ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ಸಲ್ಲ
Team Udayavani, Feb 19, 2019, 10:32 AM IST
ಯಾದಗಿರಿ: ಚುನಾವಣೆ ಪ್ರಕ್ರಿಯೆಯಲ್ಲಿ ನೇಮಕವಾಗುವ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗಳ ಪಾತ್ರ ಅತ್ಯಂತ ಜವಾಬ್ದಾರಿಯುತ ಆಗಿರುತ್ತದೆ. ಒಂದು ಸಣ್ಣ ತಪ್ಪು ದೊಡ್ಡ ಸಮಸ್ಯೆಗಳಿಗೆ ಕಾರಣ ಆಗುತ್ತದೆ. ಆದ್ದರಿಂದ ಚುನಾವಣಾ ಕಾರ್ಯದಲ್ಲಿ ಯಾರು ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ನೇಮಿಸಿದ ಮಾಸ್ಟರ್ ಟ್ರೇನರ್‌ಗಳಿಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣೆ ಅವಧಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಂಪೂರ್ಣ ಕಾನೂನು ಅಧಿಕಾರವನ್ನು ಭಾರತ ಚುನಾವಣಾ ಆಯೋಗ ನೀಡಿರುತ್ತದೆ. ಶಾಂತಿ ಮತ್ತು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯಲು ಎಲ್ಲರೂ ಶ್ರಮಿಸಬೇಕು ಮತ್ತು ಚುನಾವಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಕರ್ತವ್ಯದಲ್ಲಿ ಶಿಸ್ತು, ಸಮಯ ಪಾಲನೆ ಮುಖ್ಯ. ಸಮಯ ಪಾಲನೆ ಮಾಡದ, ನಿರ್ಲಕ್ಷ್ಯ ತೋರುವ ಮತ್ತು ಬೇಜವಾಬ್ದಾರಿಯಿಂದ ವರ್ತಿಸುವ ಅಧಿಕಾರಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಿದರು.
ಮಾಸ್ಟರ್ ಟ್ರೇನರ್‌ಗಳು ಈ ಹಿಂದಿನ ಚುನಾವಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಇರುತ್ತದೆ. ಆದರೆ, ಭಾರತ ಚುನಾವಣಾ ಆಯೋಗವು ಪ್ರತಿ ಚುನಾವಣೆಯಲ್ಲಿ ಕೆಲವು ಸುಧಾರಣೆ ಅಥವಾ ಬದಲಾವಣೆ ಮಾಡುವುದರಿಂದ ಪ್ರತಿಯೊಬ್ಬರಿಗೂ ತರಬೇತಿ ಅವಶ್ಯ ಇರುತ್ತದೆ. ಈ ತರಬೇತಿಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಸಮಯೋಚಿತವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ತರಬೇತಿಯನ್ನು ಸರಿಯಾಗಿ ಅರ್ಥೈಸಿಕೊಂಡರೆ ಮತಗಟ್ಟೆ ಅಧ್ಯಕ್ಷಧಿಕಾರಿ (ಪಿಆರ್‌ಒ) ಮತ್ತು ಸಹಾಯಕ ಮತಗಟ್ಟೆ ಅಧಿಕಾರಿ(ಎಪಿಆರ್‌ಒ)ಗಳಿಗೆ ಚೆನ್ನಾಗಿ ತರಬೇತಿ ನೀಡಲು ಸಾಧ್ಯ ಆಗುತ್ತದೆ ಎಂದು ಸಲಹೆ ನೀಡಿದರು.
ವಿದ್ಯುನ್ಮಾನ ಮತದಾನ ಯಂತ್ರಗಳಾದ ವಿವಿ ಪ್ಯಾಟ್, ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್, ವಿಎಸ್‌ಡಿಯುಗಳ ಕಾರ್ಯ ನಿರ್ವಹಣೆ ಬಗ್ಗೆ ಮಾಸ್ಟರ್ ಟ್ರೇನರ್‌ಗಳು ಸ್ವತಃ ಪ್ರಾಯೋಗಿಕವಾಗಿ ತಿಳಿದುಕೊಳ್ಳಬೇಕು. ಮುಂದೆ ಪಿಆರ್‌ಒ ಮತ್ತು ಎಪಿಆರ್‌ಒಗಳಿಗೆ ತರಬೇತಿ ನೀಡುವಾಗ ಮತಯಂತ್ರಗಳ ಬಳಕೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಲು ಸಾಧ್ಯವಾಗುತ್ತದೆ. ಮಸ್ಟರಿಂಗ್, ಡಿಮಸ್ಟರಿಂಗ್ ಹಾಗೂ ಮತದಾನ ಕೇಂದ್ರಗಳಲ್ಲಿ ನಿಗದಿತ ಸಮಯದೊಳಗೆ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಬೇಕು. ಚುನಾವಣೆಗೆ ಸಂಬಂಧಿಸಿದ ಅವರ ಪ್ರತಿಯೊಂದು ಸಮಸ್ಯೆಗಳಿಗೆ ಪರಿಹಾರ ನೀಡುವ ಜವಾಬ್ದಾರಿ ಮಾಸ್ಟರ್ ಟ್ರೇನರ್‌ಗಳ ಮೇಲೆ ಇರುತ್ತದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಚುನಾವಣಾ ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ಜಿಲ್ಲಾ ತರಬೇತಿ ನೋಡಲ್ ಅಧಿಕಾರಿ ಅಜೀತ್ ನಾಯಕ್, ಚುನಾವಣಾ ಶಾಖೆಯ ಶಿರಸ್ತೇದಾರ್ ಪರಶುರಾಮ, ಖಲೀಲ್ ಸಾಬ್
ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.