ಗುರುವಿನ ಮಹತ್ವ ಪ್ರತಿಯೊಬ್ಬರು ಅರಿತುಕೊಳ್ಳಲಿ: ಗಂಗಾಧರ ಶ್ರೀ
Team Udayavani, Feb 23, 2018, 4:56 PM IST
ಯಾದಗಿರಿ: ಜೀವನದಲ್ಲಿ ಪ್ರತಿಯೊಬ್ಬರಿಗೂ ಗುರು ಅವಶ್ಯ. ಯಾರು ಗುರು ಮಹತಿಯನ್ನು ಅರಿತು ಬಾಳಿ ಬದುಕುತ್ತಾರೋ ಅಂತವರು ಸದ್ಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ಅಬ್ಬೆತುಮಕೂರು ಶ್ರೀ ವಿಶ್ವಾರಾಧ್ಯ ಮಠದ ಪೀಠಾಧಿಪತಿ ಡಾ| ಗಂಗಾಧರ ಮಹಾಸ್ವಾಮೀಜಿ ಹೇಳಿದರು.
ತಾಲೂಕಿನ ಸುಕ್ಷೇತ್ರ ಅಬ್ಬೆತುಮಕೂರು ಜಾತ್ರಾ ಮಹೋತ್ಸವ ನಿಮಿತ್ತ ಗುರುವಾರ ಬೆಳಗ್ಗೆ ಹಮ್ಮಿಕೊಂಡಿದ್ದ ಶರಣ ಸಂಸ್ಕೃತಿ ಶಿಬಿರ ಮತ್ತು ಗುರು ಶಿಷ್ಯರ ಸಮಾಗಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಸಾಂಸಾರಿಕ ಜೀವನದಲ್ಲಿ ತೊಡಗಿಕೊಂಡಿರುವ ಪ್ರತಿಯೊಬ್ಬ ಮನುಷ್ಯರು ಕೇವಲ ಸಂಸಾರಕ್ಕೆ ಮಾತ್ರ ಅಂಟಿಕೊಳ್ಳಬಾರದು. ಸಾಂಸಾರಿಕ ಜೀವನದಲ್ಲಿ ಸದ್ಗತಿಯನ್ನು ಹೊಂದುವುದು ಅವಶ್ಯ. ಈ ಸದ್ಗತಿಯನ್ನು ಪಡೆಯಬೇಕಾದಲ್ಲಿ ಪ್ರತಿಯೊಬ್ಬರಿಗೂ ಗುರುವಿನ ಅವಶ್ಯಕತೆ ಇದೆ ಎಂದರು.
ಪ್ರತಿಯೊಬ್ಬರೂ ಬದುಕಿನಲ್ಲಿ ಸದಾಚಾರ ಸಂಪನ್ನರಾಗಿ ಬಾಳಬೇಕು. ಯಾವುದೇ ರಾಗದ್ವೇಷಗಳಿಗೆ ಈಡಾದರೆ ಬಾಳು ಹಸನಾಗುವುದಿಲ್ಲ. ಸಾತ್ವಿಕತೆ ಮೈಗೂಡಿಸಿಕೊಳ್ಳಬೇಕಾದರೆ, ಒಳ್ಳೆಯ ಆಚಾರ ಅನುಸರಿಸಬೇಕು. ಒಳ್ಳೆಯ ವಿಚಾರಗಳನ್ನು ಅರಿತು ಆಚರಿಸಿದಾಗ ಬಾಳು ಹಸನಾಗುತ್ತದೆ ಎಂದರು. ಸಮಾರಂಭದಲ್ಲಿ ಡಾ| ಸುಭಾಶ್ಚಂದ್ರ ಕೌಲಗಿ, ಎಸ್.ಎನ್. ಮಿಂಚಿನಾಳ, ಹನುಮಾನ್ ಶೇಠ್ಠ…, ಮಹಾದೇವ ಬಬಲಾದ ಸೇರಿದಂತೆ ಸಹಸ್ರಾರು ಭಕ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.