ರೈತರು ತೋಟಗಾರಿಕೆ ಬೆಳೆ ಬೆಳೆಯಲಿ
Team Udayavani, Sep 28, 2018, 12:35 PM IST
ಯಾದಗಿರಿ: ಈ ಭಾಗದಲ್ಲಿ ಬಹುತೇಕ ರೈತರು ಕೃಷಿ ಬೆಳೆಗಳ ಮೇಲೆ ಅವಲಂಬಿತರಾಗಿದ್ದು, ಜೊತೆಗೆ ಆದಾಯ ತರುವ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ಮೂಲಕ ರೈತರು ಆರ್ಥಿಕವಾಗಿ ಸಬಲರಾಗಬೇಕು ಎಂದು ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಹೇಳಿದರು.
ಯಾದಗಿರಿ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಸಭಾಂಗಣದಲ್ಲಿ 2018-19ನೇ ಸಾಲಿನ ತೋಟಗಾರಿಕೆ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಯಾದಗಿರಿ ಜಿಲ್ಲೆ ಸೇರಿದಂತೆ 4 ಜಿಲ್ಲೆಗಳಲ್ಲಿ ಇಸ್ರೇಲ್ ಮಾದರಿಯಲ್ಲಿ ತೋಟಗಾರಿಕೆ ಬೆಳೆಯಲು 150 ಕೋಟಿ ರೂ. ಘೋಷಿಸಿದ್ದು, ಮಾರ್ಗಸೂಚಿ
ಅನ್ವಯ ರೈತರು ಆರ್ಥಿಕ ಸದೃಢರಾಗಲು ಯೋಜನೆ ರೂಪಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ರೈತರಿಗೆ ತೋಟಗಾರಿಕೆ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಅಧಿ ಕಾರಿಗಳು, ತೋಟಗಾರಿಕೆ ಕುರಿತು ಅಗತ್ಯ ತರಬೇತಿ ನೀಡಿ ಜಿಲ್ಲೆಯಲ್ಲಿ ಕೇವಲ 2.807 ಹೆಕ್ಟೇರ್ ತೋಟಗಾರಿಗೆ ಪ್ರದೇಶ ಇದೆ. ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದು ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದು, ಯೋಜನೆಗಳ ಸದುಪಯೋಗ ಪಡೆಯಲು ರೈತರಿಗೆ ಅಗತ್ಯ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪ್ರಸಕ್ತ 6.48 ಕೋಟಿ ರೂಪಾಯಿ ನಿಗದಿಯಾಗಿದ್ದು, 2.59 ಕೋಟಿ ಅನುದಾನ ಬಿಡುಗಡೆಯಾಗಿ 1.28 ಕೋಟಿ ವೆಚ್ಚದಲ್ಲಿ 128.82 ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ಅಳವಡಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ 225.74 ಲಕ್ಷಗಳಲ್ಲಿ 86 ಲಕ್ಷ ರೂಪಾಯಿ ಬಿಡುಗಡೆಯಾಗಿದ್ದು, 17.68 ಲಕ್ಷ ಅನುದಾನ ಖರ್ಚು ಮಾಡಲಾಗಿದೆ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 35.36 ಲಕ್ಷದಲ್ಲಿ 08.96 ಲಕ್ಷ ಅನುದಾನ ಬಿಡುಗಡೆಯಾಗಿದ್ದು, 5 ಲಕ್ಷಕ್ಕೂ ಹೆಚ್ಚು ಅನುದಾನದಲ್ಲಿ ಹಲವು ಯೋಜನೆ ಅನುಷ್ಠಾನಗೊಳಿಸಲಾಗಿದೆ. ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ 258.86 ಲಕ್ಷಗಳಲ್ಲಿ 72 ಲಕ್ಷ ರೂ. ಬಿಡುಗಡೆಯಾಗಿದೆ. ಅದರಲ್ಲಿ 52.73ಲಕ್ಷ ರೂ. ಖರ್ಚು ಮಾಡಲಾಗಿದೆ. ಪ್ರಸಕ್ತ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ 70 ಲಕ್ಷ ರೂ. ನಿಗದಿಯಾಗಿದ್ದು, 15.90 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಜಿಪಂ ಅಧ್ಯಕ್ಷ ಬಸರೆಡ್ಡಿಗೌಡ ಮಾಲಿಪಾಟೀಲ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಿಪಿಒ ಗುರುನಾಥ, ಮಲ್ಲಿಕಾರ್ಜುನ ಬಾಬು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
2018-19ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಒಟ್ಟಾರೆ 4.88 ಹೆಕ್ಟೇರ್ ಪ್ರದೇಶದಲ್ಲಿ ಪಪ್ಪಾಯ ಮತ್ತು ಬಾಳೆ ಬೆಳೆ ಹಾನಿಯಾಗಿದೆ. ಬಹು ವಾರ್ಷಿಕ ಬೆಳೆಗಳಿಗೆ ಪ್ರತಿ ಹೆಕ್ಟೇರ್‌ಗೆ 18,000 ರೂ. ಮತ್ತು ವಾರ್ಷಿಕ ಬೆಳೆಗಳಿಗೆ ಪ್ರತಿ ಹೆಕ್ಟೇರ್‌ಗೆ 6,500 ರೂ. ದಂತೆ ಜಿಲ್ಲಾಧಿಕಾರಿ ನೈಸರ್ಗಿಕ ವಿಪತ್ತು ಪರಿಹಾರ ವಿತರಿಸಲು ಈಗಾಗಲೇ ಜಂಟಿ
ಸಮೀಕ್ಷೆ ಮುಗಿದಿದ್ದು, ಶೀಘ್ರದಲ್ಲಿ ಪರಿಹಾರ ವಿತರಿಸಲಾಗುವುದು.
ಎಂ.ಸಿ. ಮನಗೂಳಿ, ತೋಟಗಾರಿಕೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.