ವಿದ್ಯುತ್ ಇಲ್ಲದೇ ಟ್ರ್ಯಾಕ್ಟರ್ ಬೆಳಕಿನಲ್ಲೇ ನಿಶ್ಚಿತಾರ್ಥ!
ಮೂರು ತಿಂಗಳಿಂದ ವಿದ್ಯುತ್ ಇಲ್ಲದೇ ಕಂಗಾಲಾದ ನೀಲಕಂಠರಾಯನ ಗಡ್ಡಿ ಜನ
Team Udayavani, Nov 23, 2019, 9:09 PM IST
ಸಾಂದರ್ಭಿಕ ಚಿತ್ರ.
ಕಕ್ಕೇರಾ:ಮೂರು ತಿಂಗಳಿಂದಲೂ ವಿದ್ಯುತ್ ಇಲ್ಲದೆ ಪರದಾಡುತ್ತಿರುವ ನೀಲಕಂಠರಾಯನ ಗಡ್ಡಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಹೆಡ್ ಲೈಟ್ ಬೆಳಕಿನಲ್ಲಿಯೇ ಶುಕ್ರವಾರ ರಾತ್ರಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ.
ಗ್ರಾಮದಲ್ಲಿ ಮಾದಮ್ಮ-ಸೋಮಣ್ಣ ಇಬ್ಬರಿಗೂ ಶುಕ್ರವಾರ ನಿಶ್ಚಿತಾರ್ಥ ನಿಗದಿಯಾಗಿತ್ತು. ಆದರೆ, ವಿದ್ಯುತ್ ಬೆಳಕಿನ ಸಮಸ್ಯೆ ಎದುರಾಗಿದ್ದರಿಂದ ಗ್ರಾಮಸ್ಥರು ಟ್ರ್ಯಾಕ್ಟರ್ ಲೈಟ್ ಬಳಸಿ ನಿಶ್ಚಿತಾರ್ಥ ಮಾಡಿದ್ದಾರೆ. ಕೃಷ್ಣಾ ನದಿ ಕವಲುಗಳ ನಡುವೆ ನೀಲಕಂಠರಾಯನ ಗಡ್ಡಿ ಗ್ರಾಮವಿದೆ. ಇತ್ತೀಚೆಗೆ ಕೃಷ್ಣಾ ನದಿಗೆ ನಾರಾಯಣಪುರ ಜಲಾಶಯದ ನೀರು ಹರಿಸಿದಾಗ ಪ್ರವಾಹ ಆವರಿಸಿ ಸಂಪರ್ಕ ಕಡಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ನೀಲಕಂಠರಾಯನ ಗಡ್ಡಿಗೆ ಸಂಪರ್ಕ ಹೊಂದಿದ ವಿದ್ಯುತ್ ಲೈನ್ ಜೆಸ್ಕಾಂ ಅಧಿಕಾರಿಗಳು ಕಡಿತಗೊಳಿಸಿದ್ದರು. ಮೂರು ತಿಂಗಳಾದರೂ ಇದುವರೆಗೂ ವಿದ್ಯುತ್ ಸಂಪರ್ಕ ಪುನಃ ಕಲ್ಪಿಸಿಲ್ಲ. ಇದರಿಂದ ಗ್ರಾಮಸ್ಥರು ಕತ್ತಲೆಯಲ್ಲಿಯೇ ಜೀವನ ಸಾಗಿಸುವಂತಾಗಿದೆ. ಸೋಲಾರ್ ವಿದ್ಯುತ್ ಇದ್ದರೂ ತಾಂತ್ರಿಕೆ ದೋಷದಿಂದ ಕೆಟ್ಟಿವೆ.
ಮೊಬೈಲ್ ಸ್ವೀಚ್ ಆಫ್:
ವಿದ್ಯುತ್ ಇಲ್ಲದ್ದರಿಂದ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು, ಸಂವಹನಕ್ಕೆ ಜನರು ಪರದಾಡುವಂತಾಗಿದೆ. ಪ್ರವಾಹ ಅಬ್ಬರಕ್ಕೆ ಇದ್ದ ಪುಟ್ಟ ಸೇತುವೆ ಕೊಚ್ಚಿಕೊಂಡು ಹೋಗಿ ಸಂಚಾರಕ್ಕೂ ತೊಂದರೆಯಾಗಿದೆ. ರಾತ್ರಿ ವೇಳೆ ಸಮಸ್ಯೆಯಾದರೆ ಜೀವಕ್ಕೆ ಸಂಚಕಾರವಿದೆ ಎನ್ನುತ್ತಾರೆ ಗ್ರಾಮಸ್ಥರಾದ ಅಮರಪ್ಪ, ಕನಕಪ್ಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.