ಮತ ಚಲಾವಣೆ ಪ್ರತಿಯೊಬ್ಬರ ಹಕ್ಕು: ಕವಿತಾ
Team Udayavani, Mar 17, 2019, 12:03 PM IST
ಯಾದಗಿರಿ: 18 ವರ್ಷ ತುಂಬಿರುವ ಪ್ರತಿಯೊಬ್ಬರು ತಪ್ಪದೇ ಚುನಾವಣೆಯಲ್ಲಿ ಮತ ಚಲಾಯಿಸಬೇಕು ಎಂದು ಜಿಪಂ
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ ಎನ್. ಮನ್ನಿಕೇರಿ ಹೇಳಿದರು.
ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ನಿಮಿತ್ತ ಸಾರ್ವಜನಿಕರಿಗೆ ಮತದಾನದ ಕುರಿತು ಜಾಗೃತಿಗಾಗಿ ರಂಗೋಲಿ ಸ್ಪರ್ಧೆ ಹಾಗೂ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮತ ಚಲಾಯಿಸುವುದು ಪ್ರತಿಯೊಬ್ಬರ ಹಕ್ಕಾಗಿದೆ. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗಬಾರದು. ಜಿಲ್ಲೆಯಲ್ಲಿ ಏಪ್ರಿಲ್ 23ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಪ್ರತಿಯೊಂದು ಮತವೂ ದೇಶದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.
ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ನಾಮಪತ್ರ ಸಲ್ಲಿಕೆ ಕೊನೆ ದಿನ ಅಂದರೆ ಏಪ್ರಿಲ್ 4ರ ವರೆಗೂ ಅವಕಾಶ ಇದೆ.
ಆದ್ದರಿಂದ ಅರ್ಜಿ ನಮೂನೆ 6ರಲ್ಲಿ ಅಗತ್ಯ ದಾಖಲೆಗಳೊಂದಿಗೆ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು. ಕೇವಲ ಚುನಾವಣಾ ಗುರುತಿನ ಚೀಟಿ ಹೊಂದಿದ್ದ ಮಾತ್ರಕ್ಕೆ ಮತದಾರರ ಪಟ್ಟಿಯಲ್ಲಿ ಹೆಸರು ಇದೆ ಎಂದು ಭಾವಿಸಬಾರದು. ಪ್ರಸ್ತುತ ಚಾಲ್ತಿಯಲ್ಲಿರುವ
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು.
ಮತದಾರರ ಪಟ್ಟಿಯಲ್ಲಿನ ಹೆಸರು ಇರುವ ಬಗ್ಗೆ ವೆಬ್‌ಸೈಟ್ http://ceokarnataka.kar.nic.in> ಅಥವಾ ವೋಟರ್
ಹೆಲ್ಪಲೈನ್ ಮೊಬೈಲ್ ಆ್ಯಪ್ ಮೂಲಕ ಹಾಗೂ 1950 ಸಹಾಯವಾಣಿಗೆ ಕರೆ ಮಾಡಿ ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿ ಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ, ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ. ಮಣ್ಣೂರ, ನೈಸರ್ಗಿಕ ಸಂಪನ್ಮೂಲಗಳ ದತ್ತಾಂಶ ನಿರ್ವಹಣಾ ಕೇಂದ್ರದ ಅಧಿಕಾರಿ ಸಿದ್ದಾರೆಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.