ನೂತನ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಚಾಲನೆ

Team Udayavani, Mar 6, 2018, 3:32 PM IST

07-down-1.png

ನಾರಾಯಣಪುರ: ಸಾರ್ವಜನಿಕರಿಗೆ ಅನುಕೂಲವಾಗವ ನಿಟ್ಟಿನಲ್ಲಿ ಸರಕಾರ ಉತ್ತಮ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದ್ದು, ಮುಂಬರುವ ದಿನಗಳಲ್ಲಿ ಸಕಲ ಸೌಲಭ್ಯಗಳಿರುವ ಭವ್ಯ ಬಸ್‌ ನಿಲ್ದಾಣ ನಿರ್ಮಾಣಗೊಂಡು ಪ್ರಯಾಣಿಕರಿಗೆ ಅನುಕೂಲ ಒದಗಿಸಲಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಪಟ್ಟಣದ ಬಸ್‌ ನಿಲ್ದಾಣ ಆವರಣದಲ್ಲಿ ಸೋಮವಾರ ನೂತನ ಬಸ್‌ ನಿಲ್ದಾಣ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಸಾರ್ವಜನಿಕರಿಗೆ ಉಪಯೋಗಕ್ಕೆ ಬರುವ ಕಟ್ಟಡ ಕಾಮಗಾರಿಗಳು ದೀರ್ಘ‌ ಕಾಲ ಬಾಳಿಕೆ ಬರಬೇಕು ಹಾಗೂ ಗುಣಮಟ್ಟದಿಂದ ಕೂಡಿರಬೇಕು. ಇಂತಹ ಸಂದರ್ಭದಲ್ಲಿ ಸ್ಥಳೀಯರು ಕೂಡ ಗುತ್ತಿಗೆದಾರರಿಗೆ ಹಾಗೂ ಸಾರಿಗೆ ಇಲಾಖೆಯವರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. 

ಮತಕ್ಷೇತ್ರದ ಅಭಿವೃದ್ಧಿಗಾಗಿ ಸರಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಹತ್ತು ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಅವುಗಳಲ್ಲಿ ಪ್ರಮುಖವಾಗಿ ಕುಡಿಯುವ ನೀರು, ಸಿಸಿ ರಸ್ತೆ, ವಿವಿಧ ವಸತಿ ಯೋಜನೆ ಅಡಿಯಲ್ಲಿ ಮನೆಗಳು, ಅಗಸಿ, ಸಮುದಾಯ ಭವನ ನಿರ್ಮಾಣ ಕಾಮಗಾರಿಗಳು ಪೂರ್ಣಗೊಂಡಿವೆ. ಬಾಕಿ ಉಳಿದಿರುವ ಕಾಮಗಾರಿಗಳು ಕೂಡ ಪ್ರಗತಿಯಲ್ಲಿದ್ದು, ಮುಂಬರುವ ದಿನಗಳಲ್ಲಿ ಪೂರ್ಣಗೊಳ್ಳಲಿವೆ ಎಂದು ಹೇಳಿದರು.

ನಮ್ಮ ಅಧಿಕಾರ ಅವಧಿಯಲ್ಲಿ ಎರಡು ಹಂಗಾಮಿನ ಬೆಳೆಗಳಿಗೆ ಕಾಲುವೇ ನೀರು ಒದಗಿಸಲು ಶ್ರಮಿಸಿದ್ದೇನೆ. ಪ್ರಸ್ತುತ ಹಂಗಾಮಿಗೂ ಮಾರ್ಚ್‌ 31ವರೆಗೆ ನೀರು ಹರಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು. 

ಕಾರ್ಯಕ್ರಮದಲ್ಲಿ ಈ.ಕ.ರಾ.ರ. ಸಾರಿಗೆ ಸಂಸ್ಥೆಯ ವಿಭಾಗಿಯ ನಿಯಂತ್ರಣಾಧಿಕಾರಿ ಕೆ. ಸಂತೋಷ ಮಾತನಾಡಿ, ಒಂದು ಕೋಟಿ ವೆಚ್ಚದಲ್ಲಿ ನೂತನ ಬಸ್ಸನಿಲ್ದಾಣ ನಿರ್ಮಾಣವಾಗಲಿದ್ದು, ಮೂಲಭೂತ ಸೌಕರ್ಯ ಸೇರಿದಂತೆ ಮಹಿಳೆಯರಿಗೆ ವಿಶ್ರಾಂತಿ ಕೋಣೆ, ಕ್ಯಾಂಟಿನ್‌, ಮನೋರಂಜನೆಗೆ ಟಿ.ವಿ, ಪ್ರತ್ಯೆಕ ಶೌಚಾಲಯ, 5 ಬಸ್ಸುಗಳು ನಿಲ್ಲುವ ಪ್ಲಾಟ್‌ಪಾರ್ಮ, 3 ಮಳಿಗೆ ಗಳಿರುವ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಹೇಳಿದರು.

ಎಇಇ ಅಣ್ಣಪ್ಪ, ಉಪಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಮಹಿಪಾಲ್‌, ಸುರಪುರ ಘಟಕ ವ್ಯವಸ್ಥಾಪಕ ಜಯವಂತ, ಮುಖಂಡರಾದ ನಾಗಣ್ಣ ದಂಡಿನ್‌, ಸೂಲಪ್ಪ ಕಮತಗಿ, ಅನೀಫ್‌ ಮಾಸ್ಟರ್‌, ಗ್ರಾಪಂ ಅಧ್ಯಕ್ಷ ಧೀರಪ್ಪ ರಾಠೊಡ, ಅಡಿವೆಪ್ಪ ಭಂಗಿ ವೇದಿಕೆ ಮೇಲಿದ್ದರು. 

ಪಿಎಸ್‌ಐ ಮಾನಪ್ಪ ಯಕ್ಷಂತಿ, ಅರ್ಚಕ ರಾಘವೇಂದ್ರ ಆಚಾರ್ಯ, ನಿಂಗಪ್ಪ ದೊರಿ, ಉಮರ್‌ ಚೌದ್ರಿ, ಶಾಂತಪ್ಪ ಮೇಸ್ತಕ, ನಾಗರಾಜ ಜೂಗುರ, ಸುರೇಶ ನಾಯಕ, ಬಸವರಾಜ ದೇಸಾಯಿ, ಅಮರೇಶ ಕೋಳುರ, ಹಣಮೇಶ ಕುಲಕರ್ಣಿ, ಕೆ.ಪಿ ಮನೋಹರ ಸೇರಿದಂತೆ ಕಾಂಗ್ರೆಸ್‌ ಕಾರ್ಯಕರ್ತರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಘಟಕ ವ್ಯವಸ್ಥಾಪಕ ಜಯವಂತ ಸ್ವಾಗತಿಸಿದರು, ಯಮನಪ್ಪ ಜಂಜಿನಗಡ್ಡಿ ನಿರೂಪಿಸಿದರು, ಚಿದಂಬರ ದೇಸಾಯಿ ವಂದಿಸಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.