ಹೆಸರು-ಉದ್ದು ಖರೀದಿ ಕೇಂದ್ರ ಸ್ಥಾಪನೆ
Team Udayavani, Oct 2, 2020, 6:56 PM IST
ಯಾದಗಿರಿ: ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹೆಸರು, ಉದ್ದು ಖರೀದಿಗೆಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ತಿಳಿಸಿದ್ದಾರೆ.
ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಏಫ್ಪಿಒಗಳ ಮೂಲಕ ಹೆಸರು ಕಾಳು ಪ್ರತಿ ಕ್ವಿಂಟಾಲ್ಗೆ ಸರ್ಕಾರದ ಬೆಂಬಲ ಬೆಲೆ 7,196 ರೂ.ದಂತೆ, ಪ್ರತಿಯೊಬ್ಬ ರೈತರಿಂದ ಎಕರೆಗೆ 4 ಕ್ವಿಂಟಾಲ್ ಖರೀದಿಸಲಾಗುವುದು. ಉದ್ದು ಪ್ರತಿಕ್ವಿಂಟಾಲ್ಗೆ ಬೆಂಬಲ ಬೆಲೆ 6000 ರೂ.ನಂತೆ ಪ್ರತಿಯೊಬ್ಬ ರೈತರಿಂದ ಎಕರೆಗೆ ಕನಿಷ್ಠ 3 ಕ್ವಿಂಟಲ್, ಗರಿಷ್ಠ 6 ಕ್ವಿಂಟಲ್ ಖರೀದಿಸಲಾಗುವುದು. ಉದ್ದು ಖರೀದಿಸುವ ಸಂಬಂಧ, ಜಿಲ್ಲೆಯಲ್ಲಿ ಶ್ರೀ ವಾತ್ಸ ಎಫ್ಪಿಒ ಗುರುಮಠಕಲ್ ವತಿಯಿಂದ ಯಾದಗಿರಿ ನಗರದಲ್ಲಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚಪೇಟ್ಲಾಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಹೆಸರುಕಾಳು ಹಾಗೂ ಉದ್ದು ಖರೀದಿಗೆ ರೈತರ ನೋಂದಣಿ ಕಾರ್ಯ ಸೆ. 30ರಿಂದ ಅ,29ರವರೆಗೆ ಹಾಗೂ ನೋಂದಣಿ ಜೊತೆಗೆ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.
ರೈತರು ಹತ್ತಿರದ ಖರೀದಿ ಕೇಂದ್ರಗಳಲ್ಲಿ ಪಹಣಿ, ಆಧಾರ್ ಕಾರ್ಡ್, ಕೃಷಿ ಇಲಾಖೆ ನೀಡುವ ಫ್ರೂಟ್ಸ್ ಐಡಿ ಪ್ರತಿಗಳೊಂದಿಗೆ ಹೆಸರು ನೋಂದಾಯಿಸಬೇಕು.
ಖರೀದಿ ಕೇಂದ್ರಗಳು: ಶ್ರೀ ವಾತ್ಸ ಎಫ್ಪಿಒ, ಗುರುಮಠಕಲ್, ಯಾದಗಿರಿ ನಗರದಲ್ಲಿ, ಪಿಕೆಪಿಎಸ್ ಚಪೇಟ್ಲಾ, ಪಿಕೆಪಿಎಸ್ ಹತ್ತಿಕುಣಿ, ಪಿಕೆಪಿಎಸ್ ಎಲ್ಲೇರಿ, ಫಾರ್ಮರ್ ಪ್ರೊಡ್ಯುಸರ್ ಆರ್ಗನೈಜೇಷನ್ (ಎಫ್ಪಿಒ)ಸೈದಾಪುರ, ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ ಶಹಾಪುರ, ಫಾರ್ಮರ್ ಪ್ರೊಡ್ಯುಸರ್ ಆರ್ಗನೈಜೇಷನ್ (ಎಫ್ಪಿಒ) ಗಂಗನಾಳ, ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ ಸುರಪುರ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕೆಂಭಾವಿ-1, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕೊಡೇಕಲ್ ಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.