ಜಿಪಂ ಉಪಾಧ್ಯಕ್ಷೆಯಾಗಿ ಗಿರಿಜಮ್ಮ ಅವಿರೋಧ ಆಯ್ಕೆ
Team Udayavani, Jan 24, 2019, 11:56 AM IST
ಯಾದಗಿರಿ: ಜಿಪಂ ಉಪಾಧ್ಯಕ್ಷೆಯಾಗಿದ್ದ ನಗನೂರ ಜಿಪಂ ಕ್ಷೇತ್ರದ ಚಂದ್ರಕಲಾ ಶರಣಗೌಡ ಉಪಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ಬುಧವಾರ ಎರಡನೇ ಅವಧಿಗೆ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಜಿಪಂ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತ ಸುಬೋಧ್ ಯಾದವ್ ಅಧ್ಯಕ್ಷತೆಯಲ್ಲಿ ಯಾದಗಿರಿ ಜಿಪಂ ತೆರವಾದ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಸಂಬಂಧ ನಡೆದ ವಿಶೇಷ ಸಭೆಯಲ್ಲಿ ಗಿರಿಜಮ್ಮ ಸದಾಶಿವಪ್ಪ ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಾದೇಶಿಕ ಆಯುಕ್ತರು, ಈ ಬಾರಿ ಜಿಪಂ ಉಪಾಧ್ಯಕ್ಷರ ಸ್ಥಾನವು ಸಾಮಾನ್ಯ ಮಹಿಳೆ ವರ್ಗಕ್ಕೆ ಮೀಸಲಿದೆ. ತೆರವಾದ ಅವಧಿಗಾಗಿ ಗಿರಿಜಮ್ಮ ಸದಾಶಿವಪ್ಪ ಮಾತ್ರ 2 ನಾಮಪತ್ರ ಸಲ್ಲಿಸಿದ್ದು, ಪರಿಶೀಲನೆ ವೇಳೆ ಎರಡೂ ಕ್ರಮಬದ್ಧವಾಗಿದ್ದವು. ನಾಮಪತ್ರ ಹಿಂಪಡೆಯಲು ಎರಡು ನಿಮಿಷ ಕಾಲಾವಕಾಶ ನೀಡಲಾಯಿತು. ತಮ್ಮ ಉಮೇದುವಾರಿಕೆ ವಾಪಸ್ ಪಡೆಯಲಿಲ್ಲವಾದ್ದರಿಂದ ಚುನಾವಣೆ ನಡೆಸದೇ ಗಿರಿಜಮ್ಮ ಸದಾಶಿವಪ್ಪ ಅವರನ್ನು ಅವಿರೋಧ ಆಯ್ಕೆ ಮಾಡಿ ಘೋಷಿಸಲಾಯಿತು ಎಂದು ತಿಳಿಸಿದರು.
ಜಿಪಂ ತುಮಕೂರ ಕ್ಷೇತ್ರದ ಪ್ರತಿನಿಧಿಯಾಗಿರುವ ಗಿರಿಜಮ್ಮ ಸದಾಶಿವಪ್ಪ ಅವರನ್ನು ಪ್ರಾದೇಶಿಕ ಆಯುಕ್ತರಾದ ಸುಬೋಧ್ ಯಾದವ್, ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್ ವಜ್ಜಲ್, ಜಿಪಂ ಸದಸ್ಯರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಪಂ 15 ಸದಸ್ಯರು ಹಾಜರಿದ್ದರೆ, 9 ಸದಸ್ಯರು ಗೈರಾಗಿದ್ದರು. ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಜಿಪಂ ಉಪ ಕಾರ್ಯದರ್ಶಿ ವಸಂತ ವಿ.ಕುಲಕರ್ಣಿ ಇತರರು ಉಪಸ್ಥಿತರಿದ್ದರು.
ಕಾಂಗ್ರೆಸ್‌ನಿಂದ ಸರಳ ಸಂಭ್ರಮಾಚರಣೆ: ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿರುವುದರಿಂದ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಇರುವುದರಿಂದ ಬುಧವಾರ ಜಿಪಂ 2ನೇ ಅವಧಿಗೆ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಗಿರಿಜಮ್ಮ ಸದಾಶಿವಪ್ಪ ಪಾಟೀಲ್ ರೊಟ್ನಡಿಗಿ ಅವರನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಸರಳವಾಗಿ ಶುಭ ಕೋರಿದರು.
ಮಾಜಿ ಸಚಿವ ಡಾ.ಎ.ಬಿ. ಮಾಲಕರೆಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಗೌಡ ಪಾಟೀಲ್ ಹುಲಕಲ್, ಬಸರೆಡ್ಡಿಗೌಡ ಪಾಟೀಲ್ ಅನಪೂರ, ಬಸವರಾಜಪ್ಪಗೌಡ ವಡಗೇರಾ, ಶ್ರೀನಿವಾಸರೆಡ್ಡಿ ಕಂದಕೂರ, ಅಶೋಕರೆಡ್ಡಿ ಗೋನಾಲ್, ಸಿದ್ಧಲಿಂಗರೆಡ್ಡಿ ಉಳ್ಳೆಸೂಗುರ, ಮಂಜುಳಾ ಗೂಳಿ, ಬಸವಂತರೆಡ್ಡಿ, ಸಾಹು ಹತ್ತಿಗೂಡುರು, ಬಸ್ಸುಗೌಡ ಬಿಳಾØರ್, ಜಹೀರ್‌ಸಾಬ್, ಬಸವರಾಜ ಸೊನ್ನದ, ಮಹಿಪಾಲರೆಡ್ಡಿ ಹತ್ತಿಕುಣಿ, ಮರೆಪ್ಪ ಬಿಳಾØರ, ಚಂದ್ರಶೇಖರ್ ಗೋನಾಲ್, ನಾಗರಾಜ ತುಮಕೂರ, ನಂದಣ್ಣಗೌಡ ಹೊರಟೂರ, ರಾಘವೇಂದ್ರ ಮಾನಸ್‌ಗಲ್, ಸುರೇಶ ಜೈನ್, ಮಾಣಿಕರೆಡ್ಡಿ ಕುರಕುಂದಿ, ಮಲ್ಲಪ್ಪ ಶಿವಪುರ, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.