ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕೃತಿ ನೀಡಿ
Team Udayavani, Nov 15, 2017, 4:54 PM IST
ಯಾದಗಿರಿ: ಇಂದಿನ ಮಕ್ಕಳು ಮುಂದೆ ದೇಶ ಸದೃಢಗೊಳಿಸುವ ಉತ್ತಮ ಪ್ರಜೆಗಳಾಗಲಿದ್ದಾರೆ. ಆದ್ದರಿಂದ ಅವರಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಜಿಲ್ಲಾಕಾರಿ ಜೆ. ಮಂಜುನಾಥ ಹೇಳಿದರು. ನಗರದ ಜಿಲ್ಲಾ ಬಾಲ ಭವನ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸೊಸೈಟಿ, ಯಾದಗಿರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮತ್ತು ಸರಕಾರಿ ಬಾಲಕಿಯರ ಬಾಲಮಂದಿರ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ-1098 ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಹಾಗೂ ಕಲಾಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಆತ್ಮಸ್ಥೈರ್ಯ ತುಂಬಬೇಕಾಗಿರುವುದು ಪ್ರತಿಯೊಬ್ಬ ಪಾಲಕರ ಕರ್ತವ್ಯ. ಮಕ್ಕಳಿಗೆ ಒತ್ತಡ ಹಾಕದೆ ಒಳ್ಳೆಯ ಸಂಸ್ಕೃತಿ, ಶಿಕ್ಷಣ ನೀಡಿದಾಗ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಾಧ್ಯ, ಮಾಜಿ ಪ್ರಧಾನಿ ಜವಾಹರಲಾಲ
ನೆಹರು ಅವರಿಗೆ ಮಕ್ಕಳೆಂದರೆ ಅತೀ ಪ್ರೀತಿ, ಹೀಗಾಗಿ ಅವರ ಜನ್ಮದಿನದ ನೆನಪಿಗಾಗಿ ಮಕ್ಕಳ ದಿನಚಾರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ಚಿಕ್ಕ ವಯಸ್ಸಿನಲ್ಲಿಯೇ ಪಾಲಕರು ಬಾಲ್ಯ ವಿವಾಹ ಮಾಡುವುದರಿಂದ ಮುಂದಿನ ಭವಿಷ್ಯ ರೂಪಿಸಿಕೊಳ್ಳಬೇಕಾದ ಮಕ್ಕಳು ಅನ್ಯದಾರಿ ಹಿಡಿಯುವಂತಾಗುತ್ತದೆ. ಲೈಂಗಿಕ ದೌರ್ಜನ್ಯ ಸೇರಿದಂತೆ ಮಕ್ಕಳ ಮೇಲಿನ ಪ್ರಕರಣಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ ಹಕ್ಕುಗಳ ಉಲ್ಲಂಘನೆ ನಿಯಂತ್ರಿಸಲು ಸಾಧ್ಯವಾಗಿಲ್ಲ ಎಂದು
ಅವರು ವಿಷಾದಿಸಿದರು. ಮನುಷ್ಯನು ಮೊದಲು ತನ್ನ ಮನಸ್ಸು ಪರಿವರ್ತನೆ ಮಾಡಿಕೊಂಡಾಗ ಮಾತ್ರ ಸಾಮಾಜಿಕ
ಪಿಡುಗಗಳನ್ನು ಹೋಗಲಾಡಿಸಬಹುದಾಗಿದೆ.
ಹೀಗಾಗಿ ಪ್ರತಿಯೊಬ್ಬರು ಮನಸ್ಸು ಹತೋಟಿಯಲ್ಲಿಟ್ಟುಕೊಂಡು ಸಹೋದರತೆ, ಮಾನವೀಯತೆಯ ಬದುಕು ನಡೆಸಿದಾಗ ಮಕ್ಕಳ ಮೇಲೆ ಆಗುವ ದೌರ್ಜನ್ಯ, ಅನಾಹುತಗಳನ್ನು ಹತೋಟಿಗೆ ತರಲು ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳು ಕೂಡ ಆತ್ಮ ರಕ್ಷಣೆಗೆ ಕರಾಟೆ ಇನ್ನಿತರ ಪ್ರಯೋಗಗಳನ್ನು ಕಲಿಯಬೇಕಾಗಿದೆ ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ 300 ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಿಸಲಾಗುತ್ತಿದ್ದು, ಇದಕ್ಕಾಗಿ ಜಾಗವನ್ನು ಪರಿಶೀಲಿಸಿ ಅತೀ ಶೀಘ್ರವಾಗಿ ಪ್ರಾರಂಭಿಸಲಾಗುತ್ತಿದೆ. ಅಲ್ಲದೆ ಈ ಒಂದು ಕಟ್ಟಡಕ್ಕೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಡಿಯಲ್ಲಿ 8 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ ಎಂದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಹಣಮಂತ್ರಾಯ ಕರಡಿ ಮಾತನಾಡಿ, ಮಕ್ಕಳಲ್ಲಿನ ಪ್ರತಿಭೆಗಳ ಅನಾವರಣಗೊಳಿಸಲು ಸೂಕ್ತ ವೇದಿಕೆ
ಕಲ್ಪಿಸಿಬೇಕಾಗಿದೆ. ಪ್ರತಿಭೆಗಳಿಗೆ ಸ್ಪೂರ್ತಿ ತುಂಬಿದಾಗ ಉನ್ನತ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಬಾಲವಿಕಾಸ ಅಕಾಡೆಮಿ ಸದಸ್ಯ ಪ್ರಕಾಶ ಅಂಗಡಿ ಕನ್ನಳ್ಳಿ ಮಾತನಾಡಿದರು. ಇದೇ ವೇಳೆ ವಿವಿಧ ಸಾಧನೆಗೈದ ಮಕ್ಕಳಿಗೆ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಹಣಮಂತ್ರಾಯ ಕರಡಿ,
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಚಂದ್ರಶೇಖರ ಅಲ್ಲಿಪುರ, ಬಾಲ ಭವನ ಸೊಸೈಟಿ ಸದಸ್ಯೆ ಮಲ್ಲಮ್ಮ ಕೋಮರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಮಾಳಪ್ಪ, ಬಿ.ಜಿ. ಪಾಟೀಲ,
ಚಂದ್ರಶೇಖರ ಲಿಂಗದಳ್ಳಿ, ನಿರ್ಮಲಾ, ಚಂದ್ರಶೇಖರ ಕಟ್ಟಿಮನಿ, ಶರಣಪ್ಪ ಖ್ಯಾತನಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಕಾಂತ ಕುಲಕರ್ಣಿ, ಮಹಿಳಾ ಕಲ್ಯಾಣ ಅಧಿಕಾರಿ ಶರಣಪ್ಪ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.