ಪ್ರತಿಭಾ ಸಂಪನ್ನರಿಗೆ ಪ್ರೋತ್ಸಾಹ ಅಗತ್ಯ: ಪೂಜಾರಿ
ಶಾಲೆಗೆ ಬರುವ ಮಕ್ಕಳಲ್ಲಿ ಯಾವ ಪ್ರತಿಭೆ ಇರುತ್ತದೆ ಎಂಬುದು ಗೊತ್ತಿರುವುದಿಲ್ಲ
Team Udayavani, Sep 5, 2022, 6:35 PM IST
ಯಾದಗಿರಿ: ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿನ ಹಲವು ಶಾಲಾ ಮಕ್ಕಳಲ್ಲಿ ಪ್ರತಿಭಾ ಸಂಪನ್ನರಿದ್ದಾರೆ. ಅವರಿಗೆ ಪ್ರೋತ್ಸಾಹದ ಅಗತ್ಯವಿದ್ದು, ಪ್ರತಿಯೊಬ್ಬ ಸಾಮಾಜಿಕ ಕಾಳಜಿಯುಳ್ಳವರು ಪ್ರತಿಭಾ ಪೋಷಣೆ ಮಾಡಬೇಕು ಎಂದು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಪೂಜಾರಿ ಹೇಳಿದರು.
ಇಲ್ಲಿನ ದಿ| ತಿಮ್ಮಣ್ಣ ಹೆಡಗಿಮದ್ರಾ ಶಾಲೆ ಆವರಣದಲ್ಲಿ ಯಾದಗಿರಿ ಗ್ರಾಮೀಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಕ್ಕಳಿಗೆ ಇಂತಹ ವೇದಿಕೆಗಳು ಒದಗಿಸಿ ಕೊಟ್ಟಾಗ ಅವರಲ್ಲಿರುವ ಸೂಪ್ತ ಪ್ರತಿಭೆ ಬಹಿರಂಗಗೊಂಡು ಅವರ ಸಮಗ್ರ ವಿಕಾಸಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತರೆಡ್ಡಿ ಮಾತನಾಡಿ, ಶಾಲಾ ಹಂತದಲ್ಲಿಯೇ ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಅಭಿಪ್ರಾಯುಪಟ್ಟರು. ಶಾಲೆಗೆ ಬರುವ ಮಕ್ಕಳಲ್ಲಿ ಯಾವ ಪ್ರತಿಭೆ ಇರುತ್ತದೆ ಎಂಬುದು ಗೊತ್ತಿರುವುದಿಲ್ಲ. ಇಂತಹ ವೇದಿಕೆಗಳು ಸಿಕ್ಕಾಗ ಅದನ್ನು ಬಹಿರಂಗ ಪಡಿಸಲು ಸಾಧ್ಯವಾಗುತ್ತದೆ. ಶಿಕ್ಷಕರಿಗೂ ಈ ಕಾರ್ಯಕ್ರಮದಿಂದಾಗಿ ತಮ್ಮ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ಚಿಂತನೆಗೆ ಹಚ್ಚುತ್ತದೆ ಎಂದರು.
ಶಿಕ್ಷಣ ಸಂಯೋಜಕ ಶರಣಗೌಡ ಬಿರಾದಾರ, ಬಿಆರ್‌ಪಿ ಬಂದಪ್ಪ ಐರೆಡ್ಡಿ, ನೌಕರರ ಸಂಘದ ಮಹೇಶ ಪಾಟೀಲ್, ಶಿಕ್ಷಕರ ಸಂಘದ ವೆಂಕಟರೆಡ್ಡಿ, ರಮೇಶಕುಮಾರ ಇಟೆ, ಜಯಶ್ರೀ, ಶಾಲೆಯ ಮುಖ್ಯಗುರು ಜೈನ್, ಶಿಕ್ಷಕರಾದ ಶರಣಪ್ಪ ಹೆಡಗಿಮುದ್ರಿ, ಕೊಲಿವಾಡ ಶಾಲೆ ಶಿಕ್ಷಕಿ ಶ್ರೀದೇವಿ, ಸಿಆರ್‌ಪಿ ಗುಂಡೂರಾವ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.