ಸರ್ಕಾರಿ ನೌಕರರ ಕ್ರೀಡಾಕೂಟಕೆ ಚಾಲನೆ
ನೌಕರರು ಕ್ರೀಡಾಕೂಟಕ್ಕೆ ಹೆಚ್ಚಿನ ಒತ್ತು ನೀಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ
Team Udayavani, Feb 19, 2021, 6:16 PM IST
ಯಾದಗಿರಿ: ವರ್ಷವೀಡಿ ಒತ್ತಡದಿಂದ ಕೆಲಸ ಮಾಡುವ ನೌಕರರಿಗೆ ಕ್ರೀಡಾಕೂಟ ಪುನಃ ಶ್ಚೇತನ ಕಾರ್ಯಕ್ರಮ ಇದ್ದಂತೆ ಎಂದು ಜಿಲ್ಲಾಧಿ ಕಾರಿ ಡಾ| ರಾಗಪ್ರಿಯಾ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವಿವಿಧ ಇಲಾಖೆಗಳು ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆಗಳಲ್ಲಿ ಗೆಲ್ಲುವುದು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಹಾಗೆಯೇ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳಬೇಕು. ದಿನನಿತ್ಯದ ಕರ್ತವ್ಯದಿಂದ ಹೆಚ್ಚಿನ ಒತ್ತಡಕ್ಕೆ ಒಳಗಾಗುವುದು ಸಹಜ. ಎಲ್ಲರೂ ಕೂಡಿ ಆಟ ಆಡಿ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ ಮನಸ್ಸು ಉಲ್ಲಾಸದಿಂದಿರುತ್ತದೆ ಎಂದರು.
ನೌಕರರು ಕ್ರೀಡಾಕೂಟಕ್ಕೆ ಹೆಚ್ಚಿನ ಒತ್ತು ನೀಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇಲಾಖೆಯ ಕಾರ್ಯನಿರ್ವಹಿಸುತ್ತಿರುವ ನೌಕರರು ಹಲವು ಒತ್ತಡಗಳಿಂದ ಹೊರ ಬಂದು ನೆಮ್ಮದಿಯುಳ್ಳ ಜೀವನ ನಡೆಸಬೇಕಾದರೆ ಕ್ರೀಡೆ ಅತಿ ಅವಶ್ಯಕವಾಗಿದೆ ಎಂದರು.
ಜಿಪಂ ಅಧ್ಯಕ್ಷ ಬಸನಗೌಡ ಎಸ್.ಪಾಟೀಲ್ ಯಡಿಯಾಪೂರ, ಜಿಪಂ ಸಿಇಒ ಶಿಲ್ಪಾ ಶರ್ಮಾ ಮಾತನಾಡಿದರು. ಜಿಪಂ ಉಪಾಧ್ಯಕ್ಷೆ ಗಿರಿಜಮ್ಮಾ ರೋಟ್ನಡಗಿ, ನಗರಸಭೆ ಅಧ್ಯಕ್ಷ ವಿಲಾಸ ಬಿ. ಪಾಟೀಲ್, ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಋಷಕೇಶ ಸೋನಾವಣೆ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರಡ್ಡಿ ಮಾಲಿ ಪಾಟೀಲ್, ಯುವ ಸಬಲೀಕರಣ ಮತ್ತು
ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ
ರಾಜು ಬಾವಿಹಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.