ಸೌಲಭ್ಯ ಕಲ್ಪಿಸಲು ಪ್ರಥಮ ಆದ್ಯತೆ
Team Udayavani, Feb 25, 2018, 5:37 PM IST
ಶಹಾಪುರ: ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದಿಂದ ಕನ್ಯಾಕೋಳೂರ ಗ್ರಾಮ ಸುತ್ತಲಿನ ಅಂದಾಜು 75 ಹೆಕ್ಟೇರ್ ಪ್ರದೇಶ ಜಮೀನಿಗೆ ನೀರಿನ ಸೌಲಭ್ಯ ದೊರೆಯಲಿದೆ ಎಂದು ಶಾಸಕ ಗುರು ಪಾಟೀಲ್ ಶಿರವಾಳ ಹೇಳಿದರು.
ತಾಲೂಕಿನ ಕನ್ಯಾಕೋಳೂರ ಗ್ರಾಮದ ಸರ್ವೇ ನಂ. 393ರ ಬಳಿ ಸೇತುವೆ ಬಾಂದಾರ ನಿರ್ಮಾಣ ಮತ್ತು ನಿಜಶರಣ
ಅಂಬಿಗರ ಚೌಡಯ್ಯನವರ ಭವನ, ಉರ್ದು ಶಾಲಾ ಕೋಣೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ
ಅವರು ಮಾತನಾಡಿದರು.ಚ ಅಂದಾಜು ಕನ್ಯಾಳೂರ ಗ್ರಾಮ ವ್ಯಾಪ್ತಿ ಜನರಿಗೆ ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳ ಮೂಲಕ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದಿಂದ ಈ ಭಾಗದ ರೈತಾಪಿ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಜಮೀನಿಗೆ ನೀರು ಸೇರಿದಂತೆ, ಈ ಭಾಗದ ಅಂತರಜಲ ಮಟ್ಟ ಹೆಚ್ಚಳವಾಗಲಿದೆ. ಅಂದಾಜು 185 ಎಕರೆ ಪ್ರದೇಶ ಜಮೀನಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಸೇತುವೆ ನಿರ್ಮಾಣದಿಂದ ಕನ್ಯಾಕೋಳೂರ, ಅನವಾರ ಹಯ್ನಾಳ (ಕೆ) ಗ್ರಾಮಗಳ ನಡುವೆ ಜನರ ಸಂಪರ್ಕ ಕಲ್ಪಿಸಲು ಈ ಸೇತುವೆ ನೆರವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಅಮಾತೆಪ್ಪ ಕಂದಕೂರ, ಮಲ್ಲಣ್ಣ ಮಡ್ಡಿ, ಲಾಲನಸಾಬ ಖುರೇಶಿ, ಅಯ್ಯಣ್ಣ ಕನ್ಯಾಕೋಳೂರ, ಅಂಬಣ್ಣ ನಾಟೇ ಕಾರ, ಮಂಜುನಾಥ, ರಾಚಣ್ಣ ಕರದಳ್ಳಿ, ಮಹಾದೇವಪ್ಪ ಜಗಶಟ್ಟಿ, ಮಹಾಂತಯ್ಯ ಸ್ವಾಮಿ, ಶಂಕರಗೌಡ, ಅಯ್ಯಣ್ಣ, ಬನ್ನಪ್ಪ ನಾಟೇಕಾರ, ಶಾಂತಪ್ಪ, ಶರಣಪ್ಪ ಶಿರವಾಳ, ಶರಣಬಸ್ಸಪ್ಪಗೌಡ, ರಾಜಶೇಖರ ಮಲ್ಹಾರ, ಸುರೇಶ ಹೊಸಮನಿ, ಮಲ್ಲಪ್ಪ ಬೇವಿನಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.