![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 22, 2021, 7:11 PM IST
ಯಾದಗಿರಿ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಅಂಥವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್ ಸೂಚಿಸಿದರು. ಜಿಲ್ಲೆಯ ಶಹಾಪುರ ತಾಪಂ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಅ ಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಕಲಿ ವೈದ್ಯರು ನೀಡುವ ಔಷ ಧಿಯಿಂದ ಕೋವಿಡ್ ಸೋಂಕಿತರ ಆರೋಗ್ಯದಲ್ಲಿ ಭಾರಿ ಸಮಸ್ಯೆಯಾಗಲಿದೆ ಎಂದು ಆತಂಕ
ವ್ಯಕ್ತಪಡಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ, ಔಷಧಗಳನ್ನು ವೈದ್ಯರು ರೋಗಿಗಳಿಗೆ ವಿತರಿಸಬೇಕು. ಮಾತ್ರೆ, ಔಷಧಗಳು ದಾಸ್ತಾನಿದ್ದರೂ ಹೊರಗಿನ ಮೆಡಿಕಲ್ ಸ್ಟೋರ್‌ಗಳಿಗೆ ಬರೆದುಕೊಟ್ಟರೆ, ಅಂತಹ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಕೋವಿಡ್‌ನ ತೀವ್ರತರವಾದ ರೋಗ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗುವ ಸೋಂಕಿತರಿಗೆ ಯಾವುದೇ ತೊಂದರೆಯಾಗದಂತೆ ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿ ಸರಿಯಾಗಿ ಸ್ಪಂದಿಸಬೇಕು. ಗಂಭೀರ ಸಮಸ್ಯೆಯುಳ್ಳ ಸೋಂಕಿತರಿಗೆ ತಕ್ಷಣ ಚಿಕಿತ್ಸೆ ಪ್ರಾರಂಭಿಸಬೇಕು ಎಂದು ಸಲಹೆ ನೀಡಿದರು.
ಜವಾಬ್ದಾರಿ ತೆಗೆದುಕೊಂಡು ನಮಗೆ ಯಾವುದೇ ದೂರು ಬಾರದ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿ ಕಾರಿಗಳು ಸೂಚಿಸಿದರು. ಶುದ್ಧ ಕುಡಿಯುವ ನೀರು ಸೇರಿದಂತೆ ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ತಿಳಿಸಿದರು.
ಶಹಾಪುರ ತಾಲೂಕಿನಲ್ಲಿ ಸೂಚಿಸಿದ ಕ್ವಾರಂಟೈನ್ ಕೇಂದ್ರಗಳಿಗೆ ಸೋಂಕಿತರನ್ನು ಕರೆತರಲು ಮನವೊಲಿಸಬೇಕು ಎಂದು ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿ, ಕ್ವಾರಂಟೈನ್ ಕೇಂದ್ರಗಳಿಗೆ ಅಗತ್ಯವಿದ್ದರೆ ಪೊಲೀಸ್, ಗೃಹ ರಕ್ಷಕ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಬೇಕು. ಏನೇ ಸಮಸ್ಯೆಗಳಿದ್ದರೆ ತಕ್ಷಣ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದು, ಹೆಚ್ಚಿನ ಸಿಸಿ ಕ್ಯಾಮೆರಾಗಳು ಅವಶ್ಯಕತೆ ಇದೆಯೆಂದು ವೈದ್ಯಾಧಿ ಕಾರಿಗಳು ತಿಳಿಸಿದಾಗ, ತಕ್ಷಣ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಆಸ್ಪತ್ರೆಗೆ ಭೇಟಿ-ಪರಿಶೀಲನೆ
ಸಭೆ ನಂತರ ಶಹಾಪುರ ತಾಲೂಕು ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೋವಿಡ್ ಸೋಂಕಿತರಿಗೆ ಆಂಬ್ಯುಲೆನ್ಸ್, ಬೆಡ್ ಲಭ್ಯತೆ, ಆಕ್ಸಿಜನ್, ಔಷಧದ ಪೂರೈಕೆ ಮುಂತಾದವುಗಳ ಬಗ್ಗೆ ವೈದ್ಯರಿಂದ ಮಾಹಿತಿ ಸಂಗ್ರಹಿಸಿದರು. ಕೋವಿಡ್ ಸೋಂಕಿತರಿಗೆ ಅಗತ್ಯ ಔಷಧ ದಾಸ್ತಾನು ಮಾಡಿ ಇಟ್ಟುಕೊಳ್ಳಬೇಕು. ಆಕ್ಸಿಜನ್ ಕೊರತೆ ಉಂಟಾಗದಂತೆ ನಿಗಾವಹಿಸಲು ಸೂಚನೆ ನೀಡಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.