ಬಣ್ಣದ ಮಾತುಗಳಿಗೆ ಮೋಸ ಹೋಗಬೇಡಿ

Team Udayavani, Aug 26, 2018, 4:15 PM IST

yad-1.jpg

ಯಾದಗಿರಿ: ಚುನಾವಣೆ ಸಂದರ್ಭದಲ್ಲಿ ಬಣ್ಣ ಬಣ್ಣದ ಮಾತುಗಳನ್ನಾಡಿ ಸಮಾಜದ ಜಾತಿಗಳಲಿ ಒಡಕು ಹುಟ್ಟಿಸುವವರನ್ನು ನಂಬಿ ಮೋಸ ಹೋಗಬೇಡಿ ಎಂದು ಕಾಂಗ್ರೆಸ್‌ ಪಕ್ಷದ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ಥಳೀಯ ಸಂಸ್ಥೆ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಈ ಚುನಾವಣೆ ಯಾದಗಿರಿ ಜನರಿಗೆ ಪ್ರಮುಖವಾಗಿದೆ. ಈ ಭಾಗದಲ್ಲಿ ನಮ್ಮ ಪಕ್ಷ ಸಾಕಷ್ಟು ಕೆಲಸ ಮಾಡಿದ್ದರೂ ಬೇರೆಯವರ ಮಾತು ಕೇಳಿ ದುಡ್ಡು, ಮೋದಿ ಹೆಸರು ಹಾಗೂ ಯಡಿಯೂರಪ್ಪ ಅಳಿಯ ಶಾಸಕನಾಗಬೇಕು ಎಂದು ಜನರು ರಾಜ್ಯದಲ್ಲಿ, ಯಾದಗಿರಿಯಲ್ಲಿ ಮಾಲಕರಡ್ಡಿ ಹಾಗೂ ಗುರುಮಠಕಲ್‌ ಬಾಬುರಾವ ಚಿಂಚನಸೂರಗೆ ಮೋಸ ಮಾಡಿದರು ಎಂದು ವಿಧಾನಸಭೆ ಚುನಾವಣೆಯಲ್ಲಾದ ಸೋಲನ್ನು ನೆನೆಸಿದರು.

ಬಸವಣ್ಣರ ತತ್ವದಂತೆ ನುಡುದಂತೆ ನಡೆದರೆ ಒಳ್ಳೆಯದು. ದೇಶದಲ್ಲಿ ಅವಾಂತರ, ಮೋಸ ಹಾಗೂ ಸಮಾಜಗಳಲ್ಲಿ ಒಡಕು ಹುಟ್ಟಿಸುವುದನ್ನು ದೇಶ ಮತ್ತು ರಾಜ್ಯದ ಜನರು ಸಹಿಸಲ್ಲ ತಿರುಗಿಬೀಳುತ್ತಾರೆ ಎಂದು ಹೇಳಿದರು. ಸಂವಿಧಾನವನ್ನು ಹೊಳಗುವ ಬಿಜೆಪಿ ಸಂವಿಧಾನದ ತತ್ವಗಳಡಿ ಏಕೆ ನಡೆಯಲ್ಲ? ಜನರಿಗೆ ಮೋಸ ಮಾಡುವುದೇ ಮನ್‌ ಕೀ ಬಾತ್‌ ಎಂದು ಟಾಂಗ್‌ ನೀಡಿದರು.

ವಿದೇಶದಲ್ಲಿನ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆ 15 ಲಕ್ಷ ರೂ. ಹಾಕುತ್ತೇವೆ ಎಂದು ಹೇಳಿದ್ದರು. ಅದು ಎಲ್ಲಿದೆ? ದೇಶದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿದ್ದರು. ಈವರೆಗೆ ಒಂದೂವರೆ ಲಕ್ಷ ಉದ್ಯೋಗ ನೀಡಿಲ್ಲ. ಬದಲಿಗೆ ನೀರವ್‌, ಮಲ್ಯ, ಲಲಿತ್‌ಗೆ ಬ್ಯಾಂಕ್‌ಗಳಲ್ಲಿನ 1.68 ಸಾವಿರ ಕೋಟಿ ರೂ. ಲೂಟಿ ಮಾಡಲು ಮೋದಿ ಸರ್ಕಾರ ನೌಕರಿ ನೀಡಿದೆ ಎಂದು ಟಿಕೀಸಿದರು. ಮೋದಿ ಮತ್ತು ಶಾ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದ ಅವರು, ನಮ್ಮ ಹೋರಾಟ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸುವುದಕ್ಕೆ ಹೊರತು ವೈಯಕ್ತಿಕವಲ್ಲ ಎಂದು ಹೇಳಿದರು.

ರಾಯಚೂರು-ಯಾದಗಿರಿ ಸಂಸದ ಬಿ.ವಿ. ನಾಯಕ ಮಾತನಾಡಿ, ರಾಜ್ಯದಲ್ಲಿ ಮತೀಯ ಕೋಮುವಾದಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂದು ಜೆಡಿಎಸ್‌ ಜತೆ ಸೇರಿ ಸರ್ಕಾರ ರಚಿಸಿದೆವು. ಕಳೆದ ಚುನಾವಣೆಯಲ್ಲಿ ಮರಳು ಮಾಡಿ ಬಣ್ಣದ ಮಾತಿನಿಂದ ಮೋದಿ ಅಧಿಕಾರ ಪಡೆದು ದೇಶದಲ್ಲಿ ಪ್ರಜಾತಂತ್ರ ವ್ಯವಸ್ಥೆ ಬುಡಮೇಲು ಮಾಡಿದ್ದಾರೆ ಎಂದು ಟೀಕಿಸಿದರು.

ಹಿಂದುಳಿದ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್‌ ಪಕ್ಷ ಕಲಂ 371(ಜೆ) ಜಾರಿಗೊಳಿಸಿದೆ. ಇನ್ನಷ್ಟು ಪಕ್ಷವನ್ನು ಬಲ ಪಡಿಸಿ ಬಡವರು, ದೀನ ದಲಿತರ ಸೇವೆ ಮಾಡಲು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿಸಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಚನ್ನಾರೆಡ್ಡಿ ತುನ್ನೂರ, ಮರಿಗೌಡ ಹುಲಕಲ್‌, ಭೀಮಣ್ಣಗೌಡ ಸಂಕನೂರ, ಜಗದೇವ ಗುತ್ತೇದಾರ, ಮಂಜುಳಾ ಗೂಳಿ, ರಾಘವೇಂದ್ರ ಮಾನಸಗಲ್‌, ಸಿದ್ದಲಿಂಗರೆಡ್ಡಿ ಉಳ್ಳೇಸೂಗೂರ, ಸುದರ್ಶನ ನಾಯಕ, ಸುರೇಶ ಜೈನ್‌, ವಿಶ್ವನಾಥ ನೀಲಹಳ್ಳಿ, ಮರೆಪ್ಪ ಬಿಳಾರ ಇದ್ದರು.

ಟಾಪ್ ನ್ಯೂಸ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.