ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ: ಯಡಿಯಾಪೂರ
ಇಂದಿನ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ಮುಂದಿದ್ದಾರೆ.
Team Udayavani, Jan 29, 2021, 6:24 PM IST
ಯಾದಗಿರಿ: ಗುರುಗಳ ಮಾರ್ಗದರ್ಶನದಿಂದ ಗುರಿ ಸಾಧಿಸಿ ಉನ್ನತ ವ್ಯಾಸಂಗ ಮಾಡಿ ಜಿಲ್ಲೆಗೆ ಒಳ್ಳೆಯ ಹೆಸರು ತರಬೇಕು. ಈ ಮೂಲಕ ಪ್ರತಿಯೊಬ್ಬರೂ
ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎಂದು ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ್ ಯಡಿಯಾಪೂರ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದ ವಿವಿಧ ಇಲಾಖೆ, ಕಲಿಕಾ ಟಾಟಾ ಟ್ರಸ್ಟ್, ಅಜೀಮ್ ಪ್ರೇಮ್‌ಜೀ, ಮಕ್ಕಳ ಸಹಾಯವಾಣಿ,
ಡಾನ್ ಬೋಸ್ಕೋ ಸೇವಾ ಸಂಸ್ಥೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಿಮಿತ್ತ ಪ್ರತಿಭಾನ್ವಿತ ಬಾಲಕಿಯರಿಗೆ
ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿ ಕಾರಿಗಳೊಂದಿಗೆ ಸಂವಹನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ಮುಂದಿದ್ದಾರೆ. ಎಸ್ಸೆಸ್ಸೆಲ್ಸಿ- ಪಿಯುಸಿ ಪರೀಕ್ಷೆಗಳಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸುತ್ತಿದ್ದಾರೆ. ನೀವೂ ಭವಿಷ್ಯದಲ್ಲಿ ದೊಡ್ಡ ಅಧಿಕಾರಿಗಳಾಗಬೇಕೆಂದು ಸಂಕಲ್ಪ ಮಾಡಿ ಎಂದರು. ಜಿಪಂ ಸಿಇಒ ಶಿಲ್ಪಾ ಶರ್ಮಾ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಸಮಾಜದಲ್ಲಿ ಹೆಣ್ಣಿನ ಅಸಮಾನತೆ ಹೋಗಲಾಡಿಸಲು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ
ಪ್ರಾಸ್ತಾವಿಕ ಮಾತನಾಡಿದರು. ಎಲ್ಲ ಹೆಣ್ಣು ಮಕ್ಕಳ ಪ್ರತಿನಿ ಧಿಯಾಗಿ, ಮುಖ್ಯ ಅತಿಥಿಯಾಗಿ ವಿದ್ಯಾರ್ಥಿನಿ ಶಿಲ್ಪಾ ನಿಂಗಣ್ಣ ಅವರನ್ನು ಸನ್ಮಾನಿಸಲಾಯಿತು.
ಈ ವೇಳೆ ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕಾರಿಗಾರ, ಸಿದ್ದರಾಜ್ ಸೇರಿ ವಿವಿಧ ಅಧಿ ಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿನಿಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.