ಆಧುನಿಕ ತಂತ್ರಜ್ಞಾನದಿಂದ ಹೆಚ್ಚಿನ ಲಾಭ ಪಡೆಯಿರಿ: ಕಂದಕೂರ
Team Udayavani, Jun 10, 2022, 3:26 PM IST
ಗುರುಮಠಕಲ್: ರೈತರು ಬೆಳೆದರೆ ಮಾತ್ರ ಜಗತ್ತು ಬದುಕಲು ಸಾಧ್ಯ. ಆದರೆ ರೈತರು ಮಾತ್ರ ಸಮಸ್ಯೆಗಳಲ್ಲಿರುವುದು ನೋವಿನ ಸಂಗತಿ. ಹೀಗಾಗಿ ರೈತರು ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಹೆಚ್ಚಿನ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕ ನಾಗನಗೌಡ ಕಂದಕೂರ ಹೇಳಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಜರುಗಿದ ಮುಂಗಾರು ಬಿತ್ತನೆ ಬೀಜ ವಿತರಣೆ, ಸಮಗ್ರ ಕೃಷಿ ಅಭಿಯಾನ ಹಾಗೂ ಜಲಾನಯನ ಯೋಜನೆಯಡಿ ಕೋಟಿ ವೃಕ್ಷಾಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮದು ಮಳೆಯಾಧಾರಿತ ಕೃಷಿ ಪ್ರದೇಶ. ಸರಿಯಾಗಿ ಮಳೆಯಾಗದಿದ್ದರೆ ಬೀಜ, ರಸಗೊಬ್ಬರ, ಕೃಷಿ ಚಟುವಟಿಕೆಗಳಿಗೆ ಮಾಡಿದ ಖರ್ಚು ಎಲ್ಲವೂ ನಷ್ಟವಾಗುತ್ತದೆ. ಬೀಜ, ಗೊಬ್ಬರ, ಖರೀದಿಸುವ ಕುರಿತು ಕೃಷಿ ಇಲಾಖೆಯವರು ರೈತರಿಗೆ ಅಗತ್ಯ ಮಾರ್ಗದರ್ಶನ ಹಾಗೂ ಸಹಾಯ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.
ಸಹಾಯಕ ಕೃಷಿ ನಿರ್ದೇಶಕ ಶ್ವೇತಾ ತಾಳೆಮರದ ಹಾಗೂ ಅರಣ್ಯ ಇಲಾಖೆ ಎಸಿಎಫ್ ಶಿವಶರಣಪ್ಪ ಅವರು ಮಾತನಾಡಿದರು. ಸಾಂಕೇತಿಕವಾಗಿ ವೇದಿಕೆಯ ಮೇಲೆ ರೈತರಿಗೆ ಶಾಸಕರು ಬಿತ್ತನೆ ಬೀಜ ಹಾಗೂ ಸಸಿಗಳನ್ನು ವಿತರಿಸಿದರು.
ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ಉಪಾಧ್ಯಕ್ಷೆ ಭೀಮಮ್ಮ ಮುಕುಡಿ, ಕೇದಾರನಾಥ ಹಿರೇಮಠ, ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ಅವುಂಟೆ, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಪ್ರಕಾಶ ನಿರೇಟಿ, ಎಪಿಎಂಸಿ ಮಾಜಿ ಜಿಲ್ಲಾಧ್ಯಕ್ಷ ಬಸಣ್ಣ ದೇವರಳ್ಳಿ, ಎಪಿಎಂಸಿ ಸದಸ್ಯ ಅನಂತಪ್ಪ ಯದ್ಲಾಪುರ, ಪುರಸಭೆ ಸದಸ್ಯ ಆಶನ್ನ ಬುದ್ದ, ಭೀಮಶಪ್ಪ ಗುಡಿಸೆ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.