ರಸ್ತೆ ಮೇಲೆ ಚರಂಡಿ ನೀರು: ನರಕಯಾತನೆ


Team Udayavani, May 18, 2018, 1:24 PM IST

yad-3.jpg

ಯಾದಗಿರಿ: ಯಾದಗಿರಿ ಮತಕ್ಷೇತ್ರದ ವ್ಯಾಪ್ತಿಯ ಶಹಾಪುರ ತಾಲೂಕು ಜೋಳದಡಗಿ ಗ್ರಾಮದಲ್ಲಿ ರಸ್ತೆ ಮೇಲೆ ಚರಂಡಿ ನೀರು ಹರಿದಾಡುತ್ತಿದ್ದು, ಗ್ರಾಮಸ್ಥರು ಪ್ರತಿನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.

ಗ್ರಾಮದ ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ಗಾತ್ರದ ತಗ್ಗು-ಗುಂಡಿಗಳು ಬಿದ್ದಿವೆ. ಹೊಂಡಗಳಲ್ಲಿ ಕೊಳಚೆ ನೀರು ತುಂಬಿ ಚರಂಡಿಯಾಗಿ ಪರಿಣಮಿಸಿದೆ. ಇದರಿಂದ ನಾಗರಿಕರಿಗೆ ಮತ್ತು ವಾಹನ ಸವಾರರಿಗೆ ಅಡ್ಡಿಯುಂಟಾಗಿ ನಿತ್ಯವೂ ಈ ರಸ್ತೆ ಮುಖಾಂತರ ಸಂಚರಿಸಲು ಪರದಾಡುವಂತಾಗಿದೆ. ಕೂಡಲೇ ಸಂಬಂಧಪಟ್ಟವರು ರಸ್ತೆ ದುರಸ್ಥಿಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಕಲುಷಿತ ನೀರು ಕಚ್ಚಾ ರಸ್ತೆ ಮೇಲೆ ಹರಿದಾಡಿ ಇಡೀ ಗ್ರಾಮ ಗಬ್ಬೆದ್ದು ನಾರುತ್ತಿದೆ. ಇದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುತ್ತಿದೆ. ಮಳೆಗಾಲದಲ್ಲಿ ಇನ್ನಷ್ಟು ಪರಿಸ್ಥಿತಿ ಬಿಗಾಯಿಡಸಲಿದ್ದು, ಡೆಂಘೀ, ಮಲೇರಿಯಾ, ಚಿಕೂನ್‌ ಗುನ್ಯಾ ಸೇರಿದಂತೆ
ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು, ಸಂಬಂಧಪಟ್ಟವರು ಕೂಡಲೇ ಚರಂಡಿ ವ್ಯವಸ್ಥೆ ಕಲ್ಪಿಸಿ ಸ್ವತ್ಛತೆ ಕಾಪಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗ್ರಾಮದ ಅಭಿವೃದ್ಧಿ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಗ್ರಾಮದ ಸಮಸ್ಯೆಗಳ ಬಗ್ಗೆ ತಾಪಂ ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜೋಳದಡಗಿ ಗ್ರಾಮಕ್ಕೆ ಭೇಟಿ ನೀಡಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ಗ್ರಾಮದಲ್ಲಿ ರಸ್ತೆ ದುರಸ್ತಿ ಮಾಡಿ ಫಾಗಿಂಗ್‌, ಬ್ಲಿಚಿಂಗ್‌ ಪೌಡರ್‌ ಸಿಂಪಡಿಸಿ ಮುಂದೆ ಮಲೇರಿಯಾ, ಡೆಂಘೀ ಜ್ವರ ಸೇರಿದಂತೆ ಮಾರಕ ಕಾಯಿಲೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಿಷ್ಕಾಳಜಿ ವಹಿಸಿದರೆ ಮುಂದಿನ ದಿನಗಳಲ್ಲಿ ರಾಜ್ಯ ಹೆದ್ದಾರಿ ರಸ್ತೆ ತಡೆ ಹಾಗೂ ಉಗ್ರ ಪ್ರತಿಭಟನೆ ಮಾಡಲಾಗುವುದು ಅವರು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.