅವರ ಭಾವಚಿತ್ರಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಎರಡು ನಿಮಿಷ ಮೌನಾಚರಣೆ ಸಲ್ಲಿಸಿದರು. ಜಿಲ್ಲಾ ಕಾರ್ಯದರ್ಶಿ ಸೋಹನ ಪ್ರಸಾದ, ದಶರಥಸಿಂಗ್ ಠಾಕೂರ, ಉದಯ ಸಿಂಗ್, ಸತ್ಯನಾರಾಯಣ ತೀವಾರಿ, ಸಂದೀಪ್‌ಸಿಂಗ್ ಠಾಕೂರ, ಮಹೇಶಕುಮಾರ, ರಘುವೀರಸಿಂಗ್ ಠಾಕೂರ್, ಮಹೇಶ ಪ್ರಸಾದ್, ವಿಕ್ರಮಸಿಂಗ್ ಠಾಕೂರ್ ಇದ್ದರು.
ಕೆಂಭಾವಿ: ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ನಿಧನ ಹಿನ್ನೆಲೆಯಲ್ಲಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಸಭೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಸಿದ್ಧನಗೌಡ ಪೊಲೀಸ್ ಪಾಟೀಲ ಮಾತನಾಡಿ, ಉತ್ತರ ಕರ್ನಾಟಕ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ ಧರ್ಮಸಿಂಗ್ ಅವರನ್ನು ಈ ಭಾಗದ ಜನತೆ ಮಹಾನ ನಾಯಕರು ಎಂದು ಬಣ್ಣಿಸಿದರು.
ಕೆಂಭಾವಿ ಪಟ್ಟಣಕ್ಕೆ ರೈತರ ಜೀವನಾಡಿ ಕೃಷ್ಣಾ ಭಾಗ್ಯ ಜಲ ನಿಗಮದ ಕಾಲುವೆ ದೊರಕಲು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಸೇರಿದಂತೆ ಪಟ್ಟಣಕ್ಕೆ ಹಲವು ಮೂಲ ಸೌಲಭ್ಯ ಒದಗಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದರು. ಧರ್ಮಸಿಂಗ್ ಅವರ ಅಕಾಲಿಕ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ. ಅವರ ನಿಧನದ ದುಃಖ ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗನಗೌಡ ಮಾಲಿಪಾಟೀಲ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ವಾಮನರಾವ ದೇಶಪಾಂಡೆ, ಬಸಣ್ಣ ಬೂದೂರ, ಬಾಪುಗೌಡ ಪಾಟೀಲ, ತಾಪಂ ಮಾಜಿ ಸದಸ್ಯ ಖಾಜಾಪಟೇಲ ಕಾಚೂರ ಇದ್ದರು.
ಯಾದಗಿರಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಧರ್ಮ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ಜಿಲ್ಲೆಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಧರ್ಮಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದಾಗ ಯಾದಗಿರಿ ವಿಧಾನಸಭಾ ಮತಕ್ಷೇತ್ರದ ಅನೇಕ ಜನಪರ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಕ್ಷೇತ್ರ ಅಭಿವೃದ್ಧಿ ಪಡಿಸಲು ಸಾಕಷ್ಟು ಸಹಕರಿಸಿದ್ದರು ನನ್ನ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಭೀಮಾನದಿಗೆ ಅಡ್ಡಲಾಗಿ ಬ್ರಿಡ್ಜ್ ಕಮ್ ಬ್ಯಾರೇಜ್ ಉದ್ಘಾಟನೆ ಮಾಡಿ ಸಾವಿರಾರು ಜನ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಇಂತಹ ಮಹಾನ್ ನಾಯಕನನ್ನು ಕರ್ನಾಟಕ ಕಳೆದು ಕೊಂಡ್ಡಿದ್ದು ರಾಜ್ಯಕ್ಕೆ ಹಾಗೂ ರಾಷ್ಟ್ರಕ್ಕೆ ತುಂಬಾಲಾರದ ನಷ್ಟವಾಗಿದೆ ಎಂದು ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಮುದ್ನಾಳ ಶೋಕ ವ್ಯಕ್ತಪಡಿಸಿದ್ದಾರೆ.
ಧರಂ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ನಿಯಂತ್ರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಬಿಜೆಪಿ ಮುಖಂಡರಾದ ನಾಗರತ್ನಾ ಕುಪ್ಪಿ, ವೆಂಕಟರೆಡ್ಡಿಗೌಡ ಮುದ್ನಾಳ್, ಚಂದ್ರಶೇಖರ್ ಗೌಡ ಮಾಗನೂರ್, ಡಾ| ಶರಣಭೂಪಾಲರೆಡ್ಡಿ ನಾಯ್ಕಲ್, ಎಸ್.ಪಿ ನಾಡೇಕರ್ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.