ಮಡಿವಾಳ ಸಮುದಾಯ ಎಸ್‌ಸಿಗೆ ಸೇರಿಸಲು ಒತ್ತಾಯಿಸಿ ಕತ್ತೆ ಮೆರವಣಿಗೆ
Team Udayavani, Oct 10, 2017, 4:44 PM IST
ಸುರಪುರ: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಒತ್ತಾಯಿಸಿ ತಾಲೂಕು ಮಡಿವಾಳ ಸಂಘ ಕತ್ತೆಗಳ
ಮೆರವಣಿಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಿತು. ಈ ಕುರಿತು ತಹಶೀಲ್ದಾರ ಮುಖಾಂತರ ಸಿಎಂಗೆ ಮನವಿ ಸಲ್ಲಿಸಿ, ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ಕೇಂದ್ರ ಸರಕಾರಕ್ಕೆ ಶೀಘ್ರ ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ 15ರಿಂದ 18 ಲಕ್ಷ ಜನಸಂಖ್ಯೆ ಹೊಂದಿರುವ ಮಡಿವಾಳ ಸಮುದಾಯ ಹಿಂದುಳಿದ ಜನಾಂಗದಲ್ಲಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಶೋಷಣೆಗೊಳಪಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಕರ್ನಾಟಕ ರಾಜ್ಯದಲ್ಲಿ ಮಡಿವಾಳ ಸಂಘ ಸ್ಥಾಪಿಸಿ, ಈ ಹಿಂದೆ ಸರಕಾರಕ್ಕೆ ಒತ್ತಾಯಿಸಲಾಗಿದೆ. ಆದರೂ ಸರಕಾರ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ವಿಷಾಧನಿಯ. ಡಾ| ಅನ್ನಪೂರ್ಣಮ್ಮ ವರದಿ ಅನುಸಾರ ಇತರೆ ರಾಜ್ಯಗಳಲ್ಲಿ ಕೂಡಾ ಮಡಿವಾಳ ಸಮುದಾಯವನ್ನು ಶೀಘ್ರ ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಲು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು
ಆಗ್ರಹಿಸಿದ್ದಾರೆ.
ಮಡಿವಾಳ ಸಮುದಾಯದ ತಾಲೂಕು ಅಧ್ಯಕ್ಷ ಗುರಣ್ಣ ಹಗರಟಿಗಿ, ಚಂದ್ರಶೇಖರ ಗೋಗಿ, ಚಂದ್ರಶೇಖರ ಹುಣಸಗಿ, ಮೌನೇಶ ಆಲ್ದಾಳ, ಹಣಮಂತ ಚಂದನಕೇರಿ, ಬಸವರಾಜ ಬೀರನೂರ, ಭೀಮಣ್ಣ ಚಂದನಕೇರಿ, ಹಣಮಂತ ಚಂದಲಾಪುರ, ಮಡಿವಾಳಪ್ಪ, ಶೇಖರ, ಮೌನೇಶ, ದಯಾನಂದ, ದೇವರಾಜ, ಯಂಕಪ್ಪ ಗುರುರಾಜ, ಅಪ್ಪಣ್ಣ, ನಾಗಪ್ಪ, ಬಾಬು ಬಲಶಟ್ಟಿಹಾಳ, ಬಸವರಾಜ, ಮರೆಪ್ಪ ಹಾಗೂ ಸಮುದಾಯದ ನೂರಾರು ಜನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.