CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
ಹಿಂದೆ ರಮೇಶ ಜಾರಕಿಹೋಳಿ ಸಿಡಿ ಮಾಡಿಸಿ ಮನೆಗೆ ಕಳುಹಿಸಿದ್ದರು... ಏನು ಬೇಕಾದರು..
Team Udayavani, May 3, 2024, 8:34 PM IST
ಯಾದಗಿರಿ: ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಸಿಡಿ ಮಾಡುವುದರಲ್ಲಿ ಭಾರೀ ನುರಿತವರಿದ್ದಾರೆ. ಇಂತವರನ್ನು ಪಕ್ಕದಲ್ಲಿ ಇಟ್ಟುಕೊಂಡು ಓಡಾಡುವುದು ಮಾಡಬಾರದು. ಹಿಂದೆ ರಮೇಶ ಜಾರಕಿಹೋಳಿ ಅವರ ಸಿಡಿ ಮಾಡಿಸಿ ಅವರನ್ನು ಮನೆಗೆ ಕಳುಹಿಸಿದ್ದರು ಎಂದು ಮಾಜಿ ಸಚಿವ ಹಾಗೂ ಸುರಪುರ ವಿಧಾನಸಭೆ ಬಿಜೆಪಿ ಅಭ್ಯರ್ಥಿ ರಾಜುಗೌಡ ಅವರು ಟೀಕಿಸಿದರು.
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದ ಸುರಪುರ ವಿಧಾನಸಭೆ ಉಪಚುನಾವಣೆ ಪ್ರಚಾರ ಸಭೆಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿ ಅವರು ತುಂಬಾ ಜಾಣರಾಗಿದ್ದು, ನೇರ ಸಿದ್ದರಾಮಯ್ಯನವರ ಸಿಎಂ ಸೀಟಿನ ಮೇಲೆ ಕಣ್ಣಿಟ್ಟಿದ್ದಾರೆ, ಅದಕ್ಕೆ ಡಿಕೆಶಿ ಅವರು ಏನು ಬೇಕಾದರು ಮಾಡೋದಕ್ಕೆ ತಯಾರಾಗಿದ್ದಾರೆ ಎಂದರು.
ಲೋಕಸಭೆ ಚುನಾವಣೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಿಡಿಯನ್ನು ಸಹ ಡಿಕೆಶಿ ಅವರು ಬಿಟ್ಟರೆ ಬಿಡಬಹುದು ಅಥವಾ ಯತೀಂದ್ರ ಅವರ ಸಿಡಿ ಬಿಡಬಹುದು ಎಂದು ವ್ಯಂಗ್ಯವಾಡಿದರು.
ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೇ ಡಿಕೆಶಿ ಅವರಿಂದ ಹುಷಾರಾಗಿರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.