ಸಂಭ್ರಮದ ಅಯ್ಯಪ್ಪಸ್ವಾಮಿ ಮಹಾಪೂಜ
Team Udayavani, Jan 2, 2018, 3:54 PM IST
ನಾರಾಯಣಪುರ: ಇಲ್ಲಿನ ಈಶ್ವರ ದೇವಸ್ಥಾನ ಆವರಣದಲ್ಲಿ ರವಿವಾರ ರಾತ್ರಿ ಮಾಲಾಧಾರಿ ಅಯ್ಯಪ್ಪ ಭಕ್ತರು ಅಯ್ಯಪ್ಪಸ್ವಾಮಿ ಮಹಾಪೂಜೆ ಕಾರ್ಯಕ್ರಮವನ್ನು ಭಕ್ತಿ ಭಾವದಿಂದ ನೆರವೇರಿಸಿದರು.
ಜ್ಯೋತಿ ಮೆರವಣಿಗೆ: ಇಲ್ಲಿನ ಗದ್ದೆಮ್ಮ ದೇವಿ ದೇವಸ್ಥಾನದಲ್ಲಿ ಗಿರಿಯಪ್ಪ ಗುರುಸ್ವಾಮಿಗಳ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ಜ್ಯೋತಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಜ್ಯೋತಿಯೊಂದಿಗೆ ಅಯ್ಯಪ್ಪನ ನಾಮಾವಳಿ ಸ್ತುತಿಸುತ್ತಾ ಇಲ್ಲಿನ ಬಜಾರ ಗಣೇಶ ದೇವಸ್ಥಾನಕ್ಕೆ ತೆರಳಿದ ಅಯ್ಯಪ್ಪ ಭಕ್ತರು ಅಲ್ಲಿನ ಗಣೇಶನಿಗೆ ಪೂಜೆ ಸಲ್ಲಿಸಿ, ಮಹರ್ಷಿ ವಾಲ್ಮೀಕಿ ವೃತದಲ್ಲಿ ಕರ್ಪೂರ ಬೆಳಗಿಸಿ ಅಲ್ಲಿಂದ ಯಲ್ಲಾಲಿಂಗ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಾಯಿತು.
ಈಶ್ವರ ದೇವಸ್ಥಾನ ಆವರಣಕ್ಕೆ ಜ್ಯೋತಿ ಪ್ರವೇಶ ಪಡೆದ ನಂತರ ಮಹಾಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಮುದ್ದೇಬಿಹಾಳ ಶಿವು ಗುರುಸ್ವಾಮಿಯವರ ಅಯ್ಯಪ್ಪಸ್ವಾಮಿ ಮೂರ್ತಿಗೆ ಅಭಿಷೇಕ, ಅಲಂಕಾರ ಸೇರಿದಂತೆ 18 ಮೆಟ್ಟಲುಗಳಿಗೆ ಕರ್ಪೂರ ಜ್ಯೋತಿ ಬೆಳಗಿಸಿ, ವಿಶೇಷ ಪೂಜೆ ನೆರವೇರಿಸುವ ಮೂಲಕ ಮಹಾಪೂಜೆ ಕಾರ್ಯಕ್ರಮ ನಡೆಸಿಕೊಟ್ಟರು.
ಮುದ್ದೇಬಿಹಾಳ, ಕೊಡೇಕಲ್, ರಾಜನಕೋಳುರ, ನಾಲತವಾಡ, ಮಿಣಜಗಿ ಸೇರಿದಂತೆ ವಿವಿಧ ಗ್ರಾಮಗಳಿಂದ ಆಗಮಿಸಿದ ಅಯ್ಯಪ್ಪ ಭಕ್ತ ಮಾಲಾಧಾರಿಗಳು, ಸ್ಥಳೀಯ ಅಯ್ಯಪ್ಪ ಭಕ್ತರು, ಅಯ್ಯಪ್ಪನ ನಾಮಾವಳಿ ಸೇರಿದಂತೆ ಭಕ್ತಿಗೀತೆಗಳನ್ನು ಪ್ರಸ್ತುತಪಡಿಸಿ ಭಕ್ತಿ ಮೆರದರು. ಇದೇ ಸಂದರ್ಭದಲ್ಲಿ ಮಹಾಪೂಜೆಯಲ್ಲಿ ಭಾಗವಹಿಸಿದ ಅಯ್ಯಪ್ಪ ಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.