ಕೊಡೇಕಲ್‌ನಲ್ಲಿ ರೈತ ದಿನಾಚರಣೆ
Team Udayavani, Dec 26, 2021, 12:43 PM IST
ನಾರಾಯಣಪುರ: ರೈತರು ಕೃಷಿಯಲ್ಲಿ ಸಮಗ್ರ ಬೇಸಾಯ ಪದ್ಧತಿ ಅಳವಡಿಸಿಕೊಂಡಲ್ಲಿ ಕೃಷಿಯನ್ನು ಲಾಭದಾಯಕವಾಗಿ ಮಾಡಿಕೊಳ್ಳಬಹುದು ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ರಾಮನಗೌಡ ಮಾಲಿಪಾಟೀಲ ಹೇಳಿದರು.
ಕೊಡೇಕಲ್ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಜರುಗಿದ ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ರೈತರ ಶ್ರೇಯೋಭಿವೃದ್ಧಿಗೆ ಸರ್ಕಾರದಿಂದ ಹಲವಾರು ಯೋಜನೆಗಳು ಜಾರಿಯಲ್ಲಿದ್ದು, ರೈತರು ಸದುಪಯೋಗ ಪಡೆದುಕೊಳ್ಳಬೇಕು. ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸಬೇಕು. ಭೂಮಿ ಅಗತ್ಯಕ್ಕೆ ಅನುಗುಣವಾಗಿ ರಾಸಾಯನಿಕ ಬಳಸುವಂತೆ ಸಲಹೆ ನೀಡಿದರು.
ರೈತ ಮುಖಂಡ ಸಾಯಬಣ್ಣ ಮಾತನಾಡಿದರು. ಇದೇ ಸಂದರ್ಭದಲ್ಲಿ ಪ್ರಗತಿಪರ ರೈತರಾದ ವೀರಸಂಗಪ್ಪ ಹಾವೇರಿ ಮತ್ತು ಆನಂದಪ್ಪ ಅವರನ್ನು ಕೃಷಿ ಇಲಾಖೆಯಿಂದ ಸನ್ಮಾನಿಸಲಾಯಿತು. ಈ ವೇಳೆ ಷಣ್ಮುಖಪ್ಪ ಡೊಣ್ಣಿಗೇರಿ, ಸೋಮಲಿಂಗಪ್ಪ ದೋರಿ, ಬಸವರಾಜ, ರೇವಣಸಿದ್ದಪ್ಪ, ರೇಣುಕಾ, ಭೀಮಬಾಯಿ, ಸೋಮನಗೌಡ, ರವಿ ಸೇರಿದಂತೆ ಇತರರಿದ್ದರು. ಸಹಾಯಕ ಕೃಷಿ ಅಧಿಕಾರಿ ಮಹಾನಂದಿ ಹಡಪದ ನಿರೂಪಿಸಿದರು. ಕಾಶಿಂರಾಮ್ ಸ್ವಾಗತಿಸಿದರು. ಹಣಮಂತ ರಾಮಣ್ಣೊರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.