ಶರಣರನ್ನು ಆಯಾ ಜಾತಿಗೆ ಸೀಮಿತಗೊಳಿಸಬೇಡಿ: ಶಾಸಕ ನಾಯಕ


Team Udayavani, Jan 22, 2018, 4:49 PM IST

YAD.jpg

ಸುರಪುರ: ಶರಣ ಸಂಕುಲದಲ್ಲಿಯೇ ನೇರ ನುಡಿ, ದಿಟ್ಟ ನಡೆಯ ಶರಣ ಎಂಬ ಅಭಿಧಾನಕ್ಕೆ ಪಾತ್ರನಾಗಿರುವ ಅಂಬಿಗರ ಚೌಡಯ್ಯನ ವಚನಗಳು ಚಾಟಿ ಏಟಿನಂತ್ತಿವೆ. ಅವರ ವಚನ ಮತ್ತು ತತ್ವಾದರ್ಶಗಳು ಸಮಾಜ ಬದಲಾವಣೆಯಲ್ಲಿ ಪೂರಕವಾಗಿವೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ರವಿವಾರ ತಾಲೂಕು ಆಡಳಿತ ಏರ್ಪಡಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ
ಜಯಂತ್ಯುತ್ಸವದಲ್ಲಿ ಅವರು ಮಾತನಾಡಿ, ಸಮಾಜದಲ್ಲಿ ಬೇರೂರಿದ್ದ ಮೂಢನಂಬಿಕೆ ಕಿತ್ತೂಗೆಯಲು ಚೌಡಯ್ಯನವರು
ಶ್ರಮಿಸಿದ್ದರು. ಹೀಗಾಗಿ ಅವರೊಬ್ಬ ಶ್ರೇಷ್ಠ ಮತ್ತು ನಿಜಶರಣ ಎಂಬ ಅಭಿಧಾನಕ್ಕೆ ಪಾತ್ರರಾಗಿದ್ದಾರೆ. ಅವರ ವಚನ
ಮತ್ತು ತತ್ವದಾರ್ಶಗಳು ಸಾರ್ವಕಾಲಿಕ ಶ್ರೇಷ್ಠವಾಗಿವೆ ಎಂದರು. ಸರಕಾರ ಕೂಡ ಜಾತಿಗೊಬ್ಬ ಶರಣರನ್ನು ಗುರುತಿಸಿ ಅವರ ಹೆಸರಲ್ಲಿ ಜಯಂತಿ ಆಚರಣೆ ಜಾರಿಗೆ ತಂದು ಪರೋಕ್ಷವಾಗಿ ಜಾತಿಯತೇ ಪ್ರತಿಪಾದಿಸುತ್ತಿದೆ. ಶರಣರನ್ನು ಆಯಾ ಜಾತಿಗೆ ಸೀಮಿತಗೊಳಸದೆ ಸಮಾಜದ ಆಸ್ತಿಯನ್ನಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ತಹಶೀಲ್ದಾರ್‌ ಸುರೇಶ ಅಂಕಲಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗಸಭೆ ಅಧ್ಯಕ್ಷೆ ಕವಿತಾ ಎಲಿಗಾರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೂಗೂರೇಶ ವಾರದ, ಎಪಿಎಂಸಿ ಅಧ್ಯಕ್ಷ ನಿಂಗಣ್ಣ ಬಾದ್ಯಾಪುರ, ಪಿಐ ಟಿ.ಆರ್‌.
ರಾಘವೇಂದ್ರ ವೇದಿಕೆಯಲ್ಲಿದ್ದರು. 

ಸಮಾಜದ ಪ್ರಮುಖರಾದ ಶಿವಪ್ಪ ಕಟ್ಟಿಮನಿ, ಮಾನಪ್ಪ ಸೂಗೂರು ವೆಂಕಟೇಶ ಪರಾಶಿ, ಪಾರಪ್ಪ ಗುತ್ತೇದಾರ, ಮಾನಪ್ಪ ಚಳ್ಳಗಿಡ, ವೆಂಕಟರೆಡ್ಡಿ ಬೋವಿ, ಹಿನ್ನಪ್ಪ ತಳವಾರ, ಮಲ್ಲು ಬಿಲ್ಲವ್‌, ರಮೇಶಗೌಡ, ರಾಮುನಾಯಕ ಅರಳಳ್ಳಿ, ಮಲ್ಲಪ್ಪ ವಗ್ಗಾ, ರವಿ ಗುತ್ತೇದಾರ, ರಾಘವೇಂದ್ರ ಗೋಡೆಕಾರ, ನಾಗರೆಡ್ಡಿ ರತ್ತಾಳ, ಯಲ್ಲಪ್ಪ ರತ್ತಾಳ, ಖಾಲೀದಹ್ಮದ್‌ ತಾಳಿಕೋಟ ಇದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಹಣಮಂತ ಪೂಜಾರಿ
ನಿರೂಪಿಸಿ, ವಂದಿಸಿದರು.

ಕಾಮಗಾರಿ ವಿಳಂಬವಾದಲ್ಲಿ ಕ್ರಮ ಖಚಿತ: ತಾಲೂಕಿನಲ್ಲಿ ವಿವಿಧ ಭವನಗಳ ಕಾಮಗಾರಿ ಆಮೆಗತಿಯಲ್ಲಿ ನಡೆದಿವೆ. ಚುಣಾವಣೆ ಒಳಗಾಗಿ ಎಲ್ಲಾ ಭವನಗಳ ಕಾಮಗಾರಿ ಪೂರ್ಣಗೊಳಿಸುವಂತೆ ಭೂ ಸೇನಾ ನಿಗಮದ ಅಭಿಯಂತರರಿಗೆ ಮತ್ತು ನಿರ್ದೇಶಕರಿಗೆ ಸೂಚೆನೆ ನೀಡಿದ್ದೇನೆ. ವಿಳಂಬವಾದಲ್ಲಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಸಿದ್ದೇನೆ. ಯಾವ ಸಮುದಾಯ ಬಾಂಧವರು ಆತಂಕಗೊಳ್ಳುವ ಅಗತ್ಯವಿಲ್ಲ.
 ರಾಜಾ ವೆಂಕಟಪ್ಪ ನಾಯಕ, ಶಾಸಕ

ಟಾಪ್ ನ್ಯೂಸ್

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.