ಅಭಿವೃದ್ಧಿಯಲ್ಲಿ ತಾರತಮ್ಯ: ಕಾಂಗ್ರೆಸ್ ಸದಸ್ಯರ ಖಂಡನೆ
Team Udayavani, Jan 14, 2022, 1:17 PM IST
ಹುಣಸಗಿ: ತಾಲೂಕಿನ ಎಲ್ಲ ಗ್ರಾಪಂಗಳಲ್ಲಿ ಎಸ್ಸಿ, ಎಸ್ಟಿ ವಸತಿಗಳು ಹಾಗೂ ವಿವಿಧ ಕಾಮಗಾರಿಗಳ ಬಗ್ಗೆ ಗಮನಕ್ಕೆ ತರದೇ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುವುದನ್ನು ಖಂಡಿಸಿ ಗ್ರಾಪಂ ಕಾಂಗ್ರೆಸ್ ಸದಸ್ಯರು ಗುರುವಾರ ತಾಪಂ ಇಒ ಅವರಿಗೆ ಮನವಿ ಸಲ್ಲಿಸಿದರು.
ಸದ್ಯ ಡಾ| ಅಂಬೇಡ್ಕರ್ ವಸತಿ ಹಾಗೂ ಬಸವ ವಸತಿ ಯೋಜನೆಯಡಿ ಈಗಾಗಲೇ ಅರ್ಜಿಗಳನ್ನು ಫಲಾನುಭವಿಗಳು ಹಾಕಿದ್ದಾರೆ. ಗ್ರಾಮಸಭೆ ಮಾಡದೇ ನೇರವಾಗಿ ತಮಗೆ ಬಂದಂತೆ ಫಲಾನುಭವಿ ಆಯ್ಕೆ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಗ್ರಾಪಂ ನಿಯಮವಳಿ ಪ್ರಕಾರ ಗ್ರಾಮಸಭೆ ನಡೆಸಿ ಫಲಾನುಭವಿಗಳ ಆಯ್ಕೆ ಗೊಳಿಸಬೇಕೆಂದು ಒತ್ತಾಯಿಸಿದರು.
ಪ್ರತಿಯೊಂದು ಅನುದಾನ ಹಾಗೂ ಕಾಮಗಾರಿ ಬಗ್ಗೆ ಪಿಡಿಒಗಳು ಕೂಡ ಸದಸ್ಯರ ಗಮನಕ್ಕೆ ತರುತ್ತಿಲ್ಲ. ಅಧಿಕಾರಿಗಳು ಸಹ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಪ್ರತಿಯೊಂದು ಕ್ರಿಯಾ ಯೋಜನೆ ಹಾಗೂ ವಸತಿ ಯೋಜನೆಗಳು ಗಮನಕ್ಕೆ ತಂದು ಮಂಜೂರಾತಿ ಕೊಡಬೇಕು. ಒಂದು ವೇಳೆ ಸದಸ್ಯರ ಗಮನಕ್ಕೆ ತರದೇ ಅದೇ ಹಠ ಮುಂದುವರಿದರೆ ಎಲ್ಲರೂ ಸೇರಿ ಉಗ್ರ ಹೋರಾಟ ಮಾಡಲಾಗುವುದು ಎಂದರು.
ನಿಂಗಾನಾಯ್ಕ ರಾಠೊಡ, ರಾಮುನಾಯ್ಕ ರಾಠೊಡ, ಸಂತೋಷ ರಾಠೊಡ, ಬಾಲಚಂದ್ರ ರಾಠೊಡ, ನಾರಾಯಣಾಯ್ಕ, ಗುಂಡುರಾವ್ ಜಾಧವ, ಶರಣಗೌಡ, ತಾರನಾಥ ಚವ್ಹಾಣ, ರಶ್ಮಿ ಶಾಂತಿಲಾಲ್, ತಾರಾಬಾಯಿ ಪವಾರ್, ಕಾಂಗ್ರೆಸ್ ಮುಖಂಡ ಸುಭಾಷ ಕೋಳಿಹಾಳ, ವಾಸುದೇವ ಲಮಾಣಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.