ಕುಡಿವ ನೀರಿನ ವಿಚಾರದಲ್ಲಿ ಸುಳ್ಳು ಹೇಳಬೇಡಿ: ಚವ್ಹಾಣ

Team Udayavani, Apr 15, 2022, 11:53 AM IST

7water

ಯಾದಗಿರಿ: ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೆ ತಿಳಿಸಬೇಕು. ಸದ್ಯದಲ್ಲೇ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಪರಿಶೀಲಿಸಲಾಗುವುದು. ಸುಳ್ಳು ಹೇಳಿದ್ದು ಕಂಡು ಬಂದರೆ ಪಿಡಿಒ ಸೇರಿದಂತೆ ಸಂಬಂಧಪಟ್ಟವರನ್ನು ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ. ಚವ್ಹಾಣ ಎಚ್ಚರಿಕೆ ನೀಡಿದರು.

ಇಲ್ಲಿನ ಜಿಲ್ಲಾಡಳಿತ ಭವನದ ಅಡಿಟೋರಿಯಂನಲ್ಲಿ ಪ್ರಸ್ತುತ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸಕ್ತ ಏಪ್ರಿಲ್‌, ಮೇ ಹಾಗೂ ಜೂನ್‌ ಈ ಮೂರು ತಿಂಗಳು ಎಲ್ಲಿಯೂ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮವಹಿಸಬೇಕು. ಬೋರ್‌ವೆಲ್‌ಗ‌ಳಲ್ಲಿ ಅಂತರ್ಜಲ ಕ್ಷೀಣಿಸಿದರೆ, ಪರ್ಯಾಯವಾಗಿ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಜಿಲ್ಲೆಯ ಎಲ್ಲ 708 ಗ್ರಾಮಗಳಿಗೂ ಜಲ ಜೀವನ್‌ ಯೋಜನೆಯಡಿ ನೀರಿನ ಸಂಪರ್ಕ ಕಲ್ಪಿಸಬೇಕು ಎಂದು ಸೂಚಿಸಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ್‌ ಅವರು ಮಾತನಾಡಿ, ನಾನು ಈ ಸಮಸ್ಯೆ ಅನುಭವಿಸಿದ್ದೇನೆ. ಫೋನ್‌ ಮಾಡಿದರೂ ಸ್ವೀಕರಿಸದೇ ಸ್ವಿಚ್‌ ಆಪ್‌ ಮಾಡಿದ್ರು ಎಂದು ಪಿಡಿಒ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಫೋನ್‌ ಸ್ವಿಚ್‌ ಆಫ್‌ ಮಾಡಿದ್ರೆ, ನೋಟಿಸ್‌ ನೀಡಲಾಗುವುದು. ಎಲ್ಲ ಪಿಡಿಒಗಳಿಗೆ ಸರ್ಕಾರಿ ಮೊಬೈಲ್‌ ಸಿಮ್‌ ನೀಡುವಂತೆ ಜಿಪಂ ಸಿಇಒಗೆ ಇದೇ ಸಂದರ್ಭದಲ್ಲಿ ತಿಳಿಸಿದರು.

ಒಂದು ವಾರದಲ್ಲಿ ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲಿ ಗ್ರಾಮಸಭೆ ಕರೆದು ಮನೆಗಳ ವಿತರಣೆ (ನಿಗದಿ)ಗೆ ಕ್ರಮಕೈಗೊಳ್ಳಬೇಕು. ಯಾವುದೇ ಹಣ ಪಡೆಯದೇ ಬಡವರಿಗೆ ಮನೆಗಳ ಸೌಲಭ್ಯ ಕಲ್ಪಿಸಬೇಕು. ತಮ್ಮ ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಶೌಚಾಲಯ, ಚರಂಡಿಗಳ ಸ್ವತ್ಛತೆಗೆ ಕ್ರಮವಹಿಸಬೇಕೆಂದು ಸೂಚಿಸಿದರು.

ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌., ಜಿಪಂ ಸಿಇಒ ಅಮರೇಶ ನಾಯ್ಕ, ಎಸ್‌ಪಿ ಡಾ| ಸಿ.ಬಿ. ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಶಾ ಆಲಂ ಹುಸೇನ್‌ ಇದ್ದರು

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.