ರೈತರ ಹೆಸರಲ್ಲಿ ವಂಚನೆ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Oct 10, 2018, 4:27 PM IST
ಯಾದಗಿರಿ: ತಾಲೂಕಿನ ನೀಲಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಉಮೇಶ ಕವಡಿ ಅಮಾಯಕ ರೈತರ ಹೆಸರಿನಲ್ಲಿ ವಂಚನೆ ಮಾಡಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ನೀಲಹಳ್ಳಿ ಗ್ರಾಮದ ರೈತರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ
ಸಹಕಾರಿ ಸಚಿವರಿಗೆ ಮನವಿ ಸಲ್ಲಿಸಿದರು.
ಕಳೆದ 1994ರಿಂದಲೂ ಉಮೇಶ ಕವಡಿ ಇಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ ಪುಡಾರಿಗಳು, ಪಟ್ಟಭದ್ರಹಿತಾಸಕ್ತಿಗಳನ್ನು ಕಟ್ಟಿಕೊಂಡು ಅಮಾಯಕ ರೈತರ ಹೆಸರಿನಲ್ಲಿ ಅವ್ಯವಹಾರ ಮಾಡುತ್ತ ಬಂದಿದ್ದಾರೆ ಎಂದು ರೈತರು ದೂರಿದ್ದಾರೆ.
ಸೆ. 05ರಂದು ಜರುಗಿದ ಸಂಘದ ಮಾಸಿಕ ಸಭೆಯಲ್ಲಿ ಸದಸ್ಯರು ವಿಚಾರಿಸಿದಾಗ, ಸಂಘದಲ್ಲಿ ಸತ್ತವರ ಹೆಸರನ್ನು ನಮೂದಿಸಿ ತಾನೇ ಹಣವನ್ನು ಎತ್ತಿ ಹಾಕಿದ್ದಾನೆ. ಇದನ್ನು ಕೇಳಿದರೆ ನಾನೇ ಹಣ ತೆಗೆದುಕೊಂಡಿದ್ದೇನೆ ಏನು ಮಾಡಿಕೊಳ್ಳುತ್ತೀರಿ ಮಾಡಿಕೊಳ್ಳಿ ಎಂದು ನಿರ್ದೇಶಕ ಬಸವರಾಜಪ್ಪ ಗೌಡಗೇರಿಗೆ ಉಡಾಫೆ ಉತ್ತರ ನೀಡಿ,
ನನಗೇನು ಅಂಜಿಕೆ ಇಲ್ಲ, ಏನು ಮಾಡಿಕೊಳ್ಳುತ್ತೀರಿ ಮಾಡಿಕೊಳ್ಳಿ ಹೋಗಿ ಎಂದು ಗದರಿಸಿ ಅವಾಜ್ ಹಾಕಿದ್ದಾನೆಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖೀಸಲಾಗಿದೆ.
ಈಗಾಗಲೇ ಸಂಬಂಧಪಟ್ಟ ಅಧಿಕಾರಿಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಘಟನೆ ಬಗ್ಗೆ ತನಿಖಾ ತಂಡ ರಚಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹಂತ ಹಂತವಾಗಿ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಟೋಕರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಕೆ. ಮುದ್ನಾಳ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಬಸವರಾಜ ನಾಯಕ, ಸದಾಶಿವರಡ್ಡಿ ಪಾಟೀಲ, ಸಾಬಣ್ಣ ಎಸ್, ನರಸಪ್ಪ, ಬಸವರಾಜ, ಮಲ್ಲಪ್ಪ,
ಭೀಮರಾಯ, ಸಿದ್ರಾಮಪ್ಪ, ಶಿವಶಂಕರ ಎಸ್. ಬಾಗ್ಲಿ, ಮುದ್ದಣ್ಣಗೌಡ, ಕಾಶಪ್ಪ, ಸಾಬಣ್ಣ ಆರ್, ಶ್ರೀನಿವಾಸ ನಾಯಕ,
ತಿಪ್ಪಣ್ಣ, ಯಂಕಪ್ಪ, ಸೂಗಪ್ಪ, ಖತಲಪ್ಪ ಸೇರಿದಂತೆ ಅನೇಕ ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.