ಪಾಲಿಕೆ ಆಯುಕ್ತರು-ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ನಿರಶನ
Team Udayavani, Dec 23, 2021, 1:40 PM IST
ಹುಮನಾಬಾದ: ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೊಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಹುಮನಾಬಾದ ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಪುರಸಭೆಯಿಂದ ಮುಖ್ಯರಸ್ತೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದ ಸಿಬ್ಬಂದಿ, ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ಸಿಬ್ಬಂದಿ, ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ರಾಜ್ಯದ ವಿವಿಧಡೆ ಹಲ್ಲೆ ನಡೆಯುತ್ತಿರುವ ಘಟನೆಗಳು ಸಂಭವಿಸುತ್ತಿದ್ದು, ಇದೇ ರೀತಿ ಮುಂದುವರಿದರೆ ಕೆಲಸ ನಿರ್ವಹಿಸುವುದು ಕಷ್ಟವಾಗುತ್ತದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಹಲ್ಲೆ ನಡೆಸುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಪುರಸಭೆ ಮುಖ್ಯಾಧಿಕಾರಿ ಶೇಖಚಂದ್ ಪಟೇಲ್, ಸಂಘದ ಅಧ್ಯಕ್ಷ ಸೈಯದ್ ಖಾನ, ಉಪಾಧ್ಯಕ್ಷ ಬಸವರಾಜ, ಕಾರ್ಯದರ್ಶಿ ದತ್ತು ಔರಾದೆ, ಜಾವೀದ್ ಹುಸೇನ್, ಶಾಮದಾಸ, ಸಲ್ಲಿಮ್ ಮಿಯ್ನಾ, ಈಶ್ವರ ತರಲಂಗ, ಬಸವರಾಜ ಸೇರಿದಂತೆ ಅನೇಕ ಸಿಬ್ಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.