ಡಾ| ಅಂಬೇಡ್ಕರ್ ಸಮಾಜದ ಚಿಕಿತ್ಸಕ
Team Udayavani, Apr 15, 2018, 4:50 PM IST
ಯಾದಗಿರಿ: ಭಾರತ ರತ್ನ ಡಾ| ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಕೊಡುಗೆ ನೀಡುವುದರ ಮೂಲಕ ಸಮಾಜದ
ಚಿಕಿತ್ಸಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಂಜುನಾಥ್ ಜೆ. ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ| ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾನ್ ಮಾನವತಾವಾದಿ ಡಾ| ಬಿ.ಆರ್.ಅಂಬೇಡ್ಕರ್ ಅವರ 127ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಾ| ಬಿ.ಆರ್.ಅಂಬೇಡ್ಕರ್ ಮಾನವ ಹಕ್ಕುಗಳ ಹೋರಾಟಗಾರ, ರಾಜಕೀಯ ತಜ್ಞ, ಸಮಾಜಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಇತಿಹಾಸ ತಜ್ಞ, ಖ್ಯಾತ ಚಿಂತಕ, ವಿಶ್ವಮಾನವ, ಆಧುನಿಕ ಭಾರತದ ನಿರ್ಮಾಪಕ, ಶಿಕ್ಷಣ ತಜ್ಞ, ಕಾನೂನು ತಜ್ಞ, ಸ್ತ್ರೀ ಸ್ವಾತಂತ್ರ್ಯವಾದಿ, ಖ್ಯಾತ ಲೇಖಕ, ಶ್ರೇಷ್ಠ ವಾಗ್ಮಿ, ಶಿಸ್ತಿನ ಸಿಪಾಯಿ, ವಿಚಾರವಾದಿ, ಸಮಾಜವಾದಿ, ಅಹಿಂಸಾವಾದಿ, ಕ್ರಾಂತಿಕಾರಿ, ಬಹುಭಾಷಾ ತಜ್ಞ, ನೀರಾವರಿ ತಜ್ಞ, ಕಾರ್ಮಿಕರ ಕಣ್ಮಣಿ, ಬಡವರ ಬಂಧು, ರೈತರ ಪಾಲಿನ ಭಾಗ್ಯದಾತ, ಜಾತಿ ಪದ್ಧತಿ ನಿವಾರಕ, ಭಾರತೀಯ ರಿಜರ್ವ್ ಬ್ಯಾಂಕ್ ಸೃಷ್ಟಿಕರ್ತ ಹೀಗೆ ಹತ್ತು ಹಲವು ವ್ಯಾಖ್ಯಾನಗಳಿಂದ ಅವರ ಹೆಸರನ್ನು ಉಲ್ಲೇಖ ಮಾಡಬಹುದು ಎಂದು ಅವರು ಬಣ್ಣಿಸಿದರು.
ವಿಶ್ವಸಂಸ್ಥೆ ಡಾ| ಅಂಬೇಡ್ಕರ್ ಅವರ ಜನ್ಮ ದಿನವನ್ನು ವಿಶ್ವ ಜ್ಞಾನ ದಿನವನ್ನಾಗಿ ಆಚರಿಸುತ್ತಿದೆ. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಘೋಷಣೆ ಆಗಿ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಪ್ರಕ್ರಿಯೆಯೂ ಕೂಡ ಡಾ| ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿಯೇ ನಡೆಯುತ್ತಿದೆ ಎಂದು ಹೇಳಿದರು.
ದೇಶದಲ್ಲಿ 134 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇದೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಅನೇಕ ಜಾತಿ, ಧರ್ಮ, ಮತ, ಭಾಷೆ, ಸಾಂಪ್ರದಾಯ, ಆಚರಣೆ ಇದ್ದರೂ ದೇಶ ಒಟ್ಟಾಗಿ ಪ್ರಪಂಚದಲ್ಲಿ ಮುನ್ನಡೆಯುತ್ತಿರುವುದಕ್ಕೆ ಸಂವಿಧಾನ ಮೂಲ ಕಾರಣವಾಗಿದೆ. ಯುರೋಪ್‌ನಲ್ಲಿ ಒಂದೇ ಧರ್ಮ ಆಚರಣೆ, ಒಂದೇ ಭಾಷೆ ಹೆಚ್ಚು ಬಳಕೆಯಲ್ಲಿದ್ದರೂ ಹಲವು ರಾಷ್ಟ್ರಗಳಾಗಿವೆ ಎಂದು ವಿವರಿಸಿದರು.
ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು, ಜವಾಬ್ದಾರಿ ಕೊಟ್ಟಿದೆ. ಆದ್ದರಿಂದ ಪ್ರತಿಯೊಬ್ಬರು ಬಾಬಾ ಸಾಹೇಬರ ಆಶಯದಂತೆ ವಿಧಾನ
ಪಾಲಿಸುವುದರ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು. ಪ್ರತಿ ಪಾಲಕ, ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.
ನ್ಯೂ ಕನ್ನಡ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಘುನಾಥ ರೆಡ್ಡಿ ಅವರು ಉಪನ್ಯಾಸ ನೀಡಿ, ಡಾ| ಬಿ.ಆರ್.ಅಂಬೇಡ್ಕರ್
ಅವರು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೇರಿದವರಲ್ಲ. ಅವರು ವಿಶ್ವ ನಾಯಕರಾಗಿದ್ದಾರೆ. ಅವರು ನೀಡಿದ ಸಂವಿಧಾನ ಕೊಡುಗೆಯಿಂದ ಪ್ರತಿಯೊಬ್ಬರು ಸಂತೋಷದ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಹೇಳಿದರು.
ಹಕ್ಕು ಕೇಳಿದರೆ ಅಲ್ಲಿ ಶೋಷಣೆ ಕಡಿಮೆಯಾಗುತ್ತದೆ. ಅಸ್ಪೃಶ್ಯತೆ ಆಚರಣೆ ಭಾರತಕ್ಕೆ ಅಂಟಿದ ರೋಗವಾಗಿದೆ. ಇದು ನಿವಾರಣೆ ಆಗುವವರೆಗೂ ದೇಶದ ಪ್ರಗತಿ ನಿಧಾನಗತಿಯಲ್ಲಿರುತ್ತದೆ. ಆದ್ದರಿಂದ ಅಸ್ಪೃಶ್ಯತೆ ನಿವಾರಣೆ ಪ್ರತಿಯೊಬ್ಬ ಭಾರತೀಯನ ಕರ್ತವ್ಯ
ಎಂದು ಡಾ| ಅಂಬೇಡ್ಕರ್ ಹೇಳಿದ್ದರು ಎಂದು ಹೇಳಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಅವಿನಾಶ್ ಮೆನನ್ ರಾಜೇಂದ್ರನ್, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸುಬ್ರನಾಯಕ ಇದ್ದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗಣಪತಿ ಪೂಜಾರಿ ಸ್ವಾಗತಿಸಿದರು. ಸುರಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೀನಾಕ್ಷಿ ಪಾಟೀಲ ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆಯ ದೇವಿಂದ್ರ ರುದ್ರವಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.