ಎಫ್‌ಎಂಡಿ ಲಸಿಕಾ ಅಭಿಯಾನ
Team Udayavani, Oct 31, 2021, 4:36 PM IST
ನಾರಾಯಣಪುರ: ಸರ್ಕಾರಿ ಪಶು ಆಸ್ಪತ್ರೆ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿನ ಜಾನುವಾರುಗಳಿಗೆ ಎಫ್‌ಎಂಡಿ ಲಸಿಕೆ ಹಾಕಲಾಗುತ್ತಿದೆ ಎಂದು ಪಶು ಆಸ್ಪತ್ರೆಯ ವೈದ್ಯ ಡಾ| ಮಹಬೂಬ ಸಾಹೇಬ ಖಾಜಿ ಹೇಳಿದರು.
ಪಶು ಆಸ್ಪತ್ರೆ ವ್ಯಾಪ್ತಿಯ ಗ್ರಾಮಗಳ ಜಾನುವಾರುಗಳಿಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 3ನೇ ಸುತ್ತಿನ ಎಫ್ ಎಂಡಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾಲು ಬಾಯಿ ರೋಗ ನಿಯಂತ್ರಣಕ್ಕೆ ಎಫ್‌ಎಂಡಿ ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿದೆ. ಪೂರ್ವಭಾವಿಯಾಗಿ ಹಾಕುವ ಲಸಿಕೆಯಿಂದ ಪಶುಗಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ರೋಗ ಬರದಂತೆ ತಡೆಗಟ್ಟುತ್ತದೆ. ಲಸಿಕಾ ಅಭಿಯಾನವು ನ.20ರ ವರೆಗೆ ನಡೆಯಲಿದೆ. ಇಲಾಖೆಯವರು ಲಸಿಕೆ ಹಾಕಲು ಬಂದಾಗ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಲು ಸಹಕಾರ ನೀಡುವ ಮೂಲಕ ಯೋಜನೆಯ ಸದುಪಯೋಗ ಪಡೆಯಬೇಕು ಎಂದರು.
ಚನ್ನಯ್ಯ, ಲಿಂಗಪ್ಪ, ಸೊಯಲ್ ಗುಲಾಮ, ವಿನೋಧ, ಪುಂಡಲಿಕ, ಮಹ್ಮದ್ ಚೌದ್ರಿ, ಗ್ರಾಮದ ಭೀಮನಗೌಡ, ಶಣ್ಮುಕಪ್ಪಗೌಡ, ಸೋಮನಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.