ನೀರು ನಿರ್ವಹಣೆಯಲ್ಲಿ ರೈತರ ಸಹಭಾಗಿತ್ವ ಅಗತ್ಯ; ಶರಣಪ್ಪ

ನೀರಿನ ಬಳಕೆಯ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯವಾಗಬೇಕಿದೆ

Team Udayavani, Jan 21, 2021, 6:21 PM IST

ನೀರು ನಿರ್ವಹಣೆಯಲ್ಲಿ ರೈತರ ಸಹಭಾಗಿತ್ವ ಅಗತ್ಯ; ಶರಣಪ್ಪ

ಶಹಾಪುರ: ನೀರು ಬಳಕೆದಾರ ಸಂಘಗಳ ಪದಾಧಿಕಾರಿಗಳು, ಸದಸ್ಯರು ನೀರು ಬಳಕೆ ಕುರಿತು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಇದರಲ್ಲಿ ರೈತರ ಸಹಭಾಗಿತ್ವ ಅಗತ್ಯವಿದ್ದು, ರೈತರು ನೀರು ನಿರ್ವಹಣೆ ಕುರಿತು ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಚರ್ಚಿಸಿ ಸೂಕ್ತ ಮಾಹಿತಿ ಪಡೆದುಕೊಳ್ಳಬೇಕು ಎಂದು ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ ತಿಳಿಸಿದರು.

ಭೀಮರಾಯನ ಗುಡಿಯ ಕೃಷಿ ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆದ ಕೃಷ್ಣಾ ಕಾಡಾ (ಸಹಕಾರ ವಿಭಾಗ) ಭೀಮರಾಯನ ಗುಡಿವತಿಯಿಂದ ನಡೆದ ನೀರು ಬಳಕೆದಾರರ ಸಹಕಾರ ಸಂಘಗಳ ಪದಾಧಿಕಾರಿ ಹಾಗೂ ಸದಸ್ಯರಿಗೆ ನೀರು ನಿರ್ವಹಣೆ ಹಾಗೂ ಪುನಶ್ಚೇತನ ಕುರಿತ ಕಾರ್ಯಾಗಾರ ಉದ್ಘಾಟನೆ ಮತ್ತು ಬಳಕೆದಾರರ ಸಂಘಗಳಿಗೆ ತಲಾ ಒಂದು ಲಕ್ಷ ರೂ.ಚಕ್‌ ವಿತರಿಸಿ ಅವರು ಮಾತನಾಡಿದರು.

ನೀರಿನ ಬಳಕೆಯ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯವಾಗಬೇಕಿದೆ. ನೀರು ಬಳಕೆ ಕುರಿತು ಸಂಬಂಧಿಸಿದ ಅಧಿಕಾರಿ ಇಲಾಖೆಯೊಂದಿಗೆ ಒಡಂಬಡಿಕೆ ಮತ್ತು ನೀರಿನ ಹಂಚಿಕೆಯಲ್ಲಿ ಸಮಾನತೆ ತರುವ ಕಾರ್ಯ ಸೇರಿದಂತೆ ಭೂಮಿ ಮತ್ತು ನೀರಿನ ಉತ್ಪಾದಕತೆ ಹೆಚ್ಚಿಸಬೇಕಿದೆ. ಆ ನಿಟ್ಟಿನಲ್ಲಿ ಬಳಕೆದಾರರ ಸಂಘ ಮತ್ತು ರೈತರಿಗೆ ಬೇಕಾದ ಸವಲತ್ತುಗಳನ್ನು ಕಲ್ಪಿಸುವ ಯೋಜನೆಗಳನ್ನು ರೂಪಿಸಲಾಗುವುದು. ಅದಕ್ಕೆ ಬೇಕಾದ ಸಮರ್ಪಕ ಕೆಲಸವನ್ನು ನಾನು ಸರ್ಕಾರದ ಜೊತೆ  ಸಂಬಂಧಿಸಿದ ಇಲಾಖೆಯ ಮುಖ್ಯಕಾರ್ಯದರ್ಶಿಗಳ ಜತೆ ಮಾತುಕತೆ ನಡೆಸಿ ರೈತರಿಗೆ ಅನುಕೂಲ ಕಲ್ಪಿಸುವ ಕಾರ್ಯ ಯೋಜನೆ ರೂಪಿಸಲಾಗುವುದು ಎಂದರು.

ಬಳಕೆದಾರರ ಸಂಘದ ಕಚೇರಿ ಹಾಗೂ ಗೋದಾಮು ನಿರ್ಮಾಣಕ್ಕೆ ಇಲಾಖೆಯಿಂದ 7.30 ಲಕ್ಷ ರೂ. ನಿಗದಿಪಡಿಸಲಾಗಿದ್ದು, ಅದರಲ್ಲಿ ಸಂಘವು ಪ್ರತಿಶತ 20ರಂತೆ 1.46 ಲಕ್ಷ ರೂ. ಸಾಲ ಕೊಡಬೇಕಾಗುವುದು. ಅಲ್ಲದೆ ಮೂಲ ಸೌಕರ್ಯ ಒದಗಿಸಲು 3 ಲಕ್ಷ ರೂ.ವರೆಗೆ ಅನುದಾನ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು. ಸದ್ಯ ಶಹಾಪುರ, ಸುರಪುರ, ಜೇವರ್ಗಿ, ಸಿಂದಗಿ, ಇಂಡಿ ವ್ಯಾಪ್ತಿಯ 83 ನೀರು ಬಳಕೆದಾರರ ಸಂಘಗಳಿಗೆ ತಲಾ ಒಂದು ಲಕ್ಷ ರೂ. ಚೆಕ್‌ ವಿತರಿಸಲಾಗಿದೆ.

ಬಳಕೆದಾರರ ಸಂಘಗಳ ಪದಾಧಿ ಕಾರಿಗಳು ಸದಸ್ಯರು ಜಾಗೃತರಾಗಿ ಕಾರ್ಯ ನಿರ್ವಹಿಸುವ ಮೂಲಕ ಪ್ರಗತಿಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೃಷ್ಣಾ ಕಾಡಾ ಆಡಳಿತಾಧಿಕಾರಿ ಶರಣಪ್ಪ ಬೆಣೂರ, ಕಾಡಾ ಮುಖ್ಯ ಲೆಕ್ಕಾಧಿಕಾರಿ ರಾಜಕುಮಾರ, ಕೃಷ್ಣಾ ಕಾಡಾ ಸಹಕಾರ ಸಂಘಗಳ
ಸಹಾಯಕ ನಿಬಂಧಕ ಮಹ್ಮದ್‌ ತಾಹೇರ ಹುಸೇನ್‌, ನೀರು ಬಳಕೆದಾರರ ಮಹಾ ಮಂಡಳ ಅಧ್ಯಕ್ಷ ರಂಗಣ್ಣ ಡೆಂಗಿ, ಕಾಡಾ ನಿರ್ದೇಶಕ ಬಾಗೇಶ ಓತಿನಮಡು
ಇದ್ದರು. ಕಾರ್ಯಗಾರದಲ್ಲಿ ಬಳಕೆದಾರರ ಸಂಘದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.